IPL 2023: ಐಪಿಎಲ್‌ನಿಂದ ರಿಷಬ್ ಪಂತ್ ಹೊರಕ್ಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈತನೇ ನಾಯಕ?

ಅಪಘಾತದಲ್ಲಿ ಗಾಯಗೊಂಡಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್‌ಗೆ ಮರಳಲು ಹಲವು ತಿಂಗಳು ಸಮಯಾವಕಾಶ ಬೇಕಾಗುತ್ತದೆ. ರಿಷಬ್ ಪಂತ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ, ಈಗ ಅವರು 2023ರ ಐಪಿಎಲ್‌ನಿಂದ ಕೂಡ ಹೊರಗುಳಿಯುವುದು ಖಚಿತವಾಗಿದೆ.
ಸುಮಾರು ಆರು ತಿಂಗಳು ಕಾಲ ಪಂತ್ ವಿಶ್ರಾಂತಿ ಪಡೆಯಬೇಕಾದ ಕಾರಣ ಅವರು 2023ರ ಐಪಿಎಲ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಐಪಿಎಲ್‌ನಿಂದ ಹೊರಬಿದ್ದಿರುವುದು ತಂಡಕ್ಕೆ ಭಾರಿ ಹಿನ್ನಡೆ ಉಂಟುಮಾಡಿದೆ.
ಹೊಸ ನಾಯಕನ ಹುಡುಕಾಟದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ ಮೊದಲ ಆಯ್ಕೆಯಾಗಲಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕನಾಗಿ ಕಪ್ ಗೆದ್ದುಕೊಟ್ಟಿರುವ ಡೇವಿಡ್ ವಾರ್ನರ್ 2023ರ ಐಪಿಎಲ್‌ನಲ್ಲಿ ಡೆಲ್ಲಿ ತಂಡಕ್ಕೆ ನಾಯಕನಾಗಿ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನ ಸ್ಥಾನಕ್ಕೆ ಇನ್ನೂ ಹಲವು ಆಯ್ಕೆಗಳಿವೆ. ಮನೀಶ್ ಪಾಂಡೆ ಕೂಡ ಐಪಿಎಲ್‌ನಲ್ಲಿ ಹೆಚ್ಚಿನ ಅನುಭವ ಹೊಂದಿದ್ದಾರೆ. ಮಿಚೆಲ್ ಮಾರ್ಷ್ ಮತ್ತು ಪೃಥ್ವಿ ಶಾರನ್ನು ಕೂಡ ನಾಯಕನ ಸ್ಥಾನಕ್ಕೆ ಪರಿಗಣಿಸಬಹುದಾಗಿದೆ.

ಪಂತ್ ಚೇತರಿಸಿಕೊಳ್ಳಲು 6 ತಿಂಗಳು ಬೇಕು
ಶುಕ್ರವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದ ನಂತರ ಅವರಿಗೆ ಯಾವುದೇ ಮುರಿದ ಮೂಳೆಗಳು ಅಥವಾ ಗಮನಾರ್ಹ ಆಂತರಿಕ ಗಾಯಗಳಿಲ್ಲದಿದ್ದರೂ, ಮೊಣಕಾಲಿನ ಅಸ್ಥಿರಜ್ಜು ಗಾಯಗೊಂಡಿರುವುದು ಅವರನ್ನು ಕ್ರಿಕೆಟ್‌ನಿಂದ ಹಲವು ತಿಂಗಳ ಕಾಲ ದೂರವಿಡುವಂತೆ ಮಾಡಲಿದೆ.
"ಪಂತ್ ಅಸ್ಥಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರರಿಂದ ಆರು ತಿಂಗಳು ತೆಗೆದುಕೊಳ್ಳುತ್ತದೆ. ಗಾಯ ತೀವ್ರವಾಗಿದ್ದರೆ, ಸುಧಾರಿಸಿಕೊಳ್ಳಲು ಇನ್ನೂ ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಅವರ ವಿವರವಾದ ಗಾಯದ ವರದಿಯನ್ನು ಆಧರಿಸಿ ಹೆಚ್ಚಿನ ಮೌಲ್ಯಮಾಪನವನ್ನು ಮಾಡಬಹುದು," ಎಂದು AIIMS-ರಿಷಿಕೇಶ್‌ನ ಕ್ರೀಡಾ ಗಾಯ ವಿಭಾಗದ ಮುಖ್ಯಸ್ಥ ಡಾ. ಕಮರ್ ಅಜಮ್ ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
"ರಿಷಬ್ ಪಂತ್ ಚಿಕಿತ್ಸೆ ಪಡೆಯುತ್ತಿದ್ದಾರೆ, ಈಗಗಲೇ ಯಾವುದನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಅವರು ವಿಶ್ರಾಂತಿ ಪಡೆಯಲಿ, ಸಂಪೂರ್ಣವಾಗಿ ಚೇತರಿಸಿಕೊಂಡು ಹೊರಬರಲಿ. ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ಅವರು ಮೌಲ್ಯಮಾಪನಕ್ಕಾಗಿ ಎನ್‌ಸಿಗೆ ವರದಿ ಮಾಡುತ್ತಾರೆ, ವೈದ್ಯರ ಪ್ರಕಾರ ಅವರು ಆರು ತಿಂಗಳು ವಿಶ್ರಾಂತಿ ಪಡೆಯಬೇಕಾಗುತ್ತದೆ. ಸಮಯ ಬಂದಾಗ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಬಿಸಿಸಿಐ ವೈದ್ಯಕೀಯ ತಂಡ ಪಂತ್ ಆಸ್ಪತ್ರೆಯ ವೈದ್ಯರ ಜೊತೆ ಸಂಪರ್ಕದಲ್ಲಿದೆ" ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಡೇವಿಡ್ ವಾರ್ನರ್ ಹೊಸ ನಾಯಕ?
ಹಲವು ಆಯ್ಕೆಯಗಳನ್ನು ಹೊಂದಿರುವ ಹೊರತಾಗಿಯೂ ಡೇವಿಡ್ ವಾರ್ನರ್ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಕಳಪೆ ಫಾರ್ಮ್ ಕಾರಣದಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ 2021ರಲ್ಲಿ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಿತು. ನಂತರ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡರು. ಸದ್ಯ 100ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಮೂಲಕ ವಾರ್ನರ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ.
ಆದರೂ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಕ್ಷಣದವರೆಗೆ ಯಾವುದೇ ತೀರ್ಮಾನ ತೆಗೆದುಕೊಳ್ಳದಿರಲು ನಿರ್ಧರಿಸಿದೆ. ರಿಷಬ್ ಪಂತ್ ಶೀಘ್ರದಲ್ಲಿ ಗುಣಮುಖರಾಗುತ್ತಾರೆ ಎಂದು ಡೆಲ್ಲಿ ಫ್ರಾಂಚೈಸಿ ಆಶಿಸುತ್ತಿದೆ. ಬಿಸಿಸಿಐ ಕೂಡ ತಕ್ಷಣಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಬಯಸುವುದಿಲ್ಲ. ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ, ಆದರೆ ಐಪಿಎಲ್ ಆಡುವುದರ ಬಗ್ಗೆ ಇನ್ನೂ ಯಾವ ತೀರ್ಮಾನ ತೆಗೆದುಕೊಂಡಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ
ರಿಷಬ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಚ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್, ಇಶಾಂತ್ ಶರ್ಮಾ, ಫಿಲ್ ಸಾಲ್ಟ್, ಮುಖೇಶ್ ಕುಮಾರ್, ಮನೀಶ್ ಪಾಂಡೆ, ರಿಲೀ ರೊಸೌವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications