ICC Test rankings: ಭರ್ಜರಿ ಕಂ ಬ್ಯಾಕ್ ಮಾಡಿದ ಪಂತ್ ಶ್ರೇಯಾಂಕದಲ್ಲಿ ಏರಿಕೆ: ಅಶ್ವಿನ್ ನಂಬರ್ 1 ಬೌಲರ್
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ರಿಷಭ್ ಪಂತ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ. ಇವರು ಗಾಯದಿಂದ ಚೇತರಿಸಿಕೊಂಡ ಬಳಿಕ ಚೆನ್ನೈನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಿ, ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ತಂಡಕ್ಕೆ ಆಧಾರವಾದರು. ಇವರ ಭರ್ಜರಿ ಆಟದ ನೆರವಿನಿಂದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲೂ ಭಾರೀ ಏರಿಕೆ ಕಂಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ಗೂ ರಿಷಭ್ ಸೊಗಸಾಗಿ ಎಂಟ್ರಿ ಕೊಟ್ಟಿದ್ದಾರೆ.
ಮೊದಲ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರಿಷಭ್ ಪಂತ್ ಹಾಗೂ ಶುಭಮನ್ ಗಿಲ್ ಅವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಇನ್ನು ಯಶಸ್ವಿ ಜೈಸ್ವಾಲ್ ಸಹ ಒಂದು ಸ್ಥಾನ ಏರಿಕೆ ಕಂಡಿದ್ದು 751 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ವಿರಾಟ್ ರೋಹಿತ್, ಐದು ಸ್ಥಾನ ಕುಸಿತ
ಬಾಂಗ್ಲಾದೇಶದ ವಿರುದ್ಧ ಶತಕ ಬಾರಿಸಿದ್ದ ರಿಷಭ್ ಪಂತ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಆರನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇವರು 731 ಅಂಕಗಳನ್ನು ಕಲೆ ಹಾಕಿದ್ದಾರೆ. ಉಳಿದಂತೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಐದು ಸ್ಥಾನ ಕುಸಿತ ಕಂಡಿದ್ದು 10ನೇ ಸ್ಥಾನವನ್ನು ಹೊಂದಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಹ ಐದು ಸ್ಥಾನ ಕುಸಿತ ಕಂಡಿದ್ದು, 12ನೇ ಸ್ಥಾನದಲ್ಲಿದ್ದಾರೆ.
ಬಾಂಗ್ಲಾದೇಶದ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಯುವ ಆಟಗಾರ ಶುಭಮನ್ ಗಿಲ್ ಸಹ ಐದು ಸ್ಥಾನ ಏರಿಕೆ ಕಂಡಿದ್ದು, 14ನೇ ಸ್ಥಾನವನ್ನು ತಲುಪಿದ್ದಾರೆ.

ಜೋ ರೂಟ್ ನಂಬರ್ 1
ಬ್ಯಾಟರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಭರವಸೆಯ ಆಟಗಾರ ಜೋ ರೂಟ್ ನಂಬರ 1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇನ್ನು 852 ಅಂಕಗಳೊಂದಿಗೆ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನ, ಕಿವೀಸ್ ತಂಡದ ಡೇರಿಲ್ ಮಿಚೆಲ್ ಮೂರನೇ ಸ್ಥಾನದಲ್ಲಿದ್ದಾರೆ.
ಟಾಪ್ 10ರಲ್ಲಿ ಮೂವರು ಭಾರತೀಯರು
ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲೂ ಭಾರತದ ಮೂವರು ಆಟಗಾರರು ಟಾಪ್ 10ರಲ್ಲಿ ಸ್ಥಾನ ಪಡೆದಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಎರಡನೇ ಇನಿಂಗ್ಸ್‌ನಲ್ಲಿ ಆರು ವಿಕೆಟ್ ಕಬಳಿಸಿದ್ದ ಸ್ಪಿನ್ ಮಾಂತ್ರಿಕ ಅಶ್ವಿನ್ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇವರು 871 ಅಂಕಗಳನ್ನು ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಇದ್ದಾರೆ. ಬುಮ್ರಾ 854 ಅಂಕಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಉಳಿದಂತೆ ಟೀಮ್ ಇಂಡಿಯಾದ ಇನ್ನೋರ್ವ ಸ್ಪಿನ್ ಬೌಲರ್ ರವೀಂದ್ರ ಜಡೇಜಾ ಒಂದು ಸ್ಥಾನ ಏರಿಕೆ ಕಂಡಿದ್ದು, ಆರನೇ ಸ್ಥಾನ ತಲುಪಿದ್ದಾರೆ.
ಜಡೇಜಾ ನಂಬರ್ 1 ಆಲ್‌ರೌಂಡರ್
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಪಟ್ಟವನ್ನು ಅಲಂಕರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನ ರವಿಚಂದ್ರನ್ ಅಶ್ವಿನ್ ಅವರ ಪಾಲಾಗಿದೆ. ಬಾಂಗ್ಲಾದೇಶದ ಶಕೀಬ್ ಉಲ್ ಹಸನ್ ಮೂರನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications