Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rishabh Pant is back: ಟಾಪ್ 10 ರೊಳಗೆ ಸ್ಥಾನ ಪಡೆದ ರಿಷಬ್ ಪಂತ್

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರದಂದು ಇತ್ತೀಚಿನ ಟೆಸ್ಟ್‌ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಶ್ರೇಯಾಂಕದಲ್ಲಿ ಅನೇಕ ದೊಡ್ಡ ಬದಲಾವಣೆಗಳು ಕಂಡುಬಂದಿವೆ. ಈ ಶ್ರೇಯಾಂಕದೊಂದಿಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಏಕೆಂದರೆ ಸ್ಟಾರ್ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕಳಪೆ ಫಾರ್ಮ್‌ನಿಂದ ಈಗಾಗಲೇ ಟಾಪ್ 20 ಬ್ಯಾಟರ್‌ಗಳ ಪಟ್ಟಿಯಿಂದ ಹೊರಗುಳಿದಿದ್ದಾರೆ. ಆದರೆ ರಿಷಬ್ ಪಂತ್ ಟಾಪ್ 10 ಬ್ಯಾಟರ್‌ಗಳ ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಲ್ಲಿ ರಿಷಬ್ ಪಂತ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದಿದ್ದರೂ, ಕೊನೆಯ ಟೆಸ್ಟ್ ಪಂದ್ಯದಲ್ಲಿ ಬಿರುಸಿನ ಅರ್ಧಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಯಶಸ್ವಿ ಜೈಸ್ವಾಲ್ ನಂತರ ಟಾಪ್ 10 ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ಪ್ರಸ್ತುತ ಜೈಸ್ವಾಲ್ 847 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಪಂತ್ 739 ರೇಟಿಂಗ್ ಪಾಯಿಂಟ್‌ಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ.

Rishabh Pant is among the top 10 batsmen in the latest ICC Test rankings

ಕೊಹ್ಲಿ-ಶರ್ಮಾ ಶ್ರೇಯಾಂಕ ಕುಸಿತ

ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್ ಗಳಿಸುವಲ್ಲಿ ಹಿಂದೆ ಉಳಿದರು. ಇದರಿಂದಾಗಿ ಈ ಇಬ್ಬರೂ ಆಟಗಾರರು ಟೆಸ್ಟ್ ಶ್ರೇಯಾಂಕದಲ್ಲಿ ಭಾರಿ ನಷ್ಟ ಅನುಭವಿಸಬೇಕಾಗಿದೆ. ಪ್ರಸ್ತುತ, ವಿರಾಟ್ ಕೊಹ್ಲಿ 614 ರೇಟಿಂಗ್ ಪಾಯಿಂಟ್‌ಗಳೊಂದಿಗೆ 27ನೇ ಸ್ಥಾನದಲ್ಲಿದ್ದಾರೆ. ಇದಕ್ಕೂ ಮೊದಲು ಕೊಹ್ಲಿ 24ನೇ ಸ್ಥಾನದಲ್ಲಿದ್ದರು. ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ಹಿನ್ನಡೆ ಕಂಡಿದ್ದಾರೆ. 2 ಅಂಕ ಕಳೆದುಕೊಂಡು 554 ರೇಟಿಂಗ್ ಪಾಯಿಂಟ್‌ಗಳೊಂದಿಗೆ 42ನೇ ಸ್ಥಾನಕ್ಕೆ ಜಾರಿದ್ದಾರೆ.

ಬುಮ್ರಾ-ಜಡೇಜಾ ಕಮಾಲ್

ಐಸಿಸಿ ಬೌಲಿಂಗ್ ಟೆಸ್ಟ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಸ್ಪಿನ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅಗ್ರ 10 ರಲ್ಲಿ ಸ್ಥಾನ ಪಡೆದಿದ್ದಾರೆ. ಬುಮ್ರಾ 908 ರೇಟಿಂಗ್ ಅಂಕಗಳೊಂದಿಗೆ ನಂಬರ್ 1 ಬೌಲರ್ ಆಗಿ ಉಳಿದಿದ್ದಾರೆ. ಜಡೇಜಾ 745 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ. ಟೆಸ್ಟ್ ಆಲ್‌ರೌಂಡರ್ ಶ್ರೇಯಾಂಕದಲ್ಲಿ ಜಡೇಜಾ 400 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

Story first published: Wednesday, January 8, 2025, 18:08 [IST]
Other articles published on Jan 8, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+