For Quick Alerts
ALLOW NOTIFICATIONS  
For Daily Alerts
 

Rishabh Pant: ಮುಂದುವರೆದ ಕೋಟಿ ವೀರನ ಕಳಪೆ ಬ್ಯಾಟಿಂಗ್ ಪ್ರದರ್ಶನ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ರಿಷಭ್ ಪಂತ್ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಐಪಿಎಲ್ 2025 ರಲ್ಲಿ ರಿಷಭ್ ಪಂತ್ ಉತ್ತಮ ಪ್ರದರ್ಶನ ನೀಡುವಲ್ಲಿ ಅಟ್ಟರ್ ಫ್ಲಾಪ್ ಆಗಿದ್ದಾರೆ. ಇದುವರೆಗೆ ರಿಷಬ್ ಪಂತ್ ಅವರಿಂದ ಒಂದೇ ಒಂದು ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗಿಲ್ಲ. ಏಕಾನಾ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ ರಿಷಭ್ ಪಂತ್ ಬಂದ ದಾರಿಗೆ ಸುಂಕವಿಲ್ಲದಂತೆ ಶೂನ್ಯಕ್ಕೆ ಔಟಾಗಿದ್ದಾರೆ.

ರಿಷಭ್ ಪಂತ್ ಐಪಿಎಲ್ 2025 ರಲ್ಲಿ ತಮ್ಮ ಮಾಜಿ ತಂಡ ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗಿರುವುದು ಇದು ಎರಡನೇ ಬಾರಿ. ಈ ಮೂಲಕ ಅವರು ಹಲವು ಟೀಕೆಗಳನ್ನು ಎದುರಿಸುವಂತಾಗಿದೆ.

Rishabh Pant Facing The Poor Batting Form Problem In Consecutive Matches In IPL 2025

ಟಾಸ್ ಗೆದ್ದ ದೆಹಲಿ ನಾಯಕ ಅಕ್ಸರ್ ಪಟೇಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 159 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಲಕ್ನೋ ತಂಡಕ್ಕೆ ಐಡೆನ್ ಮಾರ್ಕ್ರಾಮ್ ಮತ್ತು ಮಿಚೆಲ್ ಮಾರ್ಷ್ ಉತ್ತಮ ಆರಂಭ ನೀಡಿದರು. ಇಬ್ಬರೂ ಮೊದಲ ವಿಕೆಟ್‌ಗೆ 10 ಓವರ್‌ಗಳಲ್ಲಿ 87 ರನ್‌ಗಳ ಜೊತೆಯಾಟ ಆಡಿದರು. ಮಾರ್ಕ್ರಾಮ್ 33 ಎಸೆತಗಳಲ್ಲಿ 52 ರನ್ ಗಳಿಸಿದರೆ, ಮಾರ್ಷ್ 36 ಎಸೆತಗಳಲ್ಲಿ 45 ರನ್ ಗಳಿಸಿದರು.

ಆಯುಷ್ ಬಡೋನಿ ಕೊನೆಯ ಓವರ್‌ಗಳಲ್ಲಿ 21 ಎಸೆತಗಳಲ್ಲಿ 36 ರನ್ ಗಳಿಸಿದರು. ಡೇವಿಡ್ ಮಿಲ್ಲರ್ 15 ಎಸೆತಗಳಲ್ಲಿ 14 ರನ್ ಗಳಿಸಿ ಅಜೇಯರಾಗುಳಿದರು. ನಿಕೋಲಸ್ ಪೂರನ್ 9 ರನ್ ಗಳಿಸಿ ಔಟಾದರೆ, ಅಬ್ದುಲ್ ಸಮದ್ 2 ರನ್ ಗಳಿಸಿ ಔಟಾದರು.

ಕೋಟಿ ವೀರ ಪ್ಲಾಪ್

ಆಯುಷ್ ಬಡೋನಿ ಔಟಾದ ನಂತರ, ಲಕ್ನೋ ನಾಯಕ ರಿಷಭ್ ಪಂತ್ 20 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಬ್ಯಾಟಿಂಗ್‌ಗೆ ಬಂದರು. ಮುಖೇಶ್ ಕುಮಾರ್ ಎಸೆದ ಐದನೇ ಎಸೆತದಲ್ಲಿ ಅವರಿಗೆ ಒಂದೇ ಒಂದು ರನ್ ಗಳಿಸಲು ಸಾಧ್ಯವಾಗಲಿಲ್ಲ. 20ನೇ ಓವರ್‌ನ ಕೊನೆಯ ಎಸೆತದಲ್ಲಿ ರಿವರ್ಸ್ ಸ್ವೀಪ್ ಮೂಲಕ ಸಿಕ್ಸರ್ ಬಾರಿಸಲು ಪ್ರಯತ್ನಿಸುವಾಗ ಅವರು ಕ್ಲೀನ್ ಬೌಲ್ಡ್ ಆದರು. ಇದಕ್ಕೂ ಮೊದಲು, ಮಾರ್ಚ್ 24 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್‌ನ ಮೊದಲ ಪಂದ್ಯದಲ್ಲಿ ಅವರು ಶೂನ್ಯಕ್ಕೆ ಔಟಾಗಿದ್ದರು.

ರಿಷಭ್ ಪಂತ್ ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 7 ಬಾರಿ ಬ್ಯಾಟಿಂಗ್ ಮಾಡಿದ್ದು, ಒಟ್ಟು 106 ರನ್ ಗಳಿಸಿದ್ದಾರೆ. ಸತತ ಅವಕಾಶಗಳು ಸಿಕ್ಕರೂ ಅವರು ರನ್ ಗಳಿಸಲು ಪರದಾಟ ನಡೆಸುತ್ತಿದ್ದಾರೆ.

ರಿಷಭ್ ಪಂತ್ ಈ ಹಿಂದೆ 8 ಸೀಸನ್‌ಗಳ ಐಪಿಎಲ್‌ನಲ್ಲಿ ಡೆಲ್ಲಿ ತಂಡದೊಂದಿಗೆ ಇದ್ದರು. ಅವರು ಡೆಲ್ಲಿ ಪರ 111 ಪಂದ್ಯಗಳಲ್ಲಿ 3284 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 1 ಶತಕ ಮತ್ತು 18 ಅರ್ಧಶತಕಗಳನ್ನು ಗಳಿಸಿದರು. ಕಳೆದ ವರ್ಷ ಐಪಿಎಲ್ ಮೆಗಾ ಹರಾಜಿಗೂ ಮುನ್ನ, ಡೆಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಪಂತ್ ನಡುವಿನ ಮಾತುಕತೆ ಯಾವುದೇ ತೀರ್ಮಾನಕ್ಕೆ ಬರದಿದ್ದಾಗ, ತಂಡವು ಅವರನ್ನು ಬಿಡುಗಡೆ ಮಾಡಿತು. ಅವರು ಮೆಗಾ ಹರಾಜಿನಲ್ಲಿ ಭಾಗವಹಿಸಿದರು.

ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅವರನ್ನು ದಾಖಲೆಯ 27 ಕೋಟಿ ರೂ.ಗೆ ಖರೀದಿಸಿತು. ಈ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರರಾದರು. ಈಗ ನಿರಂತರವಾಗಿ ವಿಫಲರಾಗುವ ಮೂಲಕ ಅವರು ಲಕ್ನೋ ಅಭಿಮಾನಿಗಳಿಗೆ ಬೇಸರ ತರಿಸಿದ್ದಾರೆ.

Story first published: Tuesday, April 22, 2025, 22:52 [IST]
Other articles published on Apr 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+