Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಹೀಗಾದರೆ ಮಾತ್ರ, 2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ರಿಷಭ್ ಪಂತ್ ಪುನರಾಗಮನ ಪಕ್ಕಾ!

ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಿಷಭ್ ಪಂತ್ ಅವರು 2022ರ ಡಿಸೆಂಬರ್‌ನಲ್ಲಿ ನಡೆದ ಕಾರು ಅಪಘಾತದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೆ ಮೈದಾನದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಆಡಲು ಎದುರು ನೋಡುತ್ತಿದ್ದಾರೆ.

ಇನ್ನು ರಿಷಭ್ ಪಂತ್ ಅವರು ಫಿಟ್ ಆಗಿದ್ದರೆ ಮತ್ತು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪೂರ್ಣ ಋತುವನ್ನು ಆಡಲು ಸಾಧ್ಯವಾದರೆ, 2024ರ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ವಯಂಚಾಲಿತವಾಗಿ ಆಯ್ಕೆಯಾಗುತ್ತಾರೆ.

Rishabh Pant Can Make a Comeback to the Indian Team in the 2024 T20 World Cup

ರಿಷಭ್ ಪಂತ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟರ್ ಅವರು ತೀವ್ರವಾದ ಕಾರು ಅಪಘಾತದ ನಂತರ, ಅನೇಕ ಶಸ್ತ್ರಚಿಕಿತ್ಸೆಗಳಿಂದ ಸ್ಥಿರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್, ರಿಷಭ್ ಪಂತ್ ಅವರು ಫಿಟ್ ಆಗಿದ್ದರೆ ಭಾರತ ತಂಡಕ್ಕೆ ಮರಳಲು ಬೆಂಬಲಿಸಿದರು.

""ರಿಷಭ್ ಪಂತ್ ಅವರು ಫಿಟ್ ಆಗಿದ್ದರೆ ಮತ್ತು 2024ರ ಸಂಪೂರ್ಣ ಐಪಿಎಲ್ ಋತುವನ್ನು ಆಡಲು ಸಾಧ್ಯವಾದರೆ, ಖಂಡಿತವಾಗಿಯೂ ಭಾರತ ತಂಡಕ್ಕೆ ಕಾಲಿಡುತ್ತಾರೆ,'' ಎಂದು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಯು ಶುಕ್ರವಾರ, ಜನವರಿ 5ರಂದು ಟಿ20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಟಿ20 ವಿಶ್ವಕಪ್‌ ಪಂದ್ಯಾವಳಿಯು ಜೂನ್ 1ರಂದು ಪ್ರಾರಂಭವಾಗಲಿದ್ದು, ಜೂನ್ 29ರಂದು ಫೈನಲ್ ಪಂದ್ಯ ನಡೆಯಲಿದೆ. ಡಲ್ಲಾಸ್‌ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಯುಎಸ್ಎ ಮತ್ತು ಕೆನಡಾ ತಂಡಗಳು ಸೆಣಸಾಡಲಿವೆ.

2007ರ ಟಿ20 ವಿಶ್ವಕಪ್ ಚಾಂಪಿಯನ್ ಭಾರತ ತಂಡವು ಪಾಕಿಸ್ತಾನ, ಯುಎಸ್ಎ, ಕೆನಡಾ ಮತ್ತು ಐರ್ಲೆಂಡ್ ತಂಡಗಳ ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ

  • ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
  • ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
  • ಜೂನ್ 12: ಭಾರತ vs ಯುಎಸ್ಎ (ನ್ಯೂಯಾರ್ಕ್)
  • ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ 20 ತಂಡಗಳನ್ನು ಆಡಿಸಲಾಗುತ್ತದೆ. ಪಂದ್ಯಾವಳಿಯ ಗುಂಪು ಹಂತಕ್ಕೆ ಐದು ತಂಡಗಳ ನಾಲ್ಕು ಗುಂಪುಗಳನ್ನು ಮಾಡಲಾಗಿದೆ.

ಪ್ರತಿ ಗುಂಪಿನಿಂದ 2 ತಂಡಗಳು ಸೂಪರ್ 8 ಹಂತಕ್ಕೆ ಅರ್ಹತೆ ಪಡೆಯುತ್ತವೆ ಮತ್ತು ನಂತರ ಪಂದ್ಯಾವಳಿಯು ಸೆಮಿಫೈನಲ್ ಮತ್ತು ಫೈನಲ್‌ನ ಹಂತಕ್ಕೆ ಮುನ್ನಡೆಯುತ್ತದೆ.

Story first published: Friday, January 5, 2024, 23:13 [IST]
Other articles published on Jan 5, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+