For Quick Alerts
ALLOW NOTIFICATIONS  
For Daily Alerts
 

IPL 2025 : ಲಕ್ನೋ ತಂಡಕ್ಕೆ ಆಸರೆಯಾಗದ ಕೋಟಿ ವೀರ ರಿಷಭ್ ಪಂತ್

ಐಪಿಎಲ್ 2025 ರ 13 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಲಕ್ನೋ ಸೂಪರ್ ಜೈಂಟ್ಸ್ ಎದುರಿಸಿತು. ಈ ಪಂದ್ಯದಲ್ಲಿ ಲಕ್ನೋ ನಾಯಕ ರಿಷಭ್ ಪಂತ್ ಬ್ಯಾಟಿಂಗ್‌ನಲ್ಲಿ ವಿಫಲರಾದರು. ಸತತ ಮೂರನೇ ಪಂದ್ಯದಲ್ಲಿಯೂ ಅವರು ತಮ್ಮ ಹೊಸ ಫ್ರಾಂಚೈಸಿಗಾಗಿ ವಿಶೇಷವಾದದ್ದೇನನ್ನೂ ಮಾಡಲು ಸಾಧ್ಯವಾಗಲಿಲ್ಲ. ಪಂಜಾಬ್ ವಿರುದ್ಧ ಪಂತ್ ಕೇವಲ 2 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಎಸೆತದಲ್ಲಿ ಪಂತ್ ಔಟಾದರು. ಇದಾದ ನಂತರ್ ಪಂತ್ ವಿರುದ್ಧ ಭಾರಿ ಅಸಮಾಧಾನ ವ್ಯಕ್ತವಾಗುತ್ತಿದೆ.

ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಎರಡನೇ ಪಂದ್ಯದಲ್ಲಿ ಅವರು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 15 ರನ್ ಗಳಿಸಲು ಸಾಧ್ಯವಾಯಿತು. ಈಗ ಅವರು ಪಂಜಾಬ್ ವಿರುದ್ಧ ಕೇವಲ ಎರಡು ರನ್ ಗಳಿಸುವ ಮೂಲಕ ಲಕ್ನೋ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಐಪಿಎಲ್ 2025 ರಲ್ಲಿ ರಿಷಭ್ ಪಂತ್ ಅವರು ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 17 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಐಪಿಎಲ್ ಮೆಗಾ ಹರಾಜಿನಲ್ಲಿ ಅವರು ದಾಖಲೆಯ 27 ಕೋಟಿ ರೂ.ಗೆ ಬಿಡ್ ಆಗಿದ್ದರು. ಹೀಗಾಗಿ ಲಕ್ನೋ ಫ್ರಾಂಚೈಸಿ ಅವರಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿತ್ತು. ಆದರೆ, ಈಗ ಅವರು ಸಂಕಷ್ಟದ ಸಮಯದಲ್ಲಿ ಆಸರೆಯಾಗದೆ ತಂಡಕ್ಕೆ ನಿರಾಸೆ ಮೂಡಿಸಿದ್ದಾರೆ.

Rishabh Pant looks batting failure in IPL 2025

ಐಪಿಎಲ್ 2025 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರಿಷಭ್ ಪಂತ್ ಬ್ಯಾಟಿಂಗ್‌ನಲ್ಲಿ ಆಸರೆಯಾಗುತ್ತಿಲ್ಲ. ಇದರಿಂದ ತಂಡ ಹಿನ್ನಡೆ ಅನುಭವಿಸುತ್ತಿದೆ. ನಾಯಕನಾದವರು ತಂಡ ಸಂಕಷ್ಟದಲ್ಲಿದ್ದಾಗ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಗೆಲುವು ತಂದುಕೊಡಬೇಕು. ಆದರೆ ಪಂತ್ ಐಪಿಎಲ್ 2025 ರಲ್ಲಿ ಪರಿಣಮಕಾರಿ ಆಟ ಆಡುತ್ತಿಲ್ಲ.

ಐಪಿಎಲ್ 2024 ರಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಈ ಬಾರಿ ಅವರನ್ನು ಫ್ರಾಂಚೈಸಿ ಉಳಿಸಿಕೊಳ್ಳಲಿಲ್ಲ. ನವೆಂಬರ್ 2024 ರಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಅವರು ದಾಖಲೆಯ ಮೊತ್ತಕ್ಕೆ ಬಿಡ್ ಆಗಿದ್ದರು. ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರನ್ನು 27 ಕೋಟಿ ರೂ.ಗೆ ಖರೀದಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಈ ಮೂಲಕ ಪಂತ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದರು.

ಮಂಗಳವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್‌ನ 27 ಕೋಟಿ ರೂ. ವ್ಯರ್ಥವಾಯಿತು ಎಂದೂ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಅಲ್ಲದೆ, ಲಕ್ನೋ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಅವರು ರಿಷಭ್ ಪಂತ್ ಅವರನ್ನು ತರಾಟೆ ತೆಗೆದುಕೊಂಡಿರುವ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

Story first published: Wednesday, April 2, 2025, 17:46 [IST]
Other articles published on Apr 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+