Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಇಂಗ್ಲೆಂಡ್‌: ಸುದ್ದಿಗೋಷ್ಠಿಯಲ್ಲಿ ಕೊಹ್ಲಿ ಮಾತು-ವಿಡಿಯೋ

Rishabh Pant will take the gloves tomorrow: Virat Kohli

ಚೆನ್ನೈ: ಭಾರತ-ಆಸ್ಟ್ರೇಲಿಯಾ ಪ್ರವಾಸ ಸರಣಿ ಮುಕ್ತಾಯದ ಬಳಿಕ ಇಂಗ್ಲೆಂಡ್-ಭಾರತ ಸರಣಿ ಆರಂಭವಾಗುತ್ತಿದೆ. ಫೆಬ್ರವರಿ 5ರಿಂದ ಚೆನ್ನೈನಲ್ಲಿ ಈ ಪ್ರವಾಸ ಸರಣಿ ಶುರುವಾಗಲಿದೆ. ಸುಮಾರು ಒಂದು ವರ್ಷದ ಬಳಿಕ ಭಾರತದಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ ಟೂರ್ನಿಯಿದು. ಕೊರೊನಾವೈರಸ್ ಕಾರಣದಿಂದಾಗಿ ವರ್ಷದ ಕಾಲ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿ ನಡೆದಿರಲಿಲ್ಲ.

ಫೆಬ್ರವರಿ 5ರಂದು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿರುವ ಮೊದಲ ಟೆಸ್ಟ್‌ಗೂ ಮುನ್ನ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಪ್ರಮುಖ ಮಾಹಿತಿ ಹಂಚಿಕೊಂಡಿದ್ದಾರೆ.

ಆರಂಭಿಕ ಪಂದ್ಯದಲ್ಲಿ ರಿಷಭ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊರಲಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಸರಣಿಯ ಬಳಿಕ ಪಂತ್ ಆತ್ಮವಿಶ್ವಾಸ ಹೆಚ್ಚಿದೆ. ಅವರು ಶ್ರಮ ಪಡುತ್ತಿದ್ದಾರೆ. ಹೀಗಾಗಿ ಅವರೇ ಆರಂಭಿಕ ಪಂದ್ಯದಲ್ಲಿ ವಿಕೆಟ್ ಕೀಪಿಂಗ್‌ ಶುರುಮಾಡಲಿದ್ದಾರೆ ಎಂದಿದ್ದಾರೆ.

ಆರಂಭಿಕ ಎರಡು ಟೆಸ್ಟ್ ಪಂದ್ಯಗಳು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಬಳಿಕ ಇನ್ನುಳಿದ ಎರಡು ಟೆಸ್ಟ್ ಪಂದ್ಯಗಳು ಮತ್ತು ಐದು ಟಿ20ಐ ಪಂದ್ಯಗಳು ಅಹ್ಮದಾಬಾದ್‌ನ ಮೊಟೆರಾ ಸ್ಟೇಡಿಯಂನಲ್ಲಿ ನಡೆಯಲಿವೆ. ಅದಾಗಿ ಮೂರು ಪಂದ್ಯಗಳ ಏಕದಿನ ಸರಣಿ ಪೂಣೆ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಳಿನ ಟೆಸ್ಟ್ 9:30 AMಗೆ ಆರಂಭಗೊಳ್ಳಲಿದೆ.

Story first published: Thursday, February 4, 2021, 20:32 [IST]
Other articles published on Feb 4, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+