Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rishabh Pant: 6 ಸಿಕ್ಸರ್‌ ಬಾರಿಸುತ್ತಲೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇತಿಹಾಸ ಬರೆಯಲಿರುವ ಪಂತ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಇತಿಹಾಸ ಸೃಷ್ಟಿಸುವ ಕನಸಿನಲ್ಲಿದ್ದಾರೆ. ಈ ಪಂದ್ಯದಲ್ಲಿ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳ ದಾಖಲೆಯನ್ನು ಬರೆಯುವ ಸನಿಹದಲ್ಲಿದ್ದಾರೆ. ಈ ಸ್ವರೂಪದಲ್ಲಿ ಅವರು ಇದುವರೆಗೆ 49 ಪಂದ್ಯಗಳಲ್ಲಿ 86 ಇನ್ನಿಂಗ್ಸ್‌ಗಳಲ್ಲಿ 94 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅವರು ಆರು ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗ ಮತ್ತು ವಿಶ್ವದ ನಾಲ್ಕನೇ ಕ್ರಿಕೆಟಿಗರಾಗುತ್ತಾರೆ. ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು ಈ ಮೊದಲು ಬೆನ್ ಸ್ಟೋಕ್ಸ್, ಬ್ರೆಂಡನ್ ಮೆಕಲಮ್ ಮತ್ತು ಆಡಮ್ ಗಿಲ್‌ಕ್ರಿಸ್ಟ್ ಮಾತ್ರ ಮಾಡಿದ್ದಾರೆ.

Rishabh Pant

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಂತ್ ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರೆ, ವೇಗವಾಗಿ 100 ಸಿಕ್ಸರ್‌ಗಳನ್ನು ತಲುಪಿದ ಆಟಗಾರ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಬಹುದು. ಈ ಮೂಲಕ ರಿಷಭ್‌ ಪಂತ್‌ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್‌ ದಾಖಲೆಯನ್ನು ಅಳಿಸುವ ಕನಸಿನಲ್ಲಿದ್ದಾರೆ. ಬೆನ್ ಸ್ಟೋಕ್ಸ್ 82 ಪಂದ್ಯಗಳಲ್ಲಿ ಅತಿ ವೇಗದ 100 ಸಿಕ್ಸರ್‌ಗಳ ದಾಖಲೆಯನ್ನು ಹೊಂದಿದ್ದಾರೆ. ಈ ಟೆಸ್ಟ್ ಪಂದ್ಯ ಪಂತ್ ಅವರ 50 ನೇ ಟೆಸ್ಟ್ ಪಂದ್ಯವಾಗಿದ್ದು, ಬ್ಯಾಟಿಂಗ್‌ನಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಮೂಲಕ ಅತಿ ವೇಗದ 100 ಸಿಕ್ಸರ್‌ಗಳ ದಾಖಲೆಯನ್ನು ಮುರಿಯುವ ಗುರಿಯನ್ನು ಹೊಂದಿದ್ದಾರೆ.

Rishabh Pant

ಟೀಮ್ ಇಂಡಿಯಾದ ಭರವಸೆಯ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್ ಪಂತ್‌ ಅವರಿಗೆ ಶನಿವಾರದ ಪಂದ್ಯ ವಿಶೇಷವಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ರಿಷಭ್‌ ಕಣಕ್ಕೆ ಇಳಿಯುತ್ತಿದಂತೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 50ನೇ ಪಂದ್ಯವನ್ನು ಆಡಿದ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಆಟಗಾರ ಪಂತ್ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೊದಲು ಈ ಸಾಧನೆಯನ್ನು ಭಾರತದ ಪರ ಧೋನಿ (90 ಪಂದ್ಯ), ಕರ್ನಾಟಕದ ಸೈಯದ್ ಕಿರ್ಮಾನಿ (80 ಪಂದ್ಯ) ಮಾಡಿದ್ದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಆಟಗಾರ ಯಾರು?

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ಇಂಗ್ಲೆಂಡ್‌ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. ಇವರು ಈ ವರೆಗೆ 136 ಸಿಕ್ಸರ್ ಬಾರಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟರ್ಸ್‌

ಬೆನ್ ಸ್ಟೋಕ್ಸ್‌, ಇಂಗ್ಲೆಂಡ್‌, 136 ಸಿಕ್ಸರ್‌
ಬ್ರೆಂಡನ್‌ ಮೆಕಲಂ, ನ್ಯೂಜಿಲೆಂಡ್‌, 107 ಸಿಕ್ಸರ್‌
ಆಡಂ ಗಿಲ್‌ಕ್ರಿಸ್ಟ್‌, ಆಸ್ಟ್ರೇಲಿಯಾ, 100 ಸಿಕ್ಸರ್‌
ಟಿಮ್ ಸೌಥಿ, ನ್ಯೂಜಿಲೆಂಡ್‌, 98 ಸಿಕ್ಸರ್‌
ಕ್ರಿಸ್‌ ಗೇಲ್‌, ವೆಸ್ಟ್‌ ಇಂಡೀಸ್‌, 98 ಸಿಕ್ಸರ್‌

Story first published: Friday, June 5, 2026, 10:29 [IST]
Other articles published on Jun 5, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+