ಬಾರ್ಡರ್ ಗವಾಸ್ಕರ್ ಸರಣಿಯನ್ನು ಇದೇ ತಂಡ ಗೆಲ್ಲಲಿದೆ: ಪಾಂಟಿಂಗ್ ಭವಿಷ್ಯ
ಕ್ರಿಕೆಟ್ ಅಭಿಮಾನಿಗಳ ಚಿತ್ತ ಈಗ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿಯ ಮೇಲೆ ನೆಟ್ಟಿದೆ. ಈ ಸರಣಿ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸುವ ದೃಷ್ಟಿಯಿಂದ ಈ ಸರಣಿ ಭಾರೀ ಇಂಪಾರ್ಟೆಂಟ್. ಇನ್ನೇನು ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಲಿದೆ. ಈ ಸರಣಿಗೂ ಮುನ್ನ ಹಲವು ಚರ್ಚೆಗಳು ಆರಂಭವಾಗಿವೆ.
ಈ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಮಾಜಿ ಆಟಗಾರರು ತಮ್ಮ ಅನಿಸಿಕೆ ನೀಡುತ್ತಿದ್ದಾರೆ. ಈಗ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಸಹ ಬಾರ್ಡರ್ ಗವಾಸ್ಕರ್ ಸರಣಿಯ ಬಗ್ಗೆ ತಮ್ಮ ಹೇಳಿಕೆ ನೀಡಿದ್ದಾರೆ. ಈ ಸರಣಿಯಲ್ಲಿ ಯಾರು ಗೆಲ್ಲಬಹುದು ಎಂದು ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.

ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿ ಟೀಮ್ ಇಂಡಿಯಾ
ಈ ಬಾರಿ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಐದು ಪಂದ್ಯಗಳನ್ನು ಆಡಲಾಗುತ್ತದೆ. ರೋಹಿತ್ ಪಡೆ ಈ ಐದು ಪಂದ್ಯಗಳಲ್ಲಿ ಕೇವಲ ಒಂದು ಟೆಸ್ಟ್ ಪಂದ್ಯವನ್ನು ಮಾತ್ರ ಗೆಲ್ಲಲಿದೆ ಎಂದು ಪಾಟಿಂಗ್ ಭವಿಷ್ಯ ನುಡಿದಿದ್ದಾರೆ. ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನವನ್ನು ನೀಡಿತ್ತು. ಇದನ್ನೇ ಮುಂದುವರೆಸಲು ರೋಹಿತ್ ಪಡೆ ಪ್ಲ್ಯಾನ್ ಮಾಡಿಕೊಂಡಿದೆ. 2018ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಹಾಗೂ 2020-21ರಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಟೀಂ ಇಂಡಿಯಾ ಆಸೀಸ್ ನೆಲದಲ್ಲಿ ಜಯ ಸಾಧಿಸಿತ್ತು. ಈಗ ಟೀಮ್ ಇಂಡಿಯಾ ಹ್ಯಾಟ್ರಿಕ್ ಜಯದ ಹುಡುಕಾಟದಲ್ಲಿದೆ.
ಪಾಂಟಿಂಗ್ ಹೇಳಿದ್ದೇನು?
ಐಸಿಸಿ ಕಾರ್ಯಕ್ರಮದಲ್ಲಿ ಮಾತನಾಡಿರುವ ರಿಕಿ ಪಾಂಟಿಂಗ್, ಭಾರತ ಹೇಗಾದರೂ ಒಂದು ಟೆಸ್ಟ್ ಗೆಲ್ಲುವಲ್ಲಿ ಯಶಸ್ವಿಯಾಗುತ್ತದೆ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ, ಆಸ್ಟ್ರೇಲಿಯ ಈ ಸಮಯದಲ್ಲಿ ಹೆಚ್ಚು ಬ್ಯಾಲೆನ್ಸ್ ಟೀಮ್. ಆಸ್ಟ್ರೇಲಿಯಾ ಯುವ ಮತ್ತು ಅನುಭವಿ ಆಟಗಾರರ ತಂಡವಾಗಿದೆ. ತವರಿನಲ್ಲಿ ಆಸ್ಟ್ರೇಲಿಯಾ ಸ್ಥಿರ ಪ್ರದರ್ಶನವನ್ನು ನೀಡುತ್ತದೆ. ತವರಿನಲ್ಲಿ ಆಸ್ಟ್ರೇಲಿಯಾವನ್ನು ಮಣಿಸುವುದು ಎಷ್ಟು ಕಷ್ಟ ಎಂಬ ಅರಿವು ಎಲ್ಲರಿಗೂ ಇದೆ. ನನ್ನ ಪ್ರಕಾರ, ಸರಣಿಯ ಫಲಿತಾಂಶವು ಆಸ್ಟ್ರೇಲಿಯಾದ ಪರವಾಗಿ 3-1 ಆಗಿರುತ್ತದೆ ಎಂದು ಹೇಳಿದ್ದಾರೆ.

ಟೀಮ್ ಇಂಡಿಯಾದ ಪೇಸ್ ಬೌಲರ್ ಮೊಹಮ್ಮದ್ ಶಮಿ ಗಾಯದಿಂದ ಸರಣಿಯಿಂದ ಹೊರಗುಳಿದಿರುವುದ ನಿಜಕ್ಕೂ ಆಸ್ಟ್ರೇಲಿಯಾ ತಂಡಕ್ಕೆ ಒಳ್ಳೆಯ ಸುದ್ದಿ ಎಂದು ಪಾಂಟಿಂಗ್ ಅಭಿಪ್ರಾಯ ಪಟ್ಟಿದ್ದಾರೆ. ಶಮಿ ಅನುಪಸ್ಥಿತಿಯಲ್ಲಿ, ಆಸೀಸ್ ತಂಡವನ್ನು ರೋಹಿತ್ ಪಡೆ ಸೋಲಿಸುವ ಸಾಧ್ಯತೆ ಕಡಿಮೆ ಎಂದು ತಿಳಿಸಿದ್ದಾರೆ. ವಿಶ್ವಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಪರ ಆಡಿದ್ದ ಶಮಿ ಇನ್ನು ಅಂಗಳಕ್ಕೆ ಇಳಿದಿಲ್ಲ.
ಟೀಮ್ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಸೋತು ಮುಖಭಂಗ ಅನುಭವಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಟೀಮ್ ಇಂಡಿಯಾ, ಆಸ್ಟ್ರೇಲಿಯಾದಲ್ಲಿ ಸರಣಿ ಗೆಲುವಿನ ಅನಿವಾರ್ಯತೆ ಇದೆ. ಸ್ಟಾರ್ ಆಟಗಾರರು ಲಯಕ್ಕೆ ಮರಳಿದರೆ ಮಾತ್ರ ಈ ಕನಸು ನನಸಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications