World Record: ರೊಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ: ಟೆಸ್ಟ್ ಕ್ರಿಕೆಟ್‌ನಲ್ಲಿ ಇದೇ ಮೊದಲು
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್ ಪಂದ್ಯ ಕಾನ್ಪುರ್‌ದಲ್ಲಿ ನಡೆಯುತ್ತಿದೆ. ಮೊದಲ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ ತಂಡವನ್ನು 233 ರನ್‌ಗಳಿಗೆ ಆಲೌಟ್ ಮಾಡಿದ ಟೀಮ್ ಇಂಡಿಯಾ, ಬ್ಯಾಟಿಂಗ್ ಆರಂಭಿಸಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಟಿ20 ಶೈಲಿಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತದ ಓಪನರ್ಸ್ ಅಬ್ಬರಿಸಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹಿಂದೆ ಯಾವ ತಂಡವೂ ಮಾಡದ ವಿಶೇಷ ದಾಖಲೆಯನ್ನು ಟೀಮ್ ಇಂಡಿಯಾದ ಓಪನರ್ಸ್ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಮಾಡಿದ್ದಾರೆ.
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಟೆಸ್ಟ್ ಪಂದ್ಯದ ಮೊದಲ ದಿನ ಕೇವಲ 35 ಓವರ್‌ಗಳ ಆಟ ನಡೆದಿತ್ತು. ಎರಡನೇ ಹಾಗೂ ಮೂರನೇ ದಿನದಾಟ ಮಳೆಗೆ ಆಹುತಿ ಆಯಿತು. ಸೋಮವಾರ ಕಾನ್ಪುರ್‌ದಲ್ಲಿ ವಾತಾವರಣ ಆಡಲು ಯೋಗ್ಯವಾಗಿದ್ದರಿಂದ ಬಾಂಗ್ಲಾದೇಶ ಮೊದಲ ಇನಿಂಗ್ಸ್ ಮುಂದುವರೆಸಿ 233 ರನ್‌ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಅಟ್ಯಾಂಕಿಂಗ್ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರೂ ಹುಬ್ಬೇರುವಂತೆ ಮಾಡಿತು.

ಟೆಸ್ಟ್‌ನಲ್ಲಿ ಟಿ20 ಬ್ಯಾಟಿಂಗ್
ಟೀಮ್ ಇಂಡಿಯಾದ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಟಿ20 ಶೈಲಿಯ ಬ್ಯಾಟಿಂಗ್ ನಡೆಸಿದರು. ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್‌ಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 50 ರನ್ ಗಳಿಸುವ ಮೂಲಕ ಭಾರತದ ಪರ ವಿಶ್ವದಾಖಲೆ ಬರೆದಿದ್ದಾರೆ. ಈ ಮೊದಲು ಈ ದಾಖಲೆ ಇಂಗ್ಲೆಂಡ್ ತಂಡದ ಹೆಸರಿನಲ್ಲಿತ್ತು.
ಇಂಗ್ಲೆಂಡ್ ಈ ವರ್ಷ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕೇವಲ 4.2 ಓವರ್‌ಗಳಲ್ಲಿ 50 ರನ್‌ಗಳ ಗಡಿ ದಾಟಿತ್ತು. ಈ ಪ್ರದರ್ಶನಕ್ಕೆ ಟ್ರೆಂಟ್ ಬ್ರಿಡ್ಜ್ ಮೈದಾನ ವೇದಿಕೆ ಆಗಿತ್ತು. ಇದೀಗ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೇವಲ 3 ಓವರ್‌ಗಳಲ್ಲಿ 50 ರನ್‌ಗಳ ಗಡಿಯನ್ನು ಮುಟ್ಟುವ ಮೂಲಕ ವಿಶ್ವದಾಖಲೆಯನ್ನು ಮುರಿದಿದ್ದಾರೆ.

ಒಂದೇ ಇನಿಂಗ್ಸ್ ಡಬಲ್ ವಿಶ್ವದಾಖಲೆ
ಕೇವಲ 18 ಎಸೆತಗಳಲ್ಲಿ 50 ರನ್ ಬಾರಿಸಿ ಟೆಸ್ಟ್ ಕ್ರಿಕೆಟ್‌ನಲ್ಲಿ ರೆಕಾರ್ಡ್ ನಿರ್ಮಿಸಿದ್ದ, ಟೀಮ್ ಇಂಡಿಯಾ ಆಟಗಾರರು, ಒಂದೇ ಇನಿಂಗ್ಸ್‌ನಲ್ಲಿ ಮತ್ತೊಂದು ದಾಖಲೆಗೆ ಭಾಜನರಾಗಿದ್ದಾರೆ. ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತ ಕೇವಲ 10.1 ಓವರ್‌ಗಳಲ್ಲಿ 100 ರನ್ ಬಾರಿಸಿತು. ಈ ಮೂಲಕ ಭಾರತ ತಂಡ ತನ್ನದೇ ದಾಖಲೆಯನ್ನು ಅಳಿಸಿ ಹಾಕಿದೆ. 2023ರಲ್ಲಿ ಟೀಮ್ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧ 12.2 ಓವರ್‌ಗಳಲ್ಲಿ ಈ ಸಾಧನೆ ಮಾಡಿತ್ತು. ಈಗ ತನ್ನದೇ ದಾಖಲೆಯನ್ನು ಟೀಮ್ ಇಂಡಿಯಾ ಬಲ ಪಡಿಸಿಕೊಂಡಿದೆ.
ಅಟ್ಯಾಕಿಂಗ್ ಆಟ ಆಡಲು ಕಾರಣವೇನು?
ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗವಾಗಿ ಬ್ಯಾಟಿಂಗ್ ಮಾಡುತ್ತಿದೆ. ಇದಕ್ಕೆ ಕಾರಣ ಪೂರ್ಣ ಅಂಕಗಳಿಸುವುದಾಗಿದೆ. ಈ ಪಂದ್ಯದ ಎರಡನೇ ಹಾಗೂ ಮೂರನೇ ದಿನದಾಟ ಮಳೆಯಿಂದಾಗಿ ರದ್ದಾಗಿತ್ತು. ಅಲ್ಲದೆ ಮೊದಲ ದಿನ ಕೇವಲ 35 ಓವರ್‌ಗಳ ಆಟ ನಡೆದಿತ್ತು. ಹೀಗಾಗಿ ಭಾರತಕ್ಕೆ ಇನಿಂಗ್ಸ್ ಮುನ್ನಡೆ ಸಾಧಿಸಲು ಹೆಚ್ಚಿನ ಸಮಯವಿಲ್ಲ. ಸಿಕ್ಕ ಸಮಯವನ್ನೇ ಚೆನ್ನಾಗಿ ಬಳಸಿಕೊಂಡು ಆದಷ್ಟು ರನ್ ಕಲೆ ಹಾಕುವ ಇರಾದೆ ಟೀಮ್ ಇಂಡಿಯಾದ್ದಾಗಿದೆ. ಹೀಗಾಗಿ ಟೀಮ್ ಇಂಡಿಯಾ ಬಿರುಸಿನ ಬ್ಯಾಟಿಂಗ್ ಆರಂಭಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications