Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rishabh Pant Accident : ಕಾರು ಅಪಘಾತದಲ್ಲಿ ಗಾಯಗೊಂಡ ಕ್ರಿಕೆಟಿಗ ರಿಷಭ್ ಪಂತ್: ಆಸ್ಪತ್ರೆಗೆ ದಾಖಲು

Rishabh Pant Car Accident: Cricketer injured after his car collides with divider while travelling from Uttarakhand to Delhi

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಈ ಅಪಘಾತದಲ್ಲಿ ಪಂತ್‌ಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉತ್ತರಾಖಾಂಡ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ರೂರ್ಕಿ ಸಮೀಪ ರಸ್ತೆ ಡಿವೈಡರ್‌ಗೆ ರಿಷಭ್ ಪಂತ್ ಪ್ರಯಾಣಿಸುತ್ತಿದ್ದ ಮರ್ಸಿಡೀಸ್ ಕಾರು ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಸ್ವತಃ ಪಂತ್ ಅವರೇ ಈ ಕಾರನ್ನು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ.

ವೈದ್ಯರುಗಳ ಮಾಹಿತಿಯ ಪ್ರಕಾರ ರಿಷಭ್ ಪಂತ್ ಅವರ ಹಣೆ, ಬೆನ್ನು ಹಾಗೂ ಕಾಲಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದೆ. ರೂರ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಂತ್ ಅವರನ್ನು ದೆಹಲಿ ಆಸ್ಪತ್ರೆಗೆ ರವಾನಿಸುವ ಸಾಧ್ಯತೆಯಿದ್ದು ಅಲ್ಲಿ ಪಂತ್‌ಗೆ ಪ್ಲಾಸ್ಟಿಕ್ ಸರ್ಜರಿ ನಡೆಸಲಾಗುತ್ತದೆ ಎನ್ನಲಾಗಿದೆ

ಸ್ಥಳೀಯ ಮಾಧ್ಯಮಗಳು ವರದಿ ಮಾಡಿದಂತೆ ಮುಂಜಾನೆ ದೆಹಲಿಗೆ ಪ್ರಯಾಣಿಸುತ್ತಿದ್ದ ರಿಷಭ್ ಪಂತ್ ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿದ್ದು ಬಳಿಕ ಕಾರಿಗೆ ಬೆಂಕಿ ಹತ್ತಿಕೊಂಡಿತು. ಈ ಸಂದರ್ಭದಲ್ಲಿ ಸ್ಥಳೀಯರು ಪಂತ್ ಅವರನ್ನು ರಕ್ಷಿಸಿದ್ದು ದೆಹಲಿ ರಸ್ತೆಯಲ್ಲಿರುವ ಸಾಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಷಭ್ ಪಂತ್ ಇತ್ತೀಚೆಗಷ್ಟೇ ಬಾಂಗ್ಲದೇಶ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಈ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿತ್ತು.

ಹೆಚ್ಚಿನ ಅಪ್‌ಡೇಟ್‌ಗಳನ್ನು ನಿರೀಕ್ಷಿಸಲಾಗುತ್ತಿದೆ..

Story first published: Friday, December 30, 2022, 9:19 [IST]
Other articles published on Dec 30, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+