ಐಪಿಎಲ್ 2021: ರೋಹಿತ್, ಹಾರ್ದಿಕ್ ಗಾಯದ ಬಗ್ಗೆ ಟ್ರೆಂಟ್ ಬೋಲ್ಡ್ ಅಪ್‌ಡೇಟ್

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಆಡುವ ಬಳಗದಲ್ಲಿ ಕಾಣಿಸಿಕೊಳ್ಳದೆ ಅಚ್ಚರಿ ಮೂಡಿಸಿದ್ದರು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಬದಲಿಗೆ ಉಪನಾಯಕ ಕಿರಾನ್ ಪೊಲಾರ್ಡ್ ಮುನ್ನಡೆಸಿದ್ದರು. ಪ್ರಮುಖ ಇಬ್ಬರು ಆಟಗಾರರ ಅಲಭ್ಯತೆಯ ಮಧ್ಯೆ ಗಾಯದ ಕಾರಣದಿಂದಾಗಿ ಈ ಇಬ್ಬರು ಪ್ರಮುಖ ಆಟಗಾರರು ಹೊರಗುಳಿದಿರುವುದು ಬಳಿಕ ಸ್ಪಷ್ಟವಾಗಿತ್ತು. ಇದೀಗ ಈ ಇಬ್ಬರು ಆಟಗಾರರು ಮುಂದಿನ ಪಂದ್ಯದಲ್ಲಿಯೂ ಆಡುವ ಬಗ್ಗೆ ಅನುಮಾನವಿದೆ.
ಮುಂಬೈ ಇಂಡಿಯನ್ಸ್ ತಂಡದ ಅನುಭವಿ ವೇಗಿ ಟ್ರೆಂಟ್ ಬೋಲ್ಟ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯ ಸೆಪ್ಟೆಂಬರ್ 23ರಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯಲಿದ್ದು ಈ ಪಂದ್ಯದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಆಡುವ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ ಎಂದಿದ್ದಾರೆ ಬೋಲ್ಟ್.
ಐಪಿಎಲ್ 2021: ಪ್ರಮುಖ ಆಟಗಾರನ ಹೊರಗಿಟ್ಟಿದ್ದಕ್ಕೆ ಅನಿಲ್ ಕುಂಬ್ಳೆ ಟ್ರೋಲ್
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಗಾಯಗೊಂಡಿದ್ದರು. ಹಾರ್ದಿಕ್ ಪಾಂಡ್ಯ ಕೂಡ ನೋವಿಗೆ ತುತ್ತಾಗಿದ್ದರು. ಹೀಗಾಗಿ ಈ ಇಬ್ಬರು ದುಬೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಈ ಪಂದ್ಯವನ್ನು ಮುಂಬೈ ಇಂಡಿಯನ್ಸ್ ಪಡೆ 20 ರನ್‌ಗಳ ಅಂತರದಿಂದ ಸೋತಿತ್ತು.
ಇಬ್ಬರು ಅನುಭವಿ ಆಟಗಾರರು ಕೂಡ ಗಾಯದಿಂದ ಉತ್ತಮವಾದ ಚೇತರಿಕೆ ಕಾಣುತ್ತಿದ್ದಾರೆ ಎಂದು ಟ್ರೆಂಟ್ ಬೋಲ್ಟ್ ಖಚಿತಪಡಿಸಿದ್ದಾರೆ. ಆದರೆ ಮುಂದಿನ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಆಡುವ ಬಗ್ಗೆ ಖಚಿತತೆಯಿಲ್ಲ ಎಂದು ಕೂಡ ಅವರು ವಿವರಿಸಿದರು. "ಅವರಿಬ್ಬರು ಕೂಡ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಮುಂದಿನ ಪಂದ್ಯದಲ್ಲಿ ಆಡುವ ವಿಚಾರವಾಗಿ ಏನಾಗಲಿದೆ ಎಂಬು ಹೇಳಲು ಸಾಧ್ಯವಿಲ್ಲ. ಆದರೆ ದಿನದಿಂದ ದಿನಕ್ಕೆ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬೋಲ್ಟ್ ವಿವರಿಸಿದರು.
"ಖಂಡಿತವಾಗಿಯೂ ಈ ಇಬ್ಬರು ಆಟಗಾರರು ಮುಂಬೈ ಇಂಡಿಯನ್ಸ್ ಪಾಲಿಗೆ ಪ್ರಮುಖ ಆಟಗಾರರು. ಅವರಿಬ್ಬರೂ ಆಡುವ ಬಳಗಕ್ಕೆ ಮರಳಲು ನಾವೆಲ್ಲಾ ಕಾತರಿಸುತ್ತಿದ್ದೇವೆ. ಮುಂದಿನ ಪಂದ್ಯದಲ್ಲಿ ಅವರು ಆಡುವಂತಾಗಲಿದೆ ಎಂದು ನಾವು ಆಶಿಸುತ್ತೇವೆ" ಎಂದು ಬೋಲ್ಟ್ ಹೇಳಿದ್ದಾರೆ.
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಐತಿಹಾಸಿಕವಾಗಿ ಹೊಂದಿರುವ ಹಿನ್ನಡೆಯ ದಾಖಲೆಯ ಬಗ್ಗೆಯೂ ಬೋಲ್ಟ್‌ಗೆ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಬೋಲ್ಟ್, ಅಂದಿನ ಪಂದ್ಯದಲ್ಲಿ ಆಡುವಾಗ ಇತಿಹಾಸಗಳು ಪಾತ್ರವಹಿಸಲಾರದು ಎಂದಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಅವರು ಬೋಲ್ಟ್ ಮುಂಬರುವ ಟಿ20 ವಿಶ್ವಕಪ್‌ನ ಸಿದ್ಧತೆಯ ದೃಷ್ಟಿಯಿಂದ ಐಪಿಎಲ್ ಅತ್ಯುತ್ತಮವಾದ ವೇದಿಕೆ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications