ಒಂದಲ್ಲಾ ಎರಡಲ್ಲ ಕಳೆದ 12 ತಿಂಗಳಿನಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದದ್ದು 9 ಜೋಡಿ!

ಸದ್ಯ ವೆಸ್ಟ್ ಇಂಡೀಸ್ ನೆಲದಲ್ಲಿ ಬೀಡುಬಿಟ್ಟಿರುವ ಟೀಮ್ ಇಂಡಿಯಾ ಕೆರಿಬಿಯನ್ನರ ವಿರುದ್ಧ ಸೀಮಿತ ಓವರ್ ಸರಣಿಗಳಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಮೊದಲಿಗೆ ಇತ್ತಂಡಗಳ ನಡುವೆ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡಕ್ಕೆ ಅವರ ತವರು ನೆಲದಲ್ಲಿಯೇ ಮುಖಭಂಗವನ್ನು ಮಾಡಿತು. ಈ ಮೂಲಕ ಶಿಖರ್ ಧವನ್ ವೆಸ್ಟ್ ಇಂಡೀಸ್ ತಂಡವನ್ನು ಅವರ ನೆಲದಲ್ಲಿಯೇ ವೈಟ್ ವಾಶ್ ಮಾಡಿದ ಪ್ರಥಮ ಭಾರತದ ನಾಯಕ ಎಂಬ ದಾಖಲೆಯನ್ನು ಬರೆದರು.
ಹೀಗೆ ಶಿಖರ್ ಧವನ್ ನಾಯಕತ್ವದಲ್ಲಿ ಏಕದಿನ ಸರಣಿಯನ್ನು ಕೈವಶಪಡಿಸಿಕೊಂಡ ಟೀಮ್ ಇಂಡಿಯಾ ಇದೀಗ ವಿಂಡೀಸ್ ವಿರುದ್ಧದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿದಿದೆ. ವಿಶ್ರಾಂತಿ ಕಾರಣದಿಂದಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ಸದ್ಯ ವಿಂಡೀಸ್ ವಿರುದ್ಧದ ಈ ಟಿ ಟ್ವೆಂಟಿ ಸರಣಿಗೆ ವಾಪಸ್ ತಂಡ ಸೇರಿದ್ದು, ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಯ ಪ್ರಥಮ ಪಂದ್ಯ ನಿನ್ನೆ ( ಜುಲೈ 29 ) ಟರೌಬಾದ ಬ್ರಿಯಾನ್ ಲಾರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಟೀಮ್ ಇಂಡಿಯಾ 68 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಕಲೆಹಾಕಿ ಎದುರಾಳಿ ವೆಸ್ಟ್ ಇಂಡೀಸ್ ತಂಡಕ್ಕೆ 191 ರನ್‌ಗಳ ಗುರಿಯನ್ನು ನೀಡಿತು. ಅತ್ತ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 122 ರನ್ ಕಲೆಹಾಕಿ 68 ರನ್‌ಗಳ ಸೋಲನ್ನು ಅನುಭವಿಸಿತು. ಈ ಮೂಲಕ ಟೀಮ್ ಇಂಡಿಯಾ ಟಿ ಟ್ವೆಂಟಿ ಸರಣಿಯಲ್ಲಿಯೂ ಸಹ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದು, ಈ ಪಂದ್ಯದಲ್ಲಿ ನೂತನ ಆರಂಭಿಕ ಜೋಡಿಯನ್ನು ಕಣಕ್ಕಿಳಿಸುವುದರ ಮೂಲಕ ಆಶ್ಚರ್ಯವನ್ನುಂಟುಮಾಡಿತ್ತು. ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಜೋಡಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಇದು ಕಳೆದ 12 ತಿಂಗಳಿನಲ್ಲಿ ಟಿ ಟ್ವೆಂಟಿ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ 9ನೇ ಆರಂಭಿಕ ಜೋಡಿಯಾಗಿದೆ. ಹಾಗಿದ್ದರೆ ಕಳೆದೊಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಎಲ್ಲಾ ಜೋಡಿಗಳ ಪಟ್ಟಿ ಹೇಗಿದೆ ಎಂಬುದರ ಕುರಿತಾದ ವಿವರ ಕೆಳಕಂಡಂತಿದೆ.

ಕಳೆದ 12 ತಿಂಗಳಿನಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದವರು
ಕಳೆದ 12 ತಿಂಗಳಿನಲ್ಲಿ ಭಾರತ ತಂಡದ ಪರ ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದ 9 ಜೋಡಿಗಳ ಪಟ್ಟಿ ಇಲ್ಲಿದೆ
1. ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ
2. ಕೆ ಎಲ್ ರಾಹುಲ್ ಮತ್ತು ಇಶಾನ್ ಕಿಶನ್
3. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್
4. ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್
5. ಸಂಜು ಸ್ಯಾಮ್ಸನ್ ಮತ್ತು ರೋಹಿತ್ ಶರ್ಮಾ
6. ದೀಪಕ್ ಹೂಡಾ ಮತ್ತು ಇಶಾನ್ ಕಿಶನ್
7. ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್
8. ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್
9. ರೋಹಿತ್ ಶರ್ಮ ಮತ್ತು ಸೂರ್ಯಕುಮಾರ್ ಯಾದವ್

ಶರ್ಮಾ ಮತ್ತು ಯಾದವ್ ಜೋಡಿ ಮೂಲಕ ಪ್ರಯೋಗಕ್ಕೆ ಯತ್ನ
ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಜೋಡಿ ಕಣಕ್ಕಿಳಿದದ್ದು ಸಾಕಷ್ಟು ದೊಡ್ಡ ಮಟ್ಟದ ಆಶ್ಚರ್ಯವನ್ನುಂಟುಮಾಡಿತ್ತು. ಟೀಮ್ ಇಂಡಿಯಾದ ಕಳೆದ ಟಿ ಟ್ವೆಂಟಿ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಜೋಡಿ ಕಣಕ್ಕಿಳಿದಿದ್ದ ಕಾರಣ ಈ ಪಂದ್ಯದಲ್ಲಿಯೂ ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ಅಲಭ್ಯತೆರಾಗಿರುವುದರಿಂದ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಜೋಡಿಯೇ ಆರಂಭಿಕರಾಗಿ ಕಣಕ್ಕಿಳಿಯಬಹುದು ಎಂದು ಊಹಿಸಲಾಗಿತ್ತು. ಆದರೆ ರೋಹಿತ್ ಶರ್ಮಾ ಸೂರ್ಯಕುಮಾರ್ ಯಾದವ್ ಜತೆ ಆರಂಭವನ್ನು ಮಾಡಿ ಪ್ರಯೋಗಕ್ಕೆ ಮುಂದಾಗಿದ್ದರು.

ರೋಹಿತ್ ಶರ್ಮಾ ಅರ್ಧಶತಕ, ಪವರ್ ಪ್ಲೇನಲ್ಲಿಯೇ ವಿಕೆಟ್ ಒಪ್ಪಿಸಿದ ಯಾದವ್
ಇನ್ನು ಈ ಆರಂಭಿಕ ಜೋಡಿ ಪೈಕಿ ರೋಹಿತ್ ಶರ್ಮಾ 44 ಎಸೆತಗಳಲ್ಲಿ 64 ರನ್ ಕಲೆಹಾಕಿದರೆ, ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 24 ರನ್ ಕಲೆ ಹಾಕಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಸೂರ್ಯಕುಮಾರ್ ಯಾದವ್ ಪವರ್ ಪ್ಲೇನಲ್ಲಿಯೇ ಔಟ್ ಆದರು.

ಪಂದ್ಯದಲ್ಲಿ ಅಬ್ಬರಿಸಿದ ರೋಹಿತ್ ಮತ್ತು ದಿನೇಶ್ ಕಾರ್ತಿಕ್
ಇನ್ನು ವೆಸ್ಟ್ ಇಂಡೀಸ್ ತಂಡವನ್ನು ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಸೋಲಿಸಿರುವ ಭಾರತ ತಂಡಕ್ಕೆ ಬೃಹತ್ ಮೊತ್ತ ಕಲೆಹಾಕುವಲ್ಲಿ ಸಹಕರಿಸಿದ್ದು ನಾಯಕ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್. ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಕಟ್ಟಿಕೊಟ್ಟರೆ, ಅಂತಿಮ ಹಂತದಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ 19 ಎಸೆತಗಳಲ್ಲಿ ಅಜೇಯ 41 ರನ್ ಚಚ್ಚಿ ಅಬ್ಬರಿಸಿದರು. ದಿನೇಶ್ ಕಾರ್ತಿಕ್ ಅದ್ಭುತ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಗರಿ ಕೂಡ ಸಿಕ್ಕಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications