For Quick Alerts
ALLOW NOTIFICATIONS  
For Daily Alerts
 

Guwahati Test: ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ; ಪಂತ್‌ಗೆ ಪಟ್ಟ

ಗುವಾಹಟಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸಮಬಲ ಸಾಧಿಸುವ ಕನಸು ಹೊಂದಿದೆ. ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್‌ ಗಾಯಕ್ಕೆ ತುತ್ತಾಗಿದ್ದರಿಂದ, ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ರಿಷಭ್‌ ಪಂತ್‌ ಮುನ್ನಡೆಸಲಿದ್ದಾರೆ. ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್‌ ಮಾಡುವ ನಿರ್ಧಾರವನ್ನು ಮಾಡಿದೆ.

ಎರಡನೇ ಟೆಸ್ಟ್‌ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿದಿದೆ. ಈ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ಕಾರ್ಬಿನ್ ಬಾಷ್ ಅವರಿಗೆ ಕೈ ಬಿಟ್ಟಿದ್ದು, ಇವರ ಬದಲಿಗೆ ಸೆನುರನ್ ಮುತ್ತುಸಾಮಿ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಈ ಪಂದ್ಯ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಎಡೆನ್ ಮಾರ್ಕ್ರಾಮ್ ಅವರಿಗೆ ಸ್ಮರಣೀಯ ಪಂದ್ಯವಾಗಿರಲಿದೆ. ಈ ಪಂದ್ಯ ಮಾರ್ಕ್ರಾಮ್ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನದ 50ನೇ ಪಂದ್ಯವಾಗಿರಲಿದೆ.

Rishabh Pant Captains India in Guwahati Test as Injured Gill Sidelined South Africa Opts to Bat

ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್‌ ಕುತ್ತಿನ ಗಾಯಕ್ಕೆ ತುತ್ತಾಗಿದ್ದು, ಇವರ ಬದಲಿಗೆ ರಿಷಭ್‌ ಪಂತ್‌ ತಂಡವನ್ನು ಮುನ್ನಡೆಸಲಿದ್ದಾರೆ. ಅಳೆದು ತೂಗಿ ತಂಡವನ್ನು ಘೋಷಿಸಲಾಗಿದೆ. ತಂಡ ಸಹ 2 ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಲಿದೆ. ಶುಭಮನ್ ಗಿಲ್‌ ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಅವರು ಸ್ಥಾನ ಪಡೆದರೆ, ಅಕ್ಷರ್‌ ಪಟೇಲ್‌ ಅವರ ಸ್ಥಾನದಲ್ಲಿ ಸಾಯಿ ಸುದರ್ಶನ್‌ ಅವರು ತಂಡಕ್ಕೆ ಮತ್ತೆ ಎಂಟ್ರಿ ಪಡೆದಿದ್ದಾರೆ.

300ನೇ ಟೆಸ್ಟ್‌

ಗುವಾಹಟಿಯಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್‌ ಪಂದ್ಯವನ್ನು ಆಡಲಾಗುತ್ತಿದೆ. ಈ ಟೆಸ್ಟ್‌ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ಈ ಪಂದ್ಯದ ಮೂಲಕ ಭಾರತ 300ನೇ ಟೆಸ್ಟ್‌ವನ್ನು ಆಯೋಜಿಸಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಇದಕ್ಕೂ ಮೊದಲು ಈ ಸಾಧನೆಯನ್ನು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮಾಡಿದ್ದವು. ಈಗ ಈ ಸಾಧನೆಯನ್ನು ಮಾಡಿದ ವಿಶ್ವದ ಮೂರನೇ ರಾಷ್ಟ್ರ ಎಂಬ ಕೀರ್ತಿ ಭಾರತ ತಂಡದ್ದಾಗಲಿದೆ. ಈ ಸ್ಮರಣೀಯ ಪಂದ್ಯದಲ್ಲಿ ರಿಷಭ್‌ ಪಂತ್ ಪಡೆ ಸೊಗಸಾದ ಪ್ರದರ್ಶನ ನೀಡಿ ಅಬ್ಬರಿಸಲು ಪ್ಲ್ಯಾನ್ ಮಾಡಿಕೊಂಡಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಧ್ರುವ್ ಜುರೇಲ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೋನಿ ಡಿ ಜೋರ್ಜಿ, ಟೆಂಬಾ ಬವುಮಾ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆಯಿನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಸೆನುರನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

Story first published: Saturday, November 22, 2025, 8:41 [IST]
Other articles published on Nov 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+