ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಗೆಲುವು ನಮಗೆ ಎಲ್ಲದಕ್ಕಿಂತ ಮುಖ್ಯ: ರೋಹಿತ್ ಶರ್ಮಾ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೂ ಮುನ್ನಾದಿನ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಟೆಸ್ಟ್ ಮಾದರಿ ಕ್ರಿಕೆಟ್‌ನ ಅತ್ಯುನ್ನತ ಮಾದರಿ ಎಂದಿದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಗೆಲುವು ಎಲ್ಲದಕ್ಕಿಂತ ಬಹಳ ಮುಖ್ಯ ಎಂದಿದ್ದಾರೆ.
"ಟೆಸ್ಟ್ ಕ್ರಿಕೆಟ್ ಅತ್ಯುನ್ನತ ಮಾದರಿ ಹಾಗೂ ಅತ್ಯಂತ ಸವಾಲಿನ ಮಾದರಿ. ಇದನ್ನು ಗೆಲ್ಲುವುದು ನಮಗೆ ಬಹಳ ಮುಖ್ಯ" ಎಂದಿದ್ದಾರೆ. ನಂತರ ಮಾತನಾಡಿದ ಅವರು "ಈ ಭಾರತ ತಂಡವನ್ನು ನಾನು ಮುಂದಕ್ಕೆ ಕೊಂಡೊಯ್ಯಲು ಬಯಸಿದ್ದು 1-2 ಐಸಿಸಿ ಟ್ರೋಫಿಗಳನ್ನು ಗೆಲ್ಲುವ ವಿಶ್ವಾಸವಿದೆ" ಎಂದು ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 2-1 ಅಂತರದಿಂದ ಮಣಿಸಿ WTC ಫೈನಲ್‌ನಲ್ಲಿ ಸ್ಥಾನವನ್ನು ದೃಢಪಡಿಸಿಕೊಂಡಿತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ತಂಡದ ಆಡುವ ಬಳಗದ ಸಂಯೋಜನೆಯ ಬಗ್ಗೆ ಪ್ರಶ್ನೆ ಕೇಳಿದಾಗ ಇಂಗ್ಲೆಂಡ್‌ನಲ್ಲಿ ವಾತಾವರಣ ಬದಲಾಗುತ್ತಾ ಇರುವುದರಿಂದ ಸಂಪೂರ್ಣ 15 ಜನರ ತಂಡವನ್ನು ಸಿದ್ಧವಾಗಿರುವಂತೆ ಕೇಳಿಕೊಂಡಿದ್ದೇನೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ತಂಡದ ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದುಕೊಳ್ಳುವ ಆಟಗಾರರ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿದ್ದಾರೆ. ಅನುಭವಿ ಆಟಗಾರ ಜೋಶ್ ಹೇಜಲ್‌ವುಡ್ ಗಾಯಗೊಂಡು ಹೊರಬಿದ್ದಿರುವ ಕಾರಣ ಅವರ ಸ್ಥಾನದಲ್ಲಿ ಸ್ಕಾಡ್ ಬೋಲಾಂಡ್ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಳ್ಳಲಿದ್ದಾರೆ ಎಂದಿದ್ದಾರೆ. ಆದರೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆಡುವ ದಿನವಾದ ಬುಧವಾರ ಮುಂಜಾನೆಯ ವಾತಾವರಣ ನೋಡಿಕೊಂಡು ಆಡುವ ಬಳಗವನ್ನು ಖಚಿತಪಡಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
"ಇದು ಬಹಳ ಕಠಿಣವಾದ ಪಂದ್ಯಾವಳಿ. ಇಲ್ಲಿ ಸ್ಥಾನವನ್ನು ಪಡೆದುಕೊಳ್ಳಬೇಕಾದರೆ ಎರಡು ವರ್ಷಗಳ ಕಾಲ ಸ್ಥಿರವಾದ ಪ್ರದರ್ಶನ ನೀಡಿಕೊಂಡು ಬಂದರೆ ಮಾತ್ರ ಅದು ಸಾಧ್ಯ. ನಿಮ್ಮ ತಂಡದ ಎಲ್ಲಾ ವಿಭಾಗಗಳು ಕೂಡ ಅತ್ಯುತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ನನ್ನ ಪ್ರಕಾರ ನಮ್ಮ ಬಲ ಕೂಡ ಎಲ್ಲಾ ಮೂರು ವಿಭಾಗಗಳೇ ಆಗಿದೆ" ಎಂದಿದ್ದಾರೆ ರೋಹಿತ್ ಶರ್ಮಾ.
ಟೀಮ್ ಇಂಡಿಯಾ ಸಂಪೂರ್ಣ ತಂಡ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್
ಆಸ್ಟ್ರೇಲಿಯಾ ಸಂಪೂರ್ಣ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications