For Quick Alerts
ALLOW NOTIFICATIONS  
For Daily Alerts
 

Rishabh Pant update: ಏಕದಿನ ವಿಶ್ವಕಪ್‌ಗೆ ಪಂತ್ ಲಭ್ಯತೆಯ ಬಗ್ಗೆ ಹೊರಬಿತ್ತು ಮಹತ್ವದ ಅಪ್‌ಡೇಟ್!

ಕಳೆದ ಡಿಸೆಂಬರ್‌ ಅಂತ್ಯದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಸ್ಟಾರ್ ಬ್ಯಾಟರ್ ರಿಷಭ್ ಪಂತ್ ಅದಾಗಲೇ ನಾಲ್ಕು ತಿಂಗಳಿನಿಂದ ಕ್ರಿಕೆಟ್‌ನಿಂದ ಸಂಪೂರ್ಣವಾಗಿ ದೂರವುಳಿದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ರಿಷಭ್ ಪಂತ್ ವೇಗವಾಗಿ ಚೇತರಿಕೆ ಕಾಣುತ್ತಿದ್ದಾರೆ. ಆದರೆ ಕ್ರಿಕೆಟ್ ಆಡಲು ಸಂಪೂರ್ಣವಾಗಿ ಫಿಟ್ ಆಗಬೇಕಾದರೆ ರಿಷಭ್ ಪಂತ್‌ಗೆ ಇನ್ನೂ 7-8 ತಿಂಗಳ ಕಾಲಾವಕಾಶ ಬೇಕಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕಾರಣದಿಂದಾಗಿ ಈ ವರ್ಷದಲ್ಲಿ ನಡೆಯಲಿರುವ ಬಹುತೇಕ ಎಲ್ಲಾ ಮಹತ್ವದ ಕ್ರಿಕೆಟ್ ಟೂರ್ನಿಗಳಿಂದ ರಿಷಭ್ ಪಂತ್ ಹೊರಗುಳಿಯಬೇಕಾಗುತ್ತದೆ. ಏಷ್ಯಾ ಕಪ್ ಟೂರ್ನಿ ಹಾಗೂ ಅದಾದ ಬಳಿಕ ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಭಾರತದಲ್ಲಿ ಈ ಬಾರಿ ನಡೆಯಲಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಯಿಂದಲೂ ಪಂತ್ ಹೊರಗುಳಿಯುವುದು ಅನಿವಾರ್ಯವಾಗಲಿದೆ.

Rishabh Pant is most likely going to miss the ODI World Cup

ರಿಷಭ್ ಪಂತ್ ಚೇತರಿಕೆ ಬಗ್ಗೆ ಕ್ರಿಕ್ ಬಜ್ ವರದಿ ಮಾಡಿದ್ದು ಪ್ರಮುಖ ವಿಚಾರಗಳನ್ನು ಹಂಚಿಕೊಳ್ಳಲಾಗಿದೆ. "ರಿಷಬ್ ಪಂತ್ ಅವರು ನಿರೀಕ್ಷೆಗಿಂರಲೂ ವೇಗವಾಗಿ ಚೇತರಿಕೆ ಕಾಣುತ್ತಿದ್ದಾರೆ. ಆದರೆ ಕ್ರಿಕೆಟ್ ಆಡಲು ಸಮರ್ಥರಾಗಬೇಕಾದರೆ ಅವರಿಗೆ ಇನ್ನು ಕೂಡ 7-8 ತಿಂಗಳ ಕಾಲಾವಕಾಶ ಬೇಕಾಗಲಿದೆ. ಇನ್ನು ವಿಕೆಟ್ ಕೀಪರ್ ಆಗಿಯೂ ಅವರು ಸಮರ್ಥರಾಗಬೇಕಾದರೆ ಮತ್ತ್ಷ್ಟು ಸಮಯಾವಕಾಶ ಬೇಕಾಗಬಹುದು. ಆರಂಭದಲ್ಲಿ ಅವರು ಬ್ಯಾಟರ್ ಆಗಿ ಕಮ್‌ಬ್ಯಾಕ್ ಮಾಡುವುದು ಸೂಕ್ತವೆನಿಸಲಿದೆ. ಯಾಕೆಂದರೆ ಬ್ಯಾಟರ್ ಆಗಿ ಆತ ತಂಡಕ್ಕೆ ಆಸ್ತಿ" ಎಂದು ಕ್ರಿಕೆಟ್ ಬಜ್ ವರದಿಯಲ್ಲಿ ತಿಳಿಸಿದೆ.

ಇನ್ನು ರಿಷಭ್ ಪಂತ್ ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬೆಂಬಲ ನೀಡಲು ಕ್ರೀಡಾಂಗಣಕ್ಕೂ ಆಗಮಿಸಿದ್ದರು. ಪಂತ್ ಐಪಿಎಲ್‌ನಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸುತ್ತಿದ್ದಾರೆ. ಬಂಗಾಳದ ವಿಕೆಟ್ ಕೀಪರ್ ಅಭೀಶೇಕ್ ಪೋರೆಲ್ ಪಂತ್ ಬದಲಿಗೆ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪಂತ್‌ಗೆ ವಾರ್ನರ ಸಲಹೆ: ಇನ್ನು ರಿಷಭ್ ಪಂತ್ ತಂಡಕ್ಕೆ ಬೆಂಬಲ ನೀಡಲು ಆಗಮಿಸಿದ್ದ ಸಂದರ್ಭದಲ್ಲಿ ವಾರ್ನರ್ ಪ್ರತಿಕ್ರಿಯೆ ನೀಡಿದ್ದರು. "ಅವರು ತಮ್ಮಿಂದ ಸಾಧ್ಯವಾದಷ್ಟು ತಂಡಕ್ಕೆ ಬೆಂಬಲ ನೀಡಲು ಬಯಸುತ್ತಿದ್ದಾರೆ. ಬಂದು ನಮ್ಮನ್ನು ನೋಡಲು ಸಾಧ್ಯವಾದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ನಾವಯ ಅವರ ಚೇತರಿಕೆಯನ್ನು ಬಯಸುತ್ತಿದ್ದೇವೆ. ಆರಾಮವಾಗಿ ಸಾಧ್ಯವಾದಷ್ಟು ಬೇಗನೆ ಚೇತರಿಕೆ ಕಾಣಲಿ" ಎಂದಿದ್ದಾರೆ ಡೇವಿಡ್ ವಾರ್ನರ್.

ಸಂಕಷ್ಟದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್ ತಂಡ: ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತ್ಯಂತ ನೀರಸ ಪ್ರದರ್ಶನ ನೀಡಿದೆ. ಮೊದಲ ಐದು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ ವಾರ್ನರ್ ಬಳಗ ನಂತರದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆತ್ಮವಿಶ್ವಾಸದಲ್ಲಿದೆ. ಅಂಕಪಟ್ಟಿಯಲ್ಲಿ ಸದ್ಯ ಕೊನೆಯ ಸ್ಥಾನದಲ್ಲಿದೆ ವಾರ್ನರ್ ಪಡೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಯಶ್ ಧುಲ್, ಫಿಲ್ ಸಾಲ್ಟ್, ಸರ್ಫರಾಜ್ ಖಾನ್, ಮನೀಶ್ ಪಾಂಡೆ, ರಿಲೀ ರೋಸೌವ್, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಮನ್ ಖಾನ್, ವಿಕ್ಕಿ ಒಸ್ತ್ವಾಲ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಅಭಿಷೇಕ್ ಪೊರೆಲ್

Story first published: Wednesday, April 26, 2023, 13:05 [IST]
Other articles published on Apr 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+