WTC Final: ನ್ಯೂಜಿಲೆಂಡ್ ವಿರುದ್ಧ ಗೆಲ್ಲಬೇಕೆಂದರೆ ಭಾರತದ ಈ ಆಟಗಾರ ಆಡಲೇಬೇಕು ಎಂದ ಕಿರಣ್ ಮೋರೆ

ಜೂನ್ 18-22ರವರೆಗೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಟೀಮ್ ಇಂಡಿಯಾ ತಂಡ ಈಗಾಗಲೇ ಸೌತಂಪ್ಟನ್ ತಲುಪಿ ಕ್ವಾರಂಟೈನ್ ನಿಯಮವನ್ನು ಅನುಸರಿಸುತ್ತಿದ್ದು, ಈ ಹಿಂದೆಯೇ ಇಂಗ್ಲೆಂಡ್ ತಲುಪಿರುವ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಆಡುತ್ತಿದೆ.
ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಭಾರತ ಗೆದ್ದು ಬೀಗಿದ್ದ ಟೆಸ್ಟ್ ಸರಣಿಯೇ ಅತ್ಯುತ್ತಮ ಎಂದು ಘೋಷಿಸಿದ ಐಸಿಸಿ
ಜೂನ್ 18ರಿಂದ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಪಂದ್ಯದ ಕುರಿತಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕ್ರಿಕೆಟ್ ಪಂಡಿತರು, ಕ್ರೀಡಾಭಿಮಾನಿಗಳು ಹಾಗೂ ಮಾಜಿ ಕ್ರಿಕೆಟಿಗರು ಈ ಪಂದ್ಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಈ ಬಾರಿಯ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಗದೇ ಮೂಲೆಗುಂಪಾದ 9 ಭಾರತೀಯ ಕ್ರಿಕೆಟಿಗರು!
ಇತ್ತೀಚಿಗಷ್ಟೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಮಾಜಿ ಕ್ರಿಕೆಟಿಗ ಕಿರಣ್ ಮೋರೆ ಮಾತನಾಡಿದ್ದು ರಿಷಭ್ ಪಂತ್ ಭಾರತ ತಂಡದ ಪ್ರಮುಖ ಆಟಗಾರ ಎಂದಿದ್ದಾರೆ. 'ಕಳೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ರಿಷಭ್ ಪಂತ್ ಭಾರತ ತಂಡದ ಪ್ರಮುಖ ಆಟಗಾರನಾಗಿ ಮಿಂಚಿದ್ದರು. ಅದೇ ರೀತಿ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿಯೂ ಸಹ ರಿಷಭ್ ಪಂತ್ ಪ್ರಮುಖ ಆಟಗಾರನಾಗಿ ಮಿಂಚಲಿದ್ದಾರೆ. ಪಂತ್ ಟೆಸ್ಟ್ ಕ್ರಿಕೆಟ್‍ನಲ್ಲಿ ಪಳಗಿದ್ದು ಭಾರತ ತಂಡದ ಪರ ಗೇಮ್ ಚೇಂಜರ್ ಆಗುವುದು ಖಚಿತ' ಎಂದು ಕಿರಣ್ ಮೋರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications