For Quick Alerts
ALLOW NOTIFICATIONS  
For Daily Alerts
 

ಭಾರತೀಯರು ಮಾಡಿರದ ವಿಶೇಷ ದಾಖಲೆ ಬರೆದ ರಿಷಭ್ ಪಂತ್

Rishabh Pant ranked number 6 at the age of 23 in Test Cricket

ನವದೆಹಲಿ: ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್‌ ಕಮ್ ವಿಕೆಟ್‌ ಕೀಪರ್ ರಿಷಭ್ ಪಂತ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡಿರದ ವಿಶೇಷ ಸಾಧನೆ ಮಾಡಿದ್ದಾರೆ. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರ್‍ಯಾಂಕಿಂಗ್‌ನಲ್ಲಿ ಪಂತ್‌ ಈಗ 6ನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತೀಯ ಕಿರಿಯ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಒಬ್ಬ 10ನೇ ಶ್ರೇಯಾಂಕದೊಳಗೆ ಕಾಣಿಸಿಕೊಂಡಿರಲಿಲ್ಲ. ಆದರೆ ಈಗಿನ್ನೂ 23ರ ಹರೆಯದ ಪಂತ್ ಸದ್ಯ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ 6ನೇ ಸ್ಥಾನದಲ್ಲಿದ್ದಾರೆ. ವಿಶೇಷವೆಂದರೆ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ 8ನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಪಂತ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಹೀಗಾಗಿ ಪಂದ್ಯ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡಿದ್ದಾರೆ. 747 ರೇಟಿಂಗ್‌ ಪಾಯಿಂಟ್ಸ್‌ನೊಂದಿಗೆ ಪಂತ್‌ 6ನೇ ಸ್ಥಾನದಲ್ಲಿದ್ದರೆ, 814 ಪಾಯಿಂಟ್ಸ್‌ನೊಂದಿಗೆ ಭಾರತದ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್, 2ರಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್, 3ರಲ್ಲಿ ಆಸ್ಟ್ರೆಲಿಯಾದ ಮಾರ್ನಸ್ ಲ್ಯಬುಶೇನ್ ಇದ್ದಾರೆ. ಟೆಸ್ಟ್‌ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದರೆ, ಆಲ್ ರೌಂಡರ್‌ಗಳಲ್ಲಿ ವೆಸ್ಟ್‌ ಇಂಡೀಸ್‌ನ ಜೇಸನ್ ಹೋಲ್ಡರ್ ನಂ.1 ಸ್ಥಾನದಲ್ಲಿದ್ದಾರೆ.

Story first published: Thursday, May 6, 2021, 9:58 [IST]
Other articles published on May 6, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+