93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 2ನೇ ಆಟಗಾರ ರಿಷಭ್ ಪಂತ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟೆಸ್ಟ್ ಪಂದ್ಯ ಗುವಾಹಟಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ಟೀಮ್ ಇಂಡಿಯಾ ಮಹತ್ವದ ಪಂದ್ಯಕ್ಕಾಗಿ 2 ಬದಲಾವಣೆಗಳನ್ನು ಮಾಡಿದೆ. ದಕ್ಷಿಣ ಆಫ್ರಿಕಾ ಸಹ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿದೆ. ಇನ್ನು ಈ ಪಂದ್ಯದಲ್ಲಿ ಭಾರತ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. ಈ ಮೂಲಕ ರಿಷಭ್ ಪಂತ್ ದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೊಂದಿದ ಬಳಿಕ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡ ಶುಭಮನ್ ಗಿಲ್, ಕೋಲ್ಕತ್ತಾ ಟೆಸ್ಟ್ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಇವರು ಮೊದಲ ಇನಿಂಗ್ಸ್‌ನಲ್ಲಿ ಕುತ್ತಿಗೆಯ ಗಾಯಕ್ಕೆ ತುತ್ತಾಗಿದ್ದರು. ಇನ್ನು ಗಿಲ್ ಈ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. ಈ ಮೂಲಕ ರಿಷಭ್ ಪಂತ್ ಇತಿಹಾಸ ನಿರ್ಮಿಸಿದ್ದಾರೆ.

ಟಾಸ್ ಸಮಯದಲ್ಲಿ ರಿಷಭ್ ಪಂತ್ ನಾಯಕ ಕ್ಯಾಪ್ ತೊಟ್ಟು ಮೈದಾನಕ್ಕೆ ಇಳಿಯುತ್ತಿದ್ದಂತೆ ದೊಡ್ಡ ದಾಖಲೆ ಬರೆದಿದ್ದಾರೆ. ಇವರು 93 ವರ್ಷಗಳ ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಂಡವನ್ನು ಮುನ್ನಡೆಸುತ್ತಿರುವ 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ 1932 ರಿಂದ ಟೆಸ್ಟ್ ಪಂದ್ಯವನ್ನು ಅಡುತ್ತಿದೆ. ಈ ವೇಳೆ 38 ಆಟಗಾರರು ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ ತಂಡವನ್ನು ಮುನ್ನಡೆಸಿದ ಎರಡನೇ ನುರಿತ ವಿಕೆಟ್ ಕೀಪರ್ ಬ್ಯಾಟರ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಈ ಸಾಧನೆ ಎಂಎಸ್ ಧೋನಿ ಮಾಡಿದ್ದರು.
ರಿಷಭ್ ಪಂತ್ ಶನಿವಾರ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದಕ್ಕೂ ಮೊದಲು ಪಂತ್ 5 ಟಿ20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧವೇ 2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸಿದ್ದರು. ಇನ್ನು ಈ ವೇಳೆ ತಂಡ 2 ಪಂದ್ಯಗಳಲ್ಲಿ ಜಯ, 2 ಪಂದ್ಯಗಳಲ್ಲಿ ಸೋಲು ಕಂಡಿದೆ.
ಪಂತ್ ಸಾಧನೆ
29 ವರ್ಷದ ರಿಷಭ್ ಪಂತ್ ಟೀಮ್ ಇಂಡಿಯಾದ ಭರವಸೆಯ ಆಟಗಾರ. ಇವರು ಈಗಾಗಲೇ ಭಾರತದ ಪರ ಹಲವು ಸ್ಮರಣೀಯ ಇನಿಂಗ್ಸ್ ಆಡಿ ಸೈ ಎನಿಸಿಕೊಂಡಿದ್ದಾರೆ. ಪಂತ್ ಭಾರತದ ಪರ 48 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 43.74ರ ಸರಾಸರಿಯಲ್ಲಿ 3456 ರನ್ ಕಲೆ ಹಾಕಿದ್ದಾರೆ. ಈ ವೇಳೆ 8 ಶತಕ, 18 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಸ್ಮರಣೀಯ ಟೆಸ್ಟ್
ಗುವಾಹಟಿ ಟೆಸ್ಟ್ ನಿಶ್ಚಿತವಾಗಿ ಭಾರತಕ್ಕೆ ಸ್ಮರಣೀಯವಾಗಿರಲಿದೆ. ಭಾರತ 300ನೇ ಟೆಸ್ಟ್ ಪಂದ್ಯವನ್ನು ಆಯೋಜಿಸಿದ ಹೆಗ್ಗಳಿಕೆ ತನ್ನದಾಗಿಸಿಕೊಂಡಿದೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ರಾಷ್ಟ್ರ ಎಂಬ ಹಿರಿಮೆ ತನ್ನದಾಗಿಸಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications