Road to Final: ಟೀಮ್ ಇಂಡಿಯಾ ಫೈನಲ್ ವರೆಗೂ ನಡೆದು ಬಂದ ಹಾದಿ
ಭಾರತ ತಂಡ ಟಿ20 ವಿಶ್ವಕಪ್ ಫೈನಲ್‌ಗೆ ಅರ್ಹತೆ ಪಡೆದಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್‌ನಲ್ಲಿ ಕಾದಾಟ ನಡೆಸಲಿವೆ. ಸೂರ್ಯಕುಮಾರ್ ಯಾದವ್ ಪಡೆ ಈ ಹಂತಕ್ಕೆ ತಲುಪಿದ್ದು ಹೇಗೆ ಎಂಬ ಬಗ್ಗೆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿತ್ತು. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 161 ರನ್ ಕಲೆ ಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಯುಎಸ್‌ಎ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಸೇರಿಸಿ ಸೋಲು ಕಂಡಿತು.

ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನಮೀಬಿಯಾ ವಿರುದ್ಧ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಸೇರಿಸಿತು. ಇದಕ್ಕುತ್ತರವಾಗು ಬ್ಯಾಟ್ ಮಾಡಿದ್ದ ನಮೀಬಿಯಾ 18.2 ಓವರ್‌ಗಳಲ್ಲಿ 116 ರನ್‌ಗಳಿಗೆ ಸರ್ವಪತನ ಕಂಡಿತು.
ಪಾಕ್ ವಿರುದ್ಧ 61 ರನ್ ಗೆಲುವು
ಲೀಗ್ ಹಂತದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 175 ರನ್ ಕಲೆ ಹಾಕಿತು. ಗುರಿಯನ್ನು ಬೆನ್ನಟ್ಟಿದ ಪಾಕ್ 61 ರನ್‌ಗಳಿಂದ ಸೋಲು ಕಂಡಿತು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ, ನೆದರ್‌ಲ್ಯಾಂಡ್ ವಿರುದ್ಧ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ನೆದರ್‌ಲ್ಯಾಂಡ್ 7 ವಿಕೆಟ್ ನಷ್ಟಕ್ಕೆ 176 ರನ್ ಸೇರಿಸಿ ಸೋಲು ಕಂಡಿತು.
ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 111 ರನ್‌ಗಳಿಗೆ ಸರ್ವಪತನ ಕಂಡಿತು.
ಮಹತ್ವದ ಪಂದ್ಯದಲ್ಲಿ ಆರ್ಭಟಿಸಿದ ಭಾರತ
ಎರಡನೇ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತ 4 ವಿಕೆಟ್‌ಗೆ 256 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಜಿಂಬಾಬ್ವೆ 6 ವಿಕೆಟ್‌ಗೆ 184 ರನ್ ಸೇರಿಸಿ ಆಘಾತ ಅನುಭವಿಸಿತು. ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಭಾರತ ವಿಂಡೀಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ವಿಂಡೀಸ್ 4 ವಿಕೆಟ್‌ಗೆ 195 ರನ್ ಕಲೆ ಹಾಕಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ಭಾರತ ಇನ್ನು 4 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದಿತು.
ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 7 ವಿಕೆಟ್‌ಗೆ 253 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ 7 ವಿಕೆಟ್‌ಗೆ 246 ರನ್ ಸೇರಿಸಿ ಸೋಲು ಕಂಡಿತು. ಈ ಪಂದ್ಯದಲ್ಲಿ 7 ರನ್ ಜಯ ಸಾಧಿಸಿದ ಭಾರತ ಫೈನಲ್ ಪ್ರವೇಶಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications