Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವಕಪ್‌ಗೆ ಭಾರತದ 4ನೇ ಕ್ರಮಾಂಕದ ಬ್ಯಾಟ್ಸ್ಮನ್ ಆರಿಸಿದ ರಿಕಿ ಪಾಂಟಿಂಗ್!

Ricky Ponting has a surprise pick for India’s No. 4 at 2019 World Cup

ಸಿಡ್ನಿ, ಮಾರ್ಚ್ 16: ಇನ್ನು ಕೆಲವೇ ತಿಂಗಳುಗಳಲ್ಲಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು, ಟೀಮ್ ಇಂಡಿಯಾಕ್ಕೆ 4ನೇ ಕ್ರಮಾಂಕದಲ್ಲಿ ಸೂಕ್ತ ಆಟಗಾರನ ಆಯ್ಕೆ ಗೊಂದಲ ಬಗೆ ಹರಿದಂತೆ ಕಾಣುತ್ತಿಲ್ಲ. ವಿಶ್ವಕಪ್ ವೇಳೆಗೆ ಭಾರತದ 4ನೇ ಕ್ರಮಾಂಕಕ್ಕೆ ಸೂಕ್ತವೆನಿಸುವ ಆಟಗಾರನನ್ನು ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಆರಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಮಧ್ಯಮ ಬ್ಯಾಟಿಂಗ್ ಕ್ರಮಾಂಕ ಚೆನ್ನಾಗಿಲ್ಲವೆನ್ನುವುದಕ್ಕೆ ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲು ಸಾಕ್ಷಿ ಹೇಳಿತ್ತು. ಮಧ್ಯಮ ಕ್ರಮಾಂಕದಲ್ಲಿ ಬೇರೆ ಬೇರೆ ಆಟಗಾರರನ್ನು ತಂದು ಬಿಸಿಸಿಐ ಪ್ರಯೋಗ ನಡೆಸಿತಾದರೂ ಯಾರೂ ಸ್ಥಿರ ಎಂಬಂತೆ ಕಾಣಲಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅಂಬಾಟಿ ರಾಯುಡು, ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಈ ಮೂವರು ಆಟಗಾರರು 4ನೇ ಕ್ರಮಾಂಕದಲ್ಲಿ ಅದೃಷ್ಟ ಪರೀಕ್ಷೆ ನಡೆಸಿದ್ದರು. ಆದರೆ ರಿಕಿ ಪಾಂಟಿಂಗ್ ಅವರು ಯುವ ಆಟಗಾರ ಶ್ರೇಯಸ್ ಐಯ್ಯರ್ 4ನೇ ಕ್ರಮಾಂಕಕ್ಕೆ ಸೂಕ್ತ ಎಂದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಜವಾಬ್ದಾರಿ ಹೊತ್ತುಕೊಂಡಿರುವ ಪಾಂಟಿಂಗ್‌ಗೆ, ಶ್ರೇಯಸ್ ಐಯ್ಯರ್ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಅರಿವಿದೆ. ಹೀಗಾಗಿ ವಿಶ್ವಕಪ್ ವೇಳೆ ಶ್ರೇಯಸ್ 4ನೇ ಕ್ರಮಾಂಕಕ್ಕೆ ಸೂಕ್ತ ಎಂದು ಅವರು ಅಭಿಪ್ರಾಯಿಸಿದ್ದಾರೆ. ಇದಕ್ಕೂ ಮುನ್ನ ಸೌರವ್ ಗಂಗೂಲಿ ಅವರು ಚೇತೇಶ್ವರ ಪೂಜಾರ ಅವರನ್ನು 4ನೇ ಕ್ರಮಾಂಕಕ್ಕೆ ಸೂಚಿಸಿದ್ದನ್ನು ಸ್ಮರಿಸಬಹುದು.

Story first published: Saturday, March 16, 2019, 13:07 [IST]
Other articles published on Mar 16, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+