ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Rishabh Pant: ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ರಿಷಬ್ ಪಂತ್ ಶಿಫ್ಟ್

Rishabh Pant Health : Pant Will Be Shifted To Mumbai On Janaury 4th For Further Treatment - DDCA

ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್‌ ಪಂತ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಶಿಫ್ಟ್ ಮಾಡುವುದಾಗಿ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ. ಅವರು ಸದ್ಯ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಿಷಬ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಶ್ಯಾಮ್ ಶರ್ಮಾ, ಬುಧವಾರ ಪಂತ್‌ರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈಗೆ ಶಿಫ್ಟ್ ಮಾಡುವುದು ಎಂದು ಖಚಿತಪಡಿಸಿದ್ದಾರೆ. ಅಪಘಾತದಲ್ಲಿ ಪಂತ್ ಹಣೆ, ಮೊಣಕೈ, ಪಾದ ಮತ್ತು ಬೆನ್ನಿಗೆ ಗಾಯಗಳಾಗಿದೆ. ಸದ್ಯ ಅವರನ್ನು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯ ವಿಶೇಷ ಖಾಸಗಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೆಂಕಟೇಶ್ ಪ್ರಸಾದ್‌ರನ್ನು ತಿರಸ್ಕರಿಸಿದ ಬಿಸಿಸಿಐ ಮತ್ತು ಸಿಎಸಿ: ಚೇತನ್ ಶರ್ಮಾ ಆಯ್ಕೆ ಸಮಿತಿಯ ಹೊಸ ಅಧ್ಯಕ್ಷವೆಂಕಟೇಶ್ ಪ್ರಸಾದ್‌ರನ್ನು ತಿರಸ್ಕರಿಸಿದ ಬಿಸಿಸಿಐ ಮತ್ತು ಸಿಎಸಿ: ಚೇತನ್ ಶರ್ಮಾ ಆಯ್ಕೆ ಸಮಿತಿಯ ಹೊಸ ಅಧ್ಯಕ್ಷ

"ರಿಷಬ್ ಪಂತ್ ತಾಯಿ ಜೊತೆ ಸಂಪರ್ಕದಲ್ಲಿದ್ದೇವೆ, ಅಸ್ಥಿರಜ್ಜು ಗಾಯಕ್ಕೆ ಹೆಚ್ಚಿನ ಚಿಕಿತ್ಸೆ ನೀಡುವ ಸಲುವಾಗಿ ಅವರನ್ನು ಮುಂಬೈನ ಆಸ್ಪತ್ರೆಗೆ ಶಿಫ್ಟ್ ಮಾಡುವುದಾಗಿ" ಶ್ಯಾಮ್ ಶರ್ಮಾ ಎಎನ್‌ಐಗೆ ತಿಳಿಸಿದ್ದಾರೆ ಎಂದು ವರದಿ ಮಾಡಿದೆ. ಆದರೆ ಮುಂಬೈನಲ್ಲಿ ಯಾವ ಆಸ್ಪತ್ರೆ ಎಂದು ಇನ್ನೂ ಖಚಿತವಾಗಿ ತಿಳಿಸಿಲ್ಲ.

ಡಿಸೆಂಬರ್ 31ರಂದು ಉತ್ತಾರಖಂಡ್‌ನ ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡೆದ ಕಾರು ಅಪಘಾತದಲ್ಲಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡ ಬಳಿಕ, ಅವರನ್ನು ರೂರ್ಕಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಹಣೆಗೆ ಪ್ಲಾಸ್ಟಿಕ್ ಸರ್ಜರಿ ಕೂಡ ನಡೆಸಲಾಗಿದೆ. ಅಪಘಾತದಲ್ಲಿ ರಿಷಬ್ ಪಂತ್ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿತ್ತು.

Rishabh Pant Health : Pant Will Be Shifted To Mumbai On Janaury 4th For Further Treatment - DDCA

ರಿಷಬ್ ಪಂತ್ ಇನ್ನೂ ನಡೆದಾಡುತ್ತಿಲ್ಲ

ಎನ್‌ಡಿಟಿವಿ ವರದಿ ಮಾಡಿರುವಂತೆ, ರಿಷಬ್‌ ಪಂತ್‌ ಆರೋಗ್ಯದ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ. ಆದರೆ, ಅವರು ಇನ್ನು ನಡೆದಾಡುವ ಸ್ಥಿತಿಯಲ್ಲಿ ಇಲ್ಲ. ಅವರನ್ನು ಮುಂಬೈಗೆ ಶಿಫ್ಟ್ ಮಾಡಲಾಗುತ್ತಿದ್ದು, ಬಿಸಿಸಿಐನ ವೈದ್ಯಕೀಯ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡಲಿದ್ದಾರೆ.

ಪ್ರಾಥಮಿಕ ವೈದ್ಯಕೀಯ ಮಾಹಿತಿ ಪ್ರಕಾರ, ರಿಷಬ್ ಪಂತ್ ಬೆನ್ನುಹುರಿ ಮತ್ತು ಮೆದುಳಿಗೆ ಯಾವುದೇ ಹಾನಿಯಾಗಿಲ್ಲ. ಬಲ ಮೊಣಕಾಲಿನ ಅಸ್ಥಿರಜ್ಜು ಹರಿದಿದ್ದು ಅದಕ್ಕೆ ಮುಂಬೈನಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ.

ಅತಿಯಾದ ನೋವು ಮತ್ತು ಊತದಿಂದಾಗಿ ರಿಷಬ್‌ ಪಂತ್‌ರ ಬಲ ಮೊಣಕಾಲು ಮತ್ತು ಪಾದದ ಎಂಆರ್‌ಐ ಇನ್ನೂ ಮಾಡಿಲ್ಲ. ಎಂಆರ್‌ಐ ಸೇರಿದಂತೆ ಇನ್ನಿತರ ಪರೀಕ್ಷೆಗಳನು ಮುಂಬೈನಲ್ಲಿ ನಡೆಯಲಿವೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದಾಗಿ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

Story first published: Wednesday, January 4, 2023, 13:26 [IST]
Other articles published on Jan 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X