ರಿಯಾನ್ ಪರಾಗ್ ಅಬ್ಬರ: ಡೆಲ್ಲಿಗೆ 226 ರನ್ ಗುರಿ ನೀಡಿದ ರಾಯಲ್ಸ್
ಜೈಪುರ್: ನಾಯಕ ರಿಯಾನ್ ಪರಾಗ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 19ನೇ ಆವೃತ್ತಿ ಐಪಿಎಲ್‌ನ 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 226 ರನ್‌ಗಳ ಗುರಿಯನ್ನು ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (6) ಹಾಗೂ ವೈಭವ್ ಸೂರ್ಯವಂಶಿ (4) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ವಿಶ್ವದ ಖ್ಯಾತ ನಾಮ ಬೌಲರ್‌ಗಳ ವಿರುದ್ಧ ಮೊದಲ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿದ್ದ ವೈಭವ್ ಸೂರ್ಯವಂಶಿ ಕೈಲ್ ಜೇಮಿಸನ್ ತೋಡಿದ ಖೆಡ್ಡಾಗೆ ಬಲಿಯಾದರು. ಮಿಚೆಲ್ ಸ್ಟಾರ್ಕ್ ತಮ್ಮ ಉಪಸ್ಥಿತಿಯ ಲಾಭ ತಂಡಕ್ಕೆ ನೀಡಿದರು. ಪರಿಣಾಮ ರಾಯಲ್ಸ್ ತಂಡ ಪವರ್ ಪ್ಲೇನಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಮೂರನೇ ವಿಕೆಟ್‌ಗೆ ಧ್ರುವ್ ಜುರೇಲ್ ಹಾಗೂ ರಿಯಾನ್ ಪರಾಗ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡುತ. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಡೆಲ್ಲಿ ಬೌಲರ್‌ಗಳು ವಿಫಲರಾದರು. ಮಧ್ಯದ ಓವರ್‌ಗಳಲ್ಲಿ ರಾಯಲ್ಸ್ ತಂಡದ ಬ್ಯಾಟರ್‌ಗಳು ಭರ್ಜರಿ ಬ್ಯಾಟಿಂಗ್ ನಡೆಸಿ ತಂಡದ ಮೊತ್ತ ಹಿಗ್ಗಿಸುವಲ್ಲಿ ಸಫಲರಾದರು. ಈ ಜೋಡಿ 59 ಎಸೆತಗಳಲ್ಲಿ 102 ರನ್ ಸಿಡಿಸಿ ತಂಡಕ್ಕೆ ಆಧಾರವಾಯಿತು. ಈ ಹಂತದಲ್ಲಿ ವಿಕೆಟ್ ಕೀಪರ್ ಧ್ರುವ್ ಜುರೇಲ್ 30 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 42 ರನ್ ಸಿಡಿಸಿದರು.
ಪರಾಗ್ ಅಬ್ಬರ
ನಾಲ್ಕನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ಪರಾಗ್ ಜೋಡಿ ಸಹ ತಂಡದ ಮೊತ್ತ ಹಿಗ್ಗಿಸುವಲ್ಲಿ ನೆರವಾಯಿತು. ಈ ಜೋಡಿ 28 ಎಸೆತಗಳಲ್ಲಿ 53 ರನ್ ಸಿಡಿಸಿದರು. ಈ ವೇಳೆ ಆಲ್‌ರೌಂಡರ್ ರವೀಂದ್ರ ಜಡೇಜಾ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ 20 ರನ್ ಬಾರಿಸಿದರು.
ನಾಯಕ ರಿಯಾನ್ ಪರಾಗ್ ಜೋಡಿ ಅಬ್ಬರಿಸಿದರು. ಪರಾಗ್ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದರು. ಇವರು 50 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ ಸಹಾಯದಿಂದ 90 ರನ್ ಬಾರಿಸಿ ಮಿಚೆಲ್ ಸ್ಟಾರ್ಕ್ ತೋಡಿದ ಖೆಡ್ಡಾಗೆ ಬಲಿಯಾದರು.
ಕೆಳ ಕ್ರಮಾಂಕದಲ್ಲಿ ಡೊನೊವನ್ ಫೆರೀರಾ ಅಬ್ಬರಿಸಿದರು. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡ ಡೊನೊವನ್ ಫೆರೀರಾ 335ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದರು. ಡೊನೊವನ್ ಫೆರೀರಾ 14 ಎಸೆತಗಳಲ್ಲಿ 2 ಬೌಂಡರಿ, 6 ಸಿಕ್ಸರ್ ಸಹಾಯದಿಂದ 47 ರನ್ ಸಿಡಿಸಿದರು. ಇವರ ಭರ್ಜರಿ ಆಟದ ನೆರವಿನಿಂದ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 225 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications