Asia Cup T20: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಆಡುವುದು ಡೌಟ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಗಿದಿದೆ. ಈ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸಮಬಲ ಸಾಧಿಸಿದೆ. ಈ ಟೆಸ್ಟ್ ಸರಣಿಯ ಬಳಿಕ ಭಾರತೀಯ ಆಟಗಾರರು ತವರಿಗೆ ಆಗಮಿಸಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾದ ಆಟಗಾರರು ಏಷ್ಯಾ ಕಪ್ ಟಿ20 ಸರಣಿಯಲ್ಲಿ ಭಾಗವಹಿಸಲಿದೆ. ಈ ಸರಣಿಗಾಗಿ ಈಗಾಗಲೇ ಸಿದ್ಧತೆಗಳು ನಡೆದಿವೆ. ಆದರೆ ಈ ಸರಣಿ ಆರಂಭವಾಗುವುದಕ್ಕೂ ಮುನ್ನವೇ ಟೀಮ್ ಇಂಡಿಯಾ ಕ್ಯಾಂಪ್‌ನಿಂದ ಕೆಟ್ಟ ಸುದ್ದಿಯೊಂದು ಬಂದಿದೆ.
ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಇದೆ. ಸೆಪ್ಟೆಂಬರ್ 9 ರಂದು ಟೂರ್ನಿ ಯುಎಇನಲ್ಲಿ ನಡೆಯಲಿದೆ. ಆದರೆ ಈ ಟೂರ್ನಿ ಆರಂಭವಾಗುವುದಕ್ಕೂ ಮುನ್ನವೇ ತಂಡದ ಚಿಂತೆ ದ್ವಿಗುಣವಾಗುವಂತ ಸುದ್ದಿ ಬರುತ್ತಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ನಾಲ್ಕನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟ್ ಮಾಡುವ ಕ್ರಿಸ್ ವೋಕ್ಸ್ ಎಸೆತದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಇವರು ಐದನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟ್ ಮಾಡಿರಲಿಲ್ಲ. ಇವರು ಇನ್ನು ಚೇತರಿಕೆ ಕಾಣಲು ಸಮಯ ಹಿಡಿಯುತ್ತದೆ ಎಂದು ವರದಿಗಳು ಬರುತ್ತಿವೆ.

ರಿಷಭ್ ಪಂತ್ ಪಾದದ ಗಾಯಕ್ಕೆ ತುತ್ತಾಗಿದ್ದರಿಂದ ಇವರು ಮುಂಬರುವ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಹಾಗೂ ತವರಿನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೂ ಅಲಭ್ಯರಾಗುವ ಸಾಧ್ಯತೆ ಇದೆ. ರಿಷಭ್ ಪಂತ್ ಅವರ ಗಾಯದ ಚೇತರಿಕಗೆ ಸಮಯ ಬೇಕಾಗಿದ್ದರಿಂದ ಇವರು ಮುಂಬರುವ ಪ್ರಮುಖ ಸರಣಿಗಳಿಂದ ತಂಡದಿಂದ ಹೊರಗುಳಿಯಬಹುದು.
ಆಗಿದ್ದೇನು?
ಇಂಗ್ಲೆಂಡ್ ಪ್ರವಾಸದಲ್ಲಿ ರಿಷಭ್ ಪಂತ್ ಬ್ಯಾಟಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದರು. ಕ್ರಿಸ್ ವೋಕ್ಸ್ ಎಸೆತದಲ್ಲಿ ಪಂತ್ ರಿವರ್ಸ್ ಸ್ವೀಪ್ ಬಾರಿಸಲು ಹೋಗಿ ಪಾದದ ಗಾಯಕ್ಕೆ ತುತ್ತಾಗಿದ್ದರು. ಆ ಬಳಿಕ ಇವರನ್ನು ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಇವರನ್ನು ಸ್ಕ್ಯಾನ್‌ಗೆ ಒಳಪಡಿಸಿದ್ದು, ಕಾಲ್ಬೆರಳಿನಲ್ಲಿ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಏಷ್ಯಾ ಕಪ್ ಯಾವಾಗ?
ಭಾರತದ ಆತಿಥ್ಯದಲ್ಲಿ ಏಷ್ಯಾ ಕಪ್ ಆಯೋಜಿಸಲಾಗುತ್ತಿದೆ. ಈ ಬಾರಿ ಏಷ್ಯಾ ಕಪ್ ಟಿ20 ಕ್ರಿಕೆಟ್ ಮಾದರಿಯಲ್ಲಿ ಆಡಿಸಲಾಗುತ್ತಿದೆ. ಇನ್ನು ಈ ಸರಣಿ ಸೆಪ್ಟಂಬರ್ 9 ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಾಗಲಿದ್ದು, 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ಅಗ್ರ ಎರಡು ಸ್ಥಾನ ಪಡೆದ ತಂಡಗಳು ಸೂಪರ್ 4 ಹಂತದಲ್ಲಿ ಕಾದಾಟ ನಡೆಸಿಲಿವೆ. ಇನ್ನು ಸೂಪರ್ 4 ಹಂತದ ಅಗ್ರ 2 ತಂಡಗಳು ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯ ನಡೆಯಲಿದೆ.
ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರು ವರ್ಕ್ ಲೋಡ್‌ನಿಂದಾಗಿ ಈ ಟೂರ್ನಿಯಲ್ಲಿ ಆಡುವುದು ಡೌಟ್ ಎಂದು ಹೇಳಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications