6,6,6,6,6: ಎಲೈಟ್ ಕ್ಲಬ್‌ಗೆ ಎಂಟ್ರಿ ಪಡೆದ ರಿಯಾನ್ ಪರಾಗ್
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಭರವಸೆಯ ಆಟಗಾರ ರಿಯಾನ್ ಪರಾಗ್ ಅಬ್ಬರಿಸಿದ್ದಾರೆ. 18ನೇ ಆವೃತ್ತಿಯ 53ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಸವಾಲಿನ ಮೊತ್ತ ಬೆನ್ನಟ್ಟಿದಾಗ ರಿಯಾನ್ ಪರಾಗ್ ಆರ್ಭಟಿಸಿದರು. ಈ ಪಂದ್ಯದಲ್ಲಿ ರಿಯಾನ್ ಪರಾಗ್ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ದಾಖಲೆಯ ಪುಟಕ್ಕೆ ಎಂಟ್ರಿ ಪಡೆದಿದ್ದಾರೆ.
ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಸಿಡಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 205 ರನ್ ಸೇರಿಸಿ ಸೋಲು ಕಂಡಿತು. ಈ ಪಂದ್ಯದಲ್ಲಿ ರಿಯಾನ್ ಪರಾಗ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ರೆಕಾರ್ಡ್ ಬರೆದರು. ರಿಯಾನ್ 45 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್ ಸಹಾಯದಿಂದ 211ರ ಸ್ಟ್ರೈಕ್ ರೇಟ್‌ನಲ್ಲಿ 95 ರನ್ ಸಿಡಿಸಿ ಔಟ್ ಆದರು.

ರಿಯಾನ್ ಪರಾಗ್ ಅವರ ಅಬ್ಬರದ ಇನಿಂಗ್ಸ್ ನೆರವಿನಿಂದ ದೊಡ್ಡ ದಾಖಲೆಯನ್ನು ಬರೆದರು. ಇವರು ಕೆಕೆಆರ್ ಪಂದ್ಯದಲ್ಲಿ ಮೊಯಿನ್ ಅಲಿ ಅವರ 13ನೇ ಓವರ್‌ನಲ್ಲಿ ದೊಡ್ಡ ಸಾಧನೆಯನ್ನು ಮಾಡಿದರು. ರಿಯಾನ್ ಈ ಓವರ್‌ನ ಐದು ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅಬ್ಬರಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಒಂದೇ ಓವರ್‌ನಲ್ಲಿ ಐದು ಸಿಕ್ಸರ್ ಬಾರಿಸಿದ ಐದನೇ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಐಪಿಎಲ್‌ನಲ್ಲಿ ಒಂದೇ ಓವರ್‌ನಲ್ಲಿ 5 ಸಿಕ್ಸರ್
ರಿಯಾನ್ ಪರಾಗ್ ಅವರಿಗಿಂತಲೂ ಮೊದಲು ಈ ಸಾಧನೆಯನ್ನು ನಾಲ್ವರು ಬ್ಯಾಟರ್‌ಗಳು ಮಾಡಿ ಬೀಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಬ್ಯಾಟ್ ಮಾಡಿದ ಕ್ರಿಸ್ ಗೇಲ್ 17 ಏಪ್ರಿಲ್ 2012ರಲ್ಲಿ ಈ ಸಾಧನೆ ಮಾಡಿದ್ದರು. ಗೇಲ್ ಈ ಸಾಧನೆಯನ್ನು ಪುಣೆ ವಾರಿಯರ್ಸ್ ತಂಡದ ವಿರುದ್ಧ ಮಾಡಿದ್ದರು. 2020ರಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಶಾರ್ಜ್‌ದಲ್ಲಿ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ರಾಹುಲ್ ತೆವಟಿಯಾ ಸಹ ಒಂದೇ ಓವರ್‌ನಲ್ಲಿ 5 ಸಿಕ್ಸರ್ ಸಿಡಿಸಿದ್ದರು. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರ 2021ರಲ್ಲಿ ಬ್ಯಾಟ್ ಮಾಡಿದ್ದ ರವೀಂದ್ರ ಜಡೇಜಾ, ಆರ್‌ಸಿಬಿ ವಿರುದ್ಧ 5 ಸಿಕ್ಸರ್ ಬಾರಿಸಿದ್ದರು. ಇಂತಹದ್ದೇ ಸಾಧನೆಯನ್ನು ಕೆಕೆಆರ್ ತಂಡದ ಪರ ರಿಂಕು ಸಿಂಗ್ ಮಾಡಿದ್ದರು. ಇವರು ಗುಜರಾತ್ ಟೈಟನ್ಸ್ ವಿರುದ್ಧ ಈ ಸಾಧನೆ ಮಾಡಿದ್ದರು.

ರಿಯಾನ್ ಪರಾಗ್ ಮುಂದಿನ ಓವರ್‌ನಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲಿ ದೊಡ್ಡ ಸಿಕ್ಸರ್ ಬಾರಿಸಿದರು. ಈ ಮೂಲಕ ರಿಯಾನ್ ಪರಾಗ್ ತಾವು ಎದುರಿಸದ ಆರು ಎಸೆತಗಳಲ್ಲಿ ಸಿಕ್ಸರ್ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಸಾಧನೆ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿದ ದಾಖಲೆ ಎಂಬ ಹಿರಿಮೆಗೆ ಪಾತ್ರವಾಗುವುದಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications