Rishabh Pant: 634 ದಿನಗಳ ಬಳಿಕ ಟೆಸ್ಟ್ ಆಡಿದ ಪಂತ್: ಮತ್ತೊಂದು ದಾಖಲೆ ಬರೆದ ರಿಷಭ್
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರಿಷಭ್ ಪಂತ್ ಭರ್ಜರಿಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್ ಬ್ಯಾಕ್ ಮಾಡಿದ್ದಾರೆ. ಸೀಮಿತ ಓವರ್‌ಗಳ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲೂ ತಮ್ಮ ಪ್ರದರ್ಶನದಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಮೊದಲ ಪಂದ್ಯದಲ್ಲಿ ತಮ್ಮ ಆಯ್ಕೆಯನ್ನು ರಿಷಭ್ ಪಂತ್ ಸಮರ್ಥಿಸಿಕೊಳ್ಳುವಂತಹ ಬ್ಯಾಟಿಂಗ್ ನಡೆಸಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದ ರಿಷಭ್ ಪಂತ್, ತಂಡಕ್ಕೆ ಆಧಾರವಾಗಿದ್ದರು. ಈಗ ಇವರು 634 ದಿನಗಳ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ವಾಪಸ್ ಆಗಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ರಿಷಭ್ ಪತ್ ದಾಖಲೆ ನಿರ್ಮಿಸಿದ್ದಾರೆ. ಪಂತ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು 25 ಡಿಸೆಂಬರ್ 2022 ರಂದು ಬಾಂಗ್ಲಾದೇಶ ವಿರುದ್ಧ ಮೀರ್ಪುರದಲ್ಲಿ ಆಡಿದ್ದರು.

ಕಳಪೆ ಆರಂಭ
ರಿಷಭ್ ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಭಾರತ 10 ಓವರ್‌ಗಳಲ್ಲಿ ಕೇವಲ 34 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ರೋಹಿತ್ ಶರ್ಮಾ 6 ರನ್ ಗಳಿಸಿ ಔಟಾದರೆ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಸಿಂಗಲ್ ಡಿಜಿಟ್‌ನಲ್ಲಿ ಆಟು ಮುಗಿಸಿದರು. ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಬ್ಯಾಟಿಂಗ್‌ಗೆ ಬಂದು, ಆರಂಭಿಕ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಉತ್ತಮ ಜೊತೆಯಾಟವನ್ನು ನೀಡಿದರು.
4000 ರನ್ ಸರಾದರ
ಈ ಪಂದ್ಯದಲ್ಲಿ ರಿಷಭ್ ಪಂತ್ ಮತ್ತೊಂದು ದಾಖಲೆ ನಿರ್ಮಿಸಿದರು. ಈ ಪಂದ್ಯದಲ್ಲಿ 19 ರನ್ ಪೂರೈಸಿದ ಕೂಡಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆ ನಿರ್ಮಿಸಿದರು. ರಿಷಬ್ ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 4000 ರನ್‌ಗಳನ್ನು ಪೂರೈಸಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸಾಧನೆ ಮಾಡಿದ ಭಾರತದ ಎರಡನೇ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಬ ಹಿರಿಮೆ ರಿಷಭ್ ಅವರದ್ದಾಗಿದೆ.
ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆಗಿ 17092 ರನ್ ಗಳಿಸಿದ್ದಾರೆ. ಧೋನಿ ನಂತರ, ಪಂತ್ ಈಗ 4000 ಅಥವಾ ಅದಕ್ಕಿಂತ ಹೆಚ್ಚಿನ ಅಂತಾರಾಷ್ಟ್ರೀಯ ರನ್‌ಗಳ ಕ್ಲಬ್‌ಗೆ ಪ್ರವೇಶಿಸಿದ್ದಾರೆ.
ಚೆನ್ನೈ ಟೆಸ್ಟ್‌ನಲ್ಲಿ ಮೊದಲ ದಿನ ಭಾರತ ತಂಡದ ಮೊದಲ ಸೆಷನ್‌ನಲ್ಲಿ ಕಳಪೆ ಆಟವನ್ನು ಪ್ರದರ್ಶಿಸಿದೆ. ನಾಲ್ಕನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಪಂತ್ 99 ಎಸೆತಗಳಲ್ಲಿ 62 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಪಂತ್ 39 ರನ್‌ಗಳಿಸಿದ್ದಾಗ ಹಸನ್ ಮಹಮೂದ್ ಅವರ ಎಸೆತವನ್ನು ತಪ್ಪಾಗಿ ಗ್ರಹಿಸಿ ಔಟ್ ಆದರು. ರಿಷಭ್ ಪಂತ್ ಅವರ ಸಮಯೋಚಿತ ಆಟದಲ್ಲಿ 6 ಬೌಂಡರಿಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications