Rohit Sharma: ಗಂಡು ಮಗುವಿಗೆ ತಂದೆಯಾದ ಕ್ಯಾಪ್ಟನ್ ರೋಹಿತ್ ಶರ್ಮಾ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಅವರು ಗಂಡು ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಸಂತಸ ವಿಚಾರದ ಬಗ್ಗೆ ಹಿಟ್‌ಮ್ಯಾನ್ ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ಜೂನಿಯರ್ ಹಿಟ್‌ಮ್ಯಾನ್ ಆಗಮನಕ್ಕೆ ರೋಹಿತ್ ಶರ್ಮಾ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ.
ರೋಹಿತ್ ಶರ್ಮಾ ಮತ್ತು ರಿತಿಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಈ ಮೊದಲೇ ವರದಿಯಾಗಿತ್ತು. ಹೀಗಾಗಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲೆರೆಡು ಪಂದ್ಯಗಳಿಂದ ದೂರ ಉಳಿಯಬಹುದು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಜೊತೆ ಆಸ್ಟ್ರೇಲಿಯಾ ಪ್ರವಾಸಕ್ಕೆ ರೋಹಿತ್ ಶರ್ಮಾ ಪ್ರಯಾಣಿಸಿರಲಿಲ್ಲ. ತಮ್ಮ ಎರಡನೇ ಮಗು ಮತ್ತು ಪತ್ನಿ ಜೊತೆಗ ಸಮಯ ಕಳೆಯಲು ಅವರು ಮುಂಬೈನಲ್ಲೇ ಉಳಿದುಕೊಂಡಿದ್ದರು.

ಶುಕ್ರವಾರ ರಿತಿಕಾ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗುವಿದ್ದು, ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಈಗ ಗಂಡು ಮಗುವಿಗೆ ರೋಹಿತ್ ಶರ್ಮಾ ತಂದೆಯಾಗಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ.
ಪರ್ತ್ ಟೆಸ್ಟ್ ಆಡ್ತಾರಾ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಂದು ಪರ್ತ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ವೈಯಕ್ತಿಕ ಕಾರಣಗಳಿಂದ ಹೊರಗುಳಿಯುವ ಬಗ್ಗೆ ವರಿದಗಳು ಹೇಳಿದ್ದವು. ಹೀಗಾಗಿ ಟೀಮ್ ಇಂಡಿಯಾ ಜೊತೆ ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗಿರಲಿಲ್ಲ. ರೋಹಿತ್ ಈಗ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರು ಟೀಮ್ ಇಂಡಿಯಾ ಸೇರುವ ಸಾಧ್ಯತೆ ಹೆಚ್ಚಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಭಾಗವಹಿಸುವುದು ಟೀಮ್ ಇಂಡಿಯಾಕ್ಕೆ ಪ್ರಮುಖವಾಗಿದೆ. ಆದರೆ, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಆಡುತ್ತಾರಾ ಎಂಬುದು ಕುತೂಹಲಕಾರಿಯಾಗಿದೆ. ರೋಹಿತ್ ಶರ್ಮಾ ಆಟವನ್ನುಅವರ ಅಭಿಮಾನಿ ನೋಡಿ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸಕ್ಕೂ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಮಡಿಯಾದ ಹೆಡ್ ಕೋಚ್ ಗೌತಮ್ ಗಂಭೀರ್ ಕೂಡ ರೋಹಿತ್ ಅಲಭ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ್ದರು. ರೋಹಿತ್ ಶರ್ಮಾ ಮೊದಲೆರಡು ಪಂದ್ಯಗಳಿಂದ ದೂರ ಉಳಿಯುವ ಬಗ್ಗೆ ದೃಢಪಟ್ಟಿಲ್ಲ. ಆದರೆ ಈ ಬಗ್ಗೆ ಎಲ್ಲರಿಗೂ ಸಮಯಕ್ಕೆ ಸರಿಯಾಗಿ ತಿಳಿಸಲಾಗುವುದು ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಆದರೆ, ರೋಹಿತ್ ಶರ್ಮಾ ಪರ್ತ್ ಟೆಸ್ಟ್‌ನಲ್ಲಿ ಭಾಗವಹಿಸದಿದ್ದರೆ, ತಂಡದ ನಾಯಕತ್ವ ಜಸ್ಪ್ರೀತ್ ಬುಮ್ರಾ ಅವರಿಗೆ ಸಿಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications