Retirement: ರೋಹಿತ್-ವಿರಾಟ್‌ಗೆ ಫಾರ್ಮ್ ಸಮಸ್ಯೆ; ನಿವೃತ್ತಿ ಘೋಷಣೆ ಸಾಧ್ಯತೆ?
ಭಾರತ ತಂಡದ ಇಬ್ಬರು ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಮತ್ತು ವಿರಾಟ್ ಬಿಗ್ ಇನ್ನಿಂಗ್ಸ್ ಆಡುವುದರಲ್ಲಿ ವಿಫಲರಾಗಿದ್ದಾರೆ. ಇದು 2024ರಲ್ಲಿ ಭಾರತ ತಂಡ ಕೊನೆಯ ಟೆಸ್ಟ್ ಪಂದ್ಯವಾಗಿದೆ. ಇದೀಗ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಜನವರಿ 3 ರಂದು ಸಿಡ್ನಿಯಲ್ಲಿ ಆಡಲಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಮೊದಲ ಇನ್ನಿಂಗ್ಸ್‌ನಲ್ಲಿ 3 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 9 ರನ್ ಗಳಿಸಿ ಔಟಾಗಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 36 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಗಳಿಸಲಷ್ಟೇ ಶಕ್ತರಾದರು. ಈ ಇಬ್ಬರು ಸ್ಟಾರ್ ಬ್ಯಾಟರ್‌ಗಳು ಆಸ್ಟ್ರೇಲಿಯಾ ವಿರುದ್ಧ ಮಂಕಾಗಿರುವುದು ಕಂಡು ಬಂದಿದೆ. ಇದರ ಬೆನ್ನಲೇ ರೋಹಿತ್ ಮತ್ತು ವಿರಾಟ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಬ್ಬರ ನಿಲ್ಲಿಸಿದ ಹಿಟ್‌ಮ್ಯಾನ್
ರೋಹಿತ್ ಶರ್ಮಾ ಅವರು ಕಳೆದ 15 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಅರ್ಧಶತಕವನ್ನು ಗಳಿಸಿದ್ದಾರೆ. ಇದು ಅವರು ಫಾರ್ಮ್ ಸಮಸ್ಯೆ ಎದುರಿಸುತ್ತಿರುವುದಕ್ಕೆ ಉತ್ತಮ ನಿದರ್ಶನವಾಗಿದೆ. ಈ 15 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 6, 5, 23, 8, 2, 52, 0, 8, 18, 11, 3, 6, 10, 3 ಮತ್ತು 9 ರನ್‌ಗಳನ್ನು ಕ್ರಮವಾಗಿ ಕಲೆ ಹಾಕಿದ್ದಾರೆ. ಈ ವರ್ಷ ಅವರ ತಮ್ಮ ಹೆಸರಿನಲ್ಲಿ ಬೇಡದ ದಾಖಲೆಗಳನ್ನು ಮಾಡಿದ್ದಾರೆ.
ಅವರು ಒಟ್ಟು 14 ಟೆಸ್ಟ್‌ಗಳ 26 ಇನ್ನಿಂಗ್ಸ್‌ಗಳಲ್ಲಿ 619 ರನ್ ಗಳಿಸಿದ್ದಾರೆ.
ವಿರಾಟ್ ಪರದಾಟ
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿರುವ 4 ಟೆಸ್ಟ್ ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 172 ರನ್ ಗಳಿಸಿದ್ದಾರೆ. ಇದರಲ್ಲಿ ಪರ್ತ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 100 ರನ್‌ಗಳ ಅಜೇಯ ಇನ್ನಿಂಗ್ಸ್ ಕೂಡ ಸೇರಿದೆ. ಅಂದರೆ ಕೊಹ್ಲಿ ಉಳಿದ 7 ಇನ್ನಿಂಗ್ಸ್‌ಗಳಲ್ಲಿ 72 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಕೊಹ್ಲಿ 7 ಬಾರಿ ಔಟಾಗಿದ್ದು, ದುರದೃಷ್ಟವಶಾತ್ 6 ಬಾರಿ ಅದೇ ತಪ್ಪನ್ನು ಮಾಡಿ ವಿಕೆಟ್ ಒಪ್ಪಿಸಿದ್ದಾರೆ. ಆಫ್ ಸ್ಟಂಪ್‌ನ ಹೊರಗೆ ಹೋಗುವ ಚೆಂಡುಗಳನ್ನು ಎದುರಿಸುವಲ್ಲಿ ವಿಫಲವಾಗುವ ಮೂಲಕ ತನ್ನ ವಿಕೆಟ್ ಕಳೆದುಕೊಂಡಿದ್ದಾರೆ. ಈ ಬಗ್ಗೆ ಟೀಮ್ ಇಂಡಿಯಾ ಮಾಜಿ ನಾಯಕ ಸುನಿಲ್ ಗವಸ್ಕಾರ್ ಕೂಡ ಕೊಹ್ಲಿಗೆ ಸಲಹೆ ನೀಡಿದ್ದರು. ಕೊಹ್ಲಿ ಸಲಹೆಯನ್ನು ತೆಗೆದುಕೊಂಡಂತೆ ಕಾಣುತ್ತಿಲ್ಲ.
ನಿವೃತ್ತಿ ಸಾಧ್ಯತೆ?
ತವರಿನಲ್ಲಿ ನಡೆದ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಸರಣಿಗಳಲ್ಲಿಯೂ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರು ಅಬ್ಬರಿಸಿರಲಿಲ್ಲ. ಜೊತೆಗೆ ಭಾರತ ತಂಡದ ಟಾಪ್ ಆರ್ಡರ್ ಬ್ಯಾಟಿಂಗ್ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಈ ವೇಳೆಯೇ ವಿರಾಟ್ ಅಥವಾ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡಬೇಕು ಎಂದು ಹಲವರು ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಜೋರಾಗಿ ಚರ್ಚೆ ನಡೆದಿತ್ತು.
ಇದೀಗ ವಿರಾಟ್ ಮತ್ತು ರೋಹಿತ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿಯೂ ತಮ್ಮ ಬ್ಯಾಟಿಂಗ್ ಖದರ್ ತೋರುವಲ್ಲಿ ಹಿಂದೆ ಉಳಿದಿದ್ದಾರೆ. ಭಾರತ ತಂಡದ ಗೆಲುವಿಗಾಗಿ ಹೋರಾಡುವ ವಿರಾಟ್ ಮತ್ತು ರೋಹಿತ್ ಅವರ ಶಕ್ತಿ ಕಡಿಮೆಯಾದಂತೆ ಕಾಣುತ್ತಿದೆ. ಹೀಗಾಗಿ ಆಸ್ಟ್ರೇಲಿಯಾ ಪ್ರವಾಸದ ನಂತರ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications