T20 World Cup 2024: ಟಿ20 ಕ್ರಿಕೆಟ್‌ನಲ್ಲಿ ವಿಶ್ವದ ದಿಗ್ಗಜ ವಿಕೆಟ್ ಕೀಪರಗಳನ್ನು ಹಿಂದಿಕ್ಕಿದ ರಿಷಬ್ ಪಂತ್!
ಜೂನ್ 21 ಶುಕ್ರವಾರ, ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಬ್ ಪಂತ್ ಗುರುವಾರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಹಿಂದೆ ಅದ್ಭುತ ಪ್ರದರ್ಶನ ನೀಡುವ ಮೂಲಕ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.
ಟಿ20 ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ಬ್ಯಾಟರ್‌ಗಳನ್ನು ಔಟ್ ಮಾಡಿದ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಪಂತ್ ಈ ಅದ್ಭುತ ಸಾಧನೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ರಿಷಭ್ ಪಂತ್ 3 ಕ್ಯಾಚ್ ಪಡೆದು ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್, ಗುಲ್ಬದಿನ್ ನೈಬ್ ಮತ್ತು ನವೀನ್ ಉಲ್ ಹಕ್ ಅವರನ್ನು ಔಟ್ ಮಾಡಿದರು. ಇದರೊಂದಿಗೆ 2024ರ ಟಿ20 ವಿಶ್ವಕಪ್‌ನಲ್ಲಿ 10 ಆಟಗಾರರನ್ನು ವಿಕೆಟ್ ಹಿಂದೆಯೇ ಔಟ್ ಮಾಡಿದ ಮೊದಲ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.
ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಮತ್ತು ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಆಡಮ್ ಗಿಲ್‌ಕ್ರಿಸ್ಟ್ ಅವರನ್ನು 26 ವರ್ಷದ ರಿಷಬ್ ಪಂತ್ ಹಿಂದಿಕ್ಕಿದ್ದಾರೆ. ಈ ದಿಗ್ಗಜ ವಿಕೆಟ್ ಕೀಪರ್‌ಗಳು ಟಿ20 ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ತಲಾ 9 ವಿಕೆಟ್‌ಗಳನ್ನು ಪಡೆದಿದ್ದಾರೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಂತ್ 11 ಪಂದ್ಯಗಳಲ್ಲಿ 12 ಬಾರಿ ಔಟ್ ಮಾಡಿದ್ದು, ಭಾರತದ ಎರಡನೇ ಯಶಸ್ವಿ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪಂತ್ ಅವರ ಹೆಸರಿನಲ್ಲಿ 11 ಕ್ಯಾಚ್ ಮತ್ತು 1 ಸ್ಟಂಪಿಂಗ್ ಸೇರಿದೆ.
2024ರ ಟಿ20 ವಿಶ್ವಕಪ್‌ನಲ್ಲಿ ವಿಕೆಟ್ ಹಿಂದೆ ಅತಿ ಹೆಚ್ಚು ಬಾರಿ ಬ್ಯಾಟರ್‌ಗಳನ್ನು ಔಟ್ ಮಾಡಿರುವ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿ ಪಂತ್ ಮೊದಲಿಗರಾಗಿದ್ದಾರೆ. ಪಂತ್ ನಂತರ ನ್ಯೂಜಿಲೆಂಡ್‌ನ ಡೆವೊನ್ ಕಾನ್ವೇ 6 ಔಟ್ (5 ಕ್ಯಾಚ್ ಮತ್ತು 1 ಸ್ಟಂಪಿಂಗ್) ಮಾಡಿ ಎರಡನೇ ಸ್ಥಾನದಲ್ಲಿದ್ದಾರೆ.
ಟೀಮ್ ಇಂಡಿಯಾ ಎಡಗೈ ಬ್ಯಾಟರ್ ರಿಷಬ್ ಪಂತ್ ತಮ್ಮ ವೃತ್ತಿಜೀವನದಲ್ಲಿ ಎರಡನೇ ಟಿ20 ವಿಶ್ವಕಪ್ ಆಡುತ್ತಿದ್ದಾರೆ. ವಿಕೆಟ್ ಕೀಪಿಂಗ್ ಮಾತ್ರವಲ್ಲದೆ, ಬ್ಯಾಟ್‌ನಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಂತ್ ಅವರು 4 ಇನ್ನಿಂಗ್ಸ್‌ಗಳಲ್ಲಿ 38.66 ಸರಾಸರಿ ಮತ್ತು 131.81 ಸ್ಟ್ರೈಕ್ ರೇಟ್‌ನಲ್ಲಿ 116 ರನ್ ಗಳಿಸಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.
ಪಂತ್ ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಅಜೇಯ 36* (26) ಗಳಿಸಿದರೆ, ಪಾಕಿಸ್ತಾನದ ವಿರುದ್ಧ 42 (21) ಹೊಡೆದಿದ್ದರು. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಂತ್ 11 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 20 ರನ್ ಬಾರಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications