ಕೌಟುಂಬಿಕ ಕಾರಣಗಳಿಂದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ರಿಂಕು ಸಿಂಗ್ ಚೆನ್ನೈನಿಂದ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳೆಸಿದರು. ರಿಂಕು ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರು ಮನೆಗೆ ಮರಳಿದ್ದರು. ವರದಿಗಳ ಅನುಸಾರ ರಿಂಕು ಸಿಂಗ್ ಅವರ ತಂದೆ 4 ನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ರಿಂಕು ಸಿಂಗ್ ಅವರ ತಂದೆಯ ಆರೋಗ್ಯದಲ್ಲಿನ ಏರು ಪೇರು ರಿಂಕು ಸಿಂಗ್ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ ರಿಂಕು ಸಿಂಗ್ ಜಿಂಬಾಬ್ವೆ ವಿರುದ್ಧ ಕಣಕ್ಕೆ ಇಳಿಯುತ್ತಾರೋ ಇಲ್ಲವೋ ಎಂಬ ಪ್ರಶ್ನೆಗಳು ಎದ್ದಿದ್ದವು.
ರಿಂಕು ಸಿಂಗ್ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳುತ್ತಾರೋ ಇಲ್ಲವೋ ಎಂಬ ಬಗ್ಗೆ ತಂಡದ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್ ಉತ್ತರ ನೀಡಿದ್ದಾರೆ. ಬುಧವಾರ ರಿಂಕು ಸಿಂಗ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಎಂಬ ಭರವಸೆಯ ಮಾತುಗಳನ್ನು ಆಡಿದ್ದಾರೆ. ಇನ್ನು ತಂಡ ಸಂಜು ಸ್ಯಾಮ್ಸನ್ ಅವರನ್ನು ಕಣಕ್ಕೆ ಇಳಿಸುವ ಚಿಂತನೆಯಲ್ಲಿದೆ. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್ ಅವರನ್ನು ಆಡುವ ಪ್ಲೇಯಿಂಗ್ ಇಲೆವೆನ್‌ನಲ್ಲಿ ತಂಡದಲ್ಲಿ ಸೇರಿಸಿಕೊಳ್ಳಲಾಗುತ್ತದೆಯೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ ಎಂದು ಸಿತಾಂಶು ತಿಳಿಸಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ರಿಂಕು ಸಿಂಗ್ ಈ ವರೆಗೆ ಎಲ್ಲ ಪಂದ್ಯಗಳನ್ನು ಆಡಿದ್ದಾರೆ. ಇವರು ಒಟ್ಟು 24 ರನ್‌ಗಳನ್ನು ಸಿಡಿಸಿದ್ದಾರೆ. ಇವರು ಟೀಮ್ ಇಂಡಿಯಾದ ಪರ ಫಿನಿಷರ್ ರೂಪದಲ್ಲಿ ಕಾಣಿಸಿಕೊಳ್ಳುತ್ತಾರೆ.
ಒತ್ತಡದಲ್ಲಿ ಭಾರತ
ರಿಂಕು ಸಿಂಗ್ ವಿಶ್ವಕಪ್‌ನಲ್ಲಿ ಈ ವರೆಗೆ ತಮ್ಮ ಕ್ಷಮತೆಗೆ ತಕ್ಕ ಪ್ರದರ್ಶನವನ್ನು ನೀಡಿಲ್ಲ. ಸೂಪರ್ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಇವರಿಗೆ ತಮ್ಮ ಕ್ಷಮತೆಯನ್ನು ಸಾಬೀತು ಪಡಿಸುವ ಅವಕಾಶ ಇತ್ತು. ಆದರೆ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಇವರು ವಿಫಲರಾಗಿದ್ದರು. ಅಹಮದಾಬಾದ್‌ನಲ್ಲಿ ನಡೆದ ಸೂಪರ್ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 111 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಟೀಮ್ ಇಂಡಿಯಾ ಮುಂದಿನ ಎರಡೂ ಪಂದ್ಯಗಳು ಮಹತ್ವದಾಗಿದೆ. ಈ ಎರಡೂ ಪಂದ್ಯಗಳಲ್ಲಿ ಭಾರತ ದೊಡ್ಡ ಅಂತರದಿಂದ ಗೆಲುವು ಸಾಧಿಸುವುದು ಅನಿವಾರ್ಯ.