ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರಿಷಭ್ ಪಂತ್ ಧೋನಿಯ ಈ ಬೃಹತ್‌ ದಾಖಲೆ ಮುರಿದು ನಂಬರ್ ಒನ್ ಆಗುತ್ತಾರೆ ಎಂದ ಮಾಜಿ ಕ್ರಿಕೆಟಿಗ

Rishbh Pant will become Indias highest scoring wicket keeper in test format says Irfan Pathan

ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿದ್ದ ಶ್ರೀಲಂಕಾ ಟೀಮ್ ಇಂಡಿಯಾ ವಿರುದ್ಧದ ಟಿ ಟ್ವೆಂಟಿ ಹಾಗೂ ಟೆಸ್ಟ್ ಎರಡೂ ಸರಣಿಗಳಲ್ಲಿಯೂ ವೈಟ್‌ವಾಷ್ ಮುಖಭಂಗಕ್ಕೆ ಒಳಗಾಗಿದೆ. ಇತ್ತ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದು, ಶ್ರೀಲಂಕಾ ವಿರುದ್ಧ ನಡೆದ ಎರಡೂ ಟೆಸ್ಟ್ ಪಂದ್ಯಗಳೂ ಮೂರೇ ದಿನಕ್ಕೆ ಮುಕ್ತಾಯವಾಗುವಂತ ಪ್ರದರ್ಶನ ನೀಡಿದೆ. ಮೊದಲನೇ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಇನ್ನಿಂಗ್ಸ್ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಉತ್ತಮ ಪ್ರದರ್ಶನ ನೀಡಿದರು. ಹಾಗೂ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 238 ರನ್‌ಗಳ ಬೃಹತ್ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಪರ ಶ್ರೇಯಸ್ ಐಯ್ಯರ್ ಮತ್ತು ರಿಷಭ್ ಪಂತ್ ಉತ್ತಮ ಪ್ರದರ್ಶನ ನೀಡಿದರು.

ಐಪಿಎಲ್ 2022: ಬಲಿಷ್ಟ ಸಿಎಸ್‌ಕೆಯನ್ನು ಎದುರಿಸಿ ಕಠಿಣ ಪೈಪೋಟಿ ನೀಡಬಲ್ಲ ಸಾಮರ್ಥ್ಯವಿರುವ 3 ತಂಡಗಳಿವುಐಪಿಎಲ್ 2022: ಬಲಿಷ್ಟ ಸಿಎಸ್‌ಕೆಯನ್ನು ಎದುರಿಸಿ ಕಠಿಣ ಪೈಪೋಟಿ ನೀಡಬಲ್ಲ ಸಾಮರ್ಥ್ಯವಿರುವ 3 ತಂಡಗಳಿವು

ಹೀಗೆ ಶ್ರೀಲಂಕಾ ವಿರುದ್ಧದ ಪ್ರಥಮ ಮತ್ತು ದ್ವಿತಿಯ ಎರಡೂ ಟೆಸ್ಟ್ ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಸರಣಿ ಶ್ರೇಷ್ಠ ಪ್ರಶಸ್ತಿಗೂ ಸಹ ಭಾಜನರಾಗಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಟ್ಟು 3 ಇನ್ನಿಂಗ್ಸ್‌ನಲ್ಲಿ 120ಕ್ಕೂ ಅಧಿಕ ರನ್‌ರೇಟ್‌ನೊಂದಿಗೆ ಒಟ್ಟು 185 ರನ್ ಬಾರಿಸಿ ಹೀರೋ ಆಗಿ ಮಿಂಚಿರುವ ರಿಷಭ್ ಪಂತ್ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗರೊಬ್ಬರು ಈತ ಟೆಸ್ಟ್ ಕ್ರಿಕೆಟ್‌ನಲ್ಲಿ ಬೃಹತ್ ದಾಖಲೆ ನಿರ್ಮಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಕಂಡಂತಿದೆ.

ರಿ‍ಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆ ಬರೆಯಲಿದ್ದಾರೆ

ರಿ‍ಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆ ಬರೆಯಲಿದ್ದಾರೆ

"ಆತ ( ರಿಷಭ್ ಪಂತ್ ) 24 ವರ್ಷದ ಹುಡುಗ, ಇನ್ನೂ ಚಿಕ್ಕವಯಸ್ಸಿನವನಾಗಿದ್ದರೂ ಆತನ ಕ್ರಿಕೆಟ್‌ನಲ್ಲಿ ತುಂಬಾ ಅಭಿವೃದ್ದಿ ಕಾಣುತ್ತಿದೆ. ಹಾಗೂ ಆತ ಇನ್ನೂ ಹತ್ತು ವರ್ಷಗಳ ಕಾಲ ಕ್ರಿಕೆಟ್ ಆಡಲಿದ್ದು, ಆತ ತನ್ನ ಕ್ರಿಕೆಟ್ ವೃತ್ತಿಜೀವನ ಅಂತ್ಯಗೊಳಿಸುವ ಸಮಯಕ್ಕೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಆಗಿರುತ್ತಾನೆ. ಇದರ ಬಗ್ಗೆ ನನಗೆ ಯಾವುದೇ ಅನುಮಾನವಿಲ್ಲ" ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.

ಧೋನಿ ಹೆಸರಲ್ಲಿದೆ ಈ ದಾಖಲೆ

ಧೋನಿ ಹೆಸರಲ್ಲಿದೆ ಈ ದಾಖಲೆ

ಇನ್ನು ಇರ್ಫಾನ್ ಹೇಳಿರುವ ಪ್ರಕಾರ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಎನಿಸಿಕೊಳ್ಳಬೇಕೆಂದರೆ ಈಗಾಗಲೇ ಈ ದಾಖಲೆಯನ್ನು ನಿರ್ಮಿಸಿರುವ ಭಾರತದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಅವರನ್ನು ಹಿಂದಿಕ್ಕಬೇಕಿದೆ. ಎಂಎಸ್ ಧೋನಿ 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್ ಗಳಿಸಿದ್ದು, ಅತಿಹೆಚ್ಚು ಟೆಸ್ಟ್ ರನ್ ಗಳಿಸಿರುವ ಭಾರತದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯದ ಸಮಯಕ್ಕೆ ರಿಷಭ್ ಪಂತ್ 30 ಟೆಸ್ಟ್ ಪಂದ್ಯಗಳನ್ನಾಡಿದ್ದು, 1920 ರನ್ ಗಳಿಸಿದ್ದಾರೆ. ಇನ್ನು ಕೇವಲ 24 ವರ್ಷದ ರಿಷಭ್ ಪಂತ್ ಈಗಾಗಲೇ ಇಷ್ಟು ರನ್ ಕಲೆಹಾಕಿದ್ದು ತನ್ನ ನಿವೃತ್ತಿಯ ಹೊತ್ತಿಗೆ ಇರ್ಫಾನ್ ಪಠಾಣ್ ಹೇಳಿದ ದಾಖಲೆ ನಿರ್ಮಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಯಾರು?

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಯಾರು?

ಆಸ್ಟ್ರೇಲಿಯಾದ ಆಡಮ್ ಗಿಲ್‌ಕ್ರಿಸ್ಟ್ 96 ಟೆಸ್ಟ್ ಪಂದ್ಯಗಳನ್ನಾಡಿದ್ದು, 5570 ರನ್ ಕಲೆಹಾಕಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಇನ್ನು 147 ಟೆಸ್ಟ್ ಪಂದ್ಯಗಳನ್ನಾಡಿರುವ ದಕ್ಷಿಣ ಆಫ್ರಿಕಾದ ಮಾರ್ಕ್ ಬೌಷರ್ 5515 ರನ್ ಗಳಿಸಿದ್ದು ಅತಿಹೆಚ್ಚು ಟೆಸ್ಟ್ ರನ್ ಗಳಿಸಿದ ಎರಡನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ ಹಾಗೂ 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್ ಕಲೆಹಾಕಿರುವ ಎಂಎಸ್ ಧೋನಿ ಈ ದಾಖಲೆಯಲ್ಲಿ ತೃತೀಯ ಸ್ಥಾನದಲ್ಲಿದ್ದಾರೆ.

Story first published: Tuesday, March 15, 2022, 16:54 [IST]
Other articles published on Mar 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X