ರಿಷಭ್ ಪಂತ್ ಶತಕ: ಆರ್‌ಸಿಬಿಗೆ ಬೃಹತ್ ಮೊತ್ತದ ಗುರಿಯನ್ನು ನೀಡಿದ ಎಲ್‌ಎಸ್‌ಜಿ
ನಾಯಕ ರಿಷಭ್ ಪಂತ್ ಅವರು ಬಾರಿಸಿದ ಶತಕದ ಸಹಾಯದಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬೃಹತ್ ಮೊತ್ತದ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೀಡಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಅಂಕ ಪಟ್ಟಿಯಲ್ಲಿ ಬಡ್ತಿ ಪಡೆದು ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯಲು ಪ್ಲ್ಯಾನ್ ಮಾಡಿಕೊಂಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಮ್ಯಾಥ್ಯೂ ಬ್ರೀಟ್ಜ್ಕೆ 14 ರನ್ ಕಲೆ ಹಾಕಿ ಔಟ್ ಆದರು. ಎರಡನೇ ವಿಕೆಟ್‌ಗೆ ಮಿಚೆಲ್ ಮಾರ್ಷ್ ಹಾಗೂ ನಾಯಕ ರಿಷಭ್ ಪಂತ್ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕಲು ಆರ್‌ಸಿಬಿ ಬೌಲರ್‌ಗಳು ವಿಫಲರಾದರು. ಪವರ್ ಪ್ಲೇನಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸಿದ ಎಲ್‌ಎಸ್‌ಜಿ 1 ವಿಕೆಟ್ ನಷ್ಟಕ್ಕೆ 55 ರನ್ ಸಿಡಿಸಿತು.

ಭರ್ಜರಿ ಜೊತೆಯಾಟ
ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಸೆಟ್ ಆಗ್ತಾ ಇದ್ದಂತೆ ತಮ್ಮ ಬ್ಯಾಟಿಂಗ್ ಗೇರ್ ಶಿಫ್ಟ್ ಮಾಡಿದರು. ಈ ಜೋಡಿ ಮಿಡ್ಲ್ ಆರ್ಡರ್‌ನಲ್ಲಿ ರನ್‌ಗಳನ್ನು ಕಲೆ ಹಾಕಿ ಅಬ್ಬರಿಸಿತು. ಹಂತ ಹಂತವಾಗಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಜೋಡಿ ದೊಡ್ಡ ಮೊತ್ತವನ್ನು ಕಲೆ ಹಾಕುವತ್ತ ದೃಷ್ಟಿ ನೆಟ್ಟಿತು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಆರ್‌ಸಿಬಿ ಬೌಲರ್‌ಗಳು ವಿಫಲರಾದರು. ಈ ಜೋಡಿ ಮಿಡ್ಲ್ ಓವರ್‌ಗಳಲ್ಲಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು.

ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 78 ಎಸೆತಗಳಲ್ಲಿ 152 ರನ್ ಸಿಡಿಸಿತು. ಮಿಚೆಲ್ ಮಾರ್ಷ್ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 67 ರನ್ ಸಿಡಿಸಿ, ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು.
ರಿಷಭ್ ಪಂತ್ ಅಬ್ಬರ
ರಿಷಭ್ ಪಂತ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ಇವರು ಆರಂಭದಲ್ಲಿ ತಾಳ್ಮೆಯಿಂದ ಬ್ಯಾಟಿಂಗ್ ನಡೆಸಿ ಅಬ್ಬರಿಸಿದರು. ಅಲ್ಲದೆ 55 ಎಸೆತದಲ್ಲಿ 10 ಬೌಂಡರಿ, 6 ಸಿಕ್ಸರ್ ಸಹಾಯದಿಂದ ಶತಕ ಬಾರಿಸಿ ಮಿಂಚಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ರಿಷಭ್ ಪಂತ್ ಎರಡನೇ ಶತಕ ಬಾರಿಸಿದರು. ಅಲ್ಲದೆ ಪ್ರಸಕ್ತ ಐಪಿಎಲ್‌ನಲ್ಲಿ ದಾಖಲಾದ 9ನೇ ಶತಕವಾಗಿದೆ.ರಿಷಭ್ ಪಂತ್ 61 ಎಸೆತಗಳಲ್ಲಿ 11 ಬೌಂಡರಿ, 8 ಸಿಕ್ಸರ್ ಸಹಾಯದಿಂದ ಅಜೇಯ 118 ರನ್ ಸಿಡಿಸಿದರು. ಇವರ ಅಮೋಘ ಬ್ಯಾಟಿಂಗ್ ಬಲದಿಂದ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಕಲೆ ಹಾಕಿದೆ.
ಆರ್‌ಸಿಬಿ ಪರ ನುವಾನ್ ತುಷಾರ್, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ತಲಾ ಒಂದು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications