ಕೊಹ್ಲಿ, ಪೂಜಾರ ಅಲ್ಲ ಈ ಆಟಗಾರ ನಮಗೆ ದೊಡ್ಡ ತಲೆನೋವಾಗಿದ್ದಾನೆ ಎಂದ ನ್ಯೂಜಿಲೆಂಡ್‌ ಕೋಚ್

NewZealand ತಂಡದ ಕೋಚ್ ಗೆ ಭಯ ಹುಟ್ಟಿಸಿದ್ದ Rishabh Pant | Oneindia Kannada

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ 20 ಸದಸ್ಯರ ನ್ಯೂಜಿಲೆಂಡ್ ತಂಡ ಈಗಾಗಲೇ ಸೌತಾಂಪ್ಟನ್ ತಲುಪಿದ್ದು ಟೀಮ್ ಇಂಡಿಯಾ ತಂಡ ಮುಂಬೈನಲ್ಲಿ ಕ್ವಾರಂಟೈನ್‌ಗೆ ಒಳಗಾಗಿದೆ.

ಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿ

ಈ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ನ್ಯೂಜಿಲೆಂಡ್ ತಂಡದ ಬೌಲಿಂಗ್ ತರಬೇತುದಾರ ಶೇನ್ ಜರ್ಗೆನ್ಸನ್ ಟೀಂ ಇಂಡಿಯಾ ತಂಡದ ಕುರಿತು ಮಾತನಾಡಿದ್ದಾರೆ. ಟೀಮ್ ಇಂಡಿಯಾ ಬಲಿಷ್ಠತೆ ಕುರಿತು ಮಾತನಾಡಿರುವ ನ್ಯೂಜಿಲೆಂಡ್ ಬೌಲಿಂಗ್ ಕೋಚ್ ಶೇನ್ ಜರ್ಗೆನ್ಸನ್ ರಿಷಭ್ ಪಂತ್ ಡೇಂಜರಸ್ ಆಟಗಾರ ಎಂದಿದ್ದಾರೆ.

ಬೀಳ್ಕೊಡುಗೆ ಗೌರವ ಸಿಗದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ 5 ಮಹಾನ್ ಕ್ರಿಕೆಟಿಗರು

'ರಿಷಭ್ ಪಂತ್ ಒಬ್ಬ ಅತ್ಯದ್ಭುತ ಆಕ್ರಮಣಕಾರಿ ಆಟಗಾರ. ಯಾವ ಸಮಯದಲ್ಲಿ ಬೇಕಾದರೂ ಪಂದ್ಯದ ದಿಕ್ಕನ್ನು ಬದಲಿಸಬಲ್ಲಂತ ಸಾಮರ್ಥ್ಯವುಳ್ಳ ರಿಷಭ್ ಪಂತ್ ನಮ್ಮ ತಂಡಕ್ಕೆ ತಲೆನೋವಾಗಿ ಪರಿಣಮಿಸಿದ್ದಾರೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಗಳಲ್ಲಿ ರಿಷಭ್ ಪಂತ್ ಸ್ಫೋಟಕ ಆಟವನ್ನು ನೋಡಿದ್ದೇವೆ, ಅವಕಾಶ ಸಿಕ್ಕಾಗ ಆತನ ವಿಕೆಟ್ ಪಡೆಯುವುದು ಉತ್ತಮ' ಎಂದು ಶೇನ್ ಜರ್ಗೆನ್ಸನ್ ರಿಷಭ್ ಪಂತ್ ಸ್ಫೋಟಕ ಆಟದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಕಳೆದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ರಿಷಭ್ ಪಂತ್

ಇಂಗ್ಲೆಂಡ್ ವಿರುದ್ಧದ ಕಳೆದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ರಿಷಭ್ ಪಂತ್

ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಭರ್ಜರಿ ಆಟವನ್ನಾಡಿದ್ದು ನಿಮಗೆಲ್ಲರಿಗೂ ತಿಳಿದೇ ಇದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಮತ್ತು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ ರಿಷಭ್ ಪಂತ್ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಿದ್ದರು

ಆಸ್ಟ್ರೇಲಿಯಾ ನೆಲದಲ್ಲಿ ಭರ್ಜರಿ ಪ್ರದರ್ಶನ

ಆಸ್ಟ್ರೇಲಿಯಾ ನೆಲದಲ್ಲಿ ಭರ್ಜರಿ ಪ್ರದರ್ಶನ

ಕಳೆದ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯನ್ನು ಅವರ ನೆಲದಲ್ಲಿಯೇ ಟೀಮ್ ಇಂಡಿಯಾ ಗೆದ್ದಿತ್ತು. ಈ ಸರಣಿಯಲ್ಲಿಯೂ ರಿಷಭ್ ಪಂತ್ ಅಬ್ಬರದ ಬ್ಯಾಟಿಂಗ್ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಸೋಲುವ ಹಂತದಲ್ಲಿದ್ದಾಗ ರಿಷಬ್ ಪಂತ್ 118 ಎಸೆತಗಳಲ್ಲಿ 97 ರನ್ ಬಾರಿಸಿ ಆಪತ್ಬಾಂಧವನಾದರು. ಹಾಗೂ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 138 ಎಸೆತಗಳಲ್ಲಿ 89 ರನ್ ಬಾರಿಸಿದ ಪಂತ್ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿಯೂ ಯಶಸ್ಸು

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿಯೂ ಯಶಸ್ಸು

ಕೇವಲ ಆಟಗಾರನಾಗಿ ಮಾತ್ರವಲ್ಲದೆ ಮುಂದೂಡಲ್ಪಟ್ಟಿರುವ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ತುಂಬಾ ಅಚ್ಚುಕಟ್ಟಾಗಿ ಮುನ್ನಡೆಸಿದ್ದಾರೆ. ಜವಾಬ್ದಾರಿಯುತ ಆಟವಾಡಿದ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿ ನಿಲುಗಡೆಗೊಳ್ಳುವ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

For Quick Alerts
ALLOW NOTIFICATIONS
For Daily Alerts
Story first published: Monday, May 24, 2021, 12:02 [IST]
Other articles published on May 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X