For Quick Alerts
ALLOW NOTIFICATIONS  
For Daily Alerts
 

Rohit Sharma: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ ಹಿಟ್‌ಮ್ಯಾನ್

By ನಾಗೇಶ್

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ 2023 ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅಬ್ಬರವನ್ನು ಮುಂದುವರೆಸಿದ್ದಾರೆ. ವಿಶ್ವಕಪ್‌ನ 29ನೇ ಪಂದ್ಯದಲ್ಲಿ ರೋಹಿತ್ ದೊಡ್ಡ ಸಾಧನೆಗೆ ತಮ್ಮ ಹೆಸರು ನಮೂದಿಸಿದ್ದಾರೆ.

ಲಕ್ನೋ ಸ್ಟೇಡಿಯಂನಲ್ಲಿ ಪ್ರಸಕ್ತ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ, ರೋಹಿತ್ 66 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಈ ಅವಧಿಯಲ್ಲಿ ರೋಹಿತ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 18000 ರನ್ ಪೂರೈಸುವ ಮೂಲಕ ಈ ಸಾಧನೆ ಮಾಡಿದ 5ನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

rohit-sharma-achieves-18-000-international-runs

ರೋಹಿತ್ ಶರ್ಮಾ 477 ಅಂತರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 18 ಸಾವಿರ ರನ್ ಪೂರೈಸಿದರು. ಈ ಪಂದ್ಯಕ್ಕೂ ಮುನ್ನ 18 ಸಾವಿರದ ಗಡಿ ಮುಟ್ಟಲು ಅವರಿಗೆ 47 ರನ್‌ಗಳ ಅಗತ್ಯವಿತ್ತು. ರೋಹಿತ್‌ಗಿಂತ ಮೊದಲು ಭಾರತದ ಪರ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

ರೋಹಿತ್ ಟೆಸ್ಟ್‌ ಕ್ರಿಕೆಟ್‌ನಲ್ಲಿ 3677 ರನ್ ಗಳಿಸಿದ್ದರೆ, ಅಂತಾರಾಷ್ಟ್ರೀಯ ಟಿ20ಯಲ್ಲಿ 3853 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಏಕದಿನದಲ್ಲಿ 10470 ರನ್ ಗಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 45 ಶತಕ ಮತ್ತು 98 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 34,357 ರನ್ ಗಳಿಸಿದ್ದರೆ, ಕೊಹ್ಲಿ 26,121 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರಾಹುಲ್ ದ್ರಾವಿಡ್ 24,064 ರನ್ ಗಳಿಸಿದ್ದರೆ, ಸೌರವ್ ಗಂಗೂಲಿ 18,433 ರನ್ ಗಳಿಸಿದ್ದಾರೆ.

ಇನ್ನು ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಪ್ರಸಕ್ತ ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಅತಿ ಹೆಚ್ಚು ಸಿಡಿಸಿದ ಸಾಧನೆಯನ್ನು ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ 24 ನೇ ಓವರ್ ನಲ್ಲಿ ರೋಹಿತ್ ಶರ್ಮಾ, ಮಾರ್ಕ್ ವುಡ್ ಗೆ ಸಿಕ್ಸರ್ ಬಾರಿಸಿದರು. ಈ ಮೂಲಕ ಪ್ರಸಕ್ತ ವಿಶ್ವಕಪ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ಬರೆದರು. ರೋಹಿತ್ ಆಡಿದ 6 ಪಂದ್ಯಗಳಲ್ಲಿ 20 ಸಿಕ್ಸರ್ ಬಾರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ (19) ಎರಡನೇ ಸ್ಥಾನ, ದಕ್ಷಿಣ ಆಫ್ರಿಕಾದ ಹೆನ್ರಿ ಕ್ಲಾಸೆನ್ (16) ಮೂರನೇ ಸ್ಥಾನದಲ್ಲಿದ್ದಾರೆ.

Story first published: Monday, October 30, 2023, 13:09 [IST]
Other articles published on Oct 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+