ವಿರಾಟ್, ರೋಹಿತ್ ದೇಶೀಯ ಟೂರ್ನಿಯಲ್ಲಿ ಕಣಕ್ಕೆ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಅಹಮದಾಬಾದ್‌ನಲ್ಲಿ ಮುಕ್ತಾಯವಾದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈಗ ಸ್ಟಾರ್ ಆಟಗಾರರು ದೇಶೀಯ ಏಕದಿನ ಸರಣಿ ವಿಜಯ್ ಹಜಾರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈ ಸರಣಿಯಲ್ಲಿ ಆಡುತ್ತಾರಾ, ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಕ್ಕಿದೆ.
ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ತಾವು ವಿಜಯ್ ಹಜಾರೆ ಟ್ರೋಫಿಯ ಮೊದಲ ಎರಡು ಪಂದ್ಯಗಳಿಗೆ ಲಭ್ಯರಿರುವುದಾಗಿ ಖಚಿತ ಪಡಿಸಿದ್ದಾರೆ. ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ, ಶಿವಂ ದುಬೆ ಆರಂಭಿಕ ಪಂದ್ಯದಲ್ಲಿ ಕಣಕ್ಕೆ ಇಳಿಯುವುದಿಲ್ಲ. ಮುಂಬೈ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಮೊದಲ ಪಂದ್ಯವನ್ನು ಅಹಮದಾಬಾದ್‌ನಲ್ಲಿ ಆಡಲಿದೆ. ಈ ವೇಳೆ ಮುಂಬೈ ರಾಜಕೋಟ್, ಜೈಪುರ್, ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಲಿದೆ.

ವಿರಾಟ್ ಕಣಕ್ಕೆ
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಹ ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ತಂಡದ ಪರ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಡಿಡಿಸಿಎ ಸುದ್ದಿಯನ್ನು ಖಚಿತ ಪಡಿಸಿದೆ. ಇದೇ ವೇಳೆ ಇಶಾಂತ್ ಶರ್ಮಾ ಹಾಗೂ ರಿಷಭ್ ಪಂತ್ ಸಹ ಈ ತಂಡದ ಭಾಗವಾಗಿದ್ದಾರೆ. ರಿಷಭ್ ಪಂತ್ ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಪ್ರಕಟಿಸಲಾದ ದೆಹಲಿ ತಂಡದ ನಾಯಕನನ್ನಾಗಿ ಘೋಷಿಸಲಾಗಿದೆ. ದೆಹಲಿ ತನ್ನ ಮೊದಲ ಪಂದ್ಯವನ್ನು ಡಿಸೆಂಬರ್ 24 ರಂದು ಆಂಧ್ರಪ್ರದೇಶ ವಿರುದ್ಧ ಆಡಲಿದೆ. ನಂತರ ಅವರು ಡಿಸೆಂಬರ್ 26 ರಂದು ಗುಜರಾತ್ ವಿರುದ್ಧ ಆಡಲಿದೆ.
ವಿಜಯ್ ಹಜಾರೆ ಟ್ರೋಫಿಯ ಮೊದಲ ಎರಡು ಪಂದ್ಯಗಳಿಗೆ ದೆಹಲಿ ತಂಡ: ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ (ಉಪನಾಯಕ), ವಿರಾಟ್ ಕೊಹ್ಲಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ಸಿಂಗ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ದಿವಿಜ್ ಮೆಹ್ರಾ, ಆಯುಷ್ ದೋಸೇಜಾ, ವೈಭವ್ ಕಂಡ್ಪಾಲ್, ರೋಹನ್ ರಾಣಾ, ಇಶಾಂತ್ ಶರ್ಮಾ, ನವದೀಪ್ ಸೈನಿ. ಅನುಜ್ ರಾವತ್ (ಸ್ಟ್ಯಾಂಡ್‌ಬೈ ವಿಕೆಟ್ ಕೀಪರ್).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications