IND vs ENG: ಟೀಮ್ ಇಂಡಿಯಾಗೆ ಸಂತಸ; ತಂಡ ಸೇರಿದ ಮ್ಯಾಚ್ ವಿನ್ನರ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಜನವರಿ 31 ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಸರಣಿಯನ್ನು ರೋಚಕಗೊಳಿಸಿದ್ದು, ನಾಲ್ಕನೇ ಪಂದ್ಯ ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿದೆ. ಹಿಂದಿನ ಪಂದ್ಯದಲ್ಲಿ ಸೋತಿದ್ದರೂ, ಭಾರತ ತಂಡವು ನಾಲ್ಕನೇ ಟಿ20 ಗೆದ್ದು ಸರಣಿ ವಶಪಡಿಸಿಕೊಳ್ಳಲು ತಯಾರಾಗಿದೆ. ಇದಕ್ಕಾಗಿ ತಂಡಕ್ಕೆ ಗೇಮ್ ಫಿನಿಶರ್ ಅನ್ನು ಸೇರಿಸಿಕೊಂಡಿದೆ.
ಇಂಗ್ಲೆಂಡ್ ಸರಣಿಯನ್ನು ಉಳಿಸಿಕೊಳ್ಳಲು ರಣತಂತ್ರ ರೂಪಿಸಿದೆ. ನಾಲ್ಕನೇ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಲ್ಲಿ ಸಮಬಲಗೊಳಿಸಲು ಇಂಗ್ಲೆಂಡ್ ಸಜ್ಜಾಗಿದೆ. ಟೀಮ್ ಇಂಡಿಯಾ ಸೇರಿರುವ ಗೇಮ್ ಫಿನಿಶರ್ ಸರಣಿ ಗೆಲುವಿನ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.

ಭಾರತ ತಂಡದ ಸ್ಟಾರ್ ಕ್ರಿಕೆಟಿಗ ಗಾಯಗೊಂಡು ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಈ ಸ್ಟಾರ್ ಕ್ರಿಕೆಟಿಗ ಫಿಟ್ ಆಗಿದ್ದು, ನಾಲ್ಕನೇ ಟಿ20 ಪಂದ್ಯದಲ್ಲಿ ಅಬ್ಬರಿಸಲು ತಯಾರಾಗಿರುವುದು ಟೀಮ್ ಇಂಡಿಯಾಗೆ ಸಂತಸ ತರಿಸಿದೆ. ಈ ಸ್ಟಾರ್ ಕ್ರಿಕೆಟಿಗ ಬೇರೆ ಯಾರು ಅಲ್ಲ ಗೇಮ್ ಫಿನಿಶರ್ ರಿಂಕು ಸಿಂಗ್. ಗಾಯದಿಂದ ಚೇತರಿಸಿಕೊಂಡಿರುವ ರಿಂಕು ಸಿಂಗ್ ಟೀಮ್ ಇಂಡಿಯಾ ಸೇರಿರುವುದನ್ನು ತಂಡದ ಸಹಾಯಕ ಕೋಚ್ ರಿಯಾನ್ ತೆಂಡಾಶ್ಕೇಟ್ ಖಚಿತಪಡಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸತತ 2 ದಿನಗಳ ಕಾಲ ಕಠಿಣ ಅಭ್ಯಾಸ ನಡೆಸಿದೆ. ಪಂದ್ಯದ ಹಿಂದಿನ ದಿನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಚ್ ರಯಾನ್, ರಿಂಕು ಸಿಂಗ್ ಬ್ಯಾಟಿಂಗ್ ಅಭ್ಯಾಸ ಮಾಡಿದ್ದು, ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಹೀಗಾಗಿ ಅವರು ಶುಕ್ರವಾರ ನಡೆಯಲಿರುವ ಸರಣಿಯ ನಾಲ್ಕನೇ ಟಿ20 ಪಂದ್ಯಕ್ಕೆ ಲಭ್ಯವಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಸರಣಿ ಗೆಲುವಿನ ನಿರೀಕ್ಷಯಲ್ಲಿರುವ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆ ಆಗಬಹುದು. ರಿಂಕು ಸಿಂಗ್ ಆಗಮನದಿಂದಾಗಿ ವಿಕೆಟ್‌ಕೀಪರ್-ಬ್ಯಾಟರ್ ಧ್ರುವ್ ಜುರೆಲ್ ಡುವ ಹನ್ನೊಂದರ ಬಳಗದಿಂದ ಹೊರಗುಳಿಬಹುದು. ರಿಂಕು ಸಿಂಗ್ ಗಾಯಗೊಂಡು ಹೊರಗುಳಿದ ಸಂದರ್ಭದಲ್ಲಿ ಕಳೆದ ಎರಡು ಪಂದ್ಯಗಳನ್ನು ಆಡುವ ಅವಕಾಶ ಜುರೆಲ್‌ಗೆ ಸಿಕ್ಕಿತ್ತು. ಆದರೆ, ಅವರು ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಕೇವಲ 4 ರನ್ ಗಳಿಸಿದ್ದ ಜುರೆಲ್, ರಾಜ್‌ಕೋಟ್‌ನಲ್ಲಿ ಕೇವಲ 2 ರನ್ ಗಳಿಸಿ ವಿಕೆಟ್ ಕಳೆದುಕೊಂಡಿದ್ದರು.
ಭಾರತದ ಸಂಭಾವ್ಯ ಪ್ಲೇಯಿಂಗ್-11
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications