Rohit Sharma Retirement: ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಈಗ ಟೆಸ್ಟ್ ಫಾರ್ಮೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಬಾರಿಗೆ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ಇವರು ವೈಟ್ ಬಾಲ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬುಧವಾರ ಸಂಜೆ ರೋಹಿತ್ ಶರ್ಮಾ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಕೆಲ ದಿನಗಳಿಂದ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇನ್ನು ಮುಂದೆ ರೋಹಿತ್ ಶರ್ಮಾ ಬರೀ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ತಂಡದ ಪರ ಕಣಕ್ಕೆ ಇಳಿಯುವುದನ್ನು ಕಾಣಬಹುದಾಗುದೆ. ಭಾರತದಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದಾರೆ.

ರೋಹಿತ್ ಶರ್ಮಾ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಸರಣಿಯಲ್ಲಿ ಟೀಮ್ ಇಂಡಿಯಾ 1-3ರಿಂದ ಸೋಲು ಕಂಡಿತ್ತು. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು. ಇನ್ನು ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯುವ ಬಗ್ಗೆ ಹಲವು ಪ್ರಶ್ನೆಗಳು ಇದ್ದವು. ಈ ಬಗ್ಗೆ ಅವರಿಗೆ ಹಲವು ಬಾರಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಐಪಿಎಲ್ ಮಧ್ಯದಲ್ಲೇ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ಬಳಿಕ ಭಾರತ ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ರೋಹಿತ್ ಶರ್ಮಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಸಾಮಾಜಿಕ ತಾಣದಲ್ಲಿ ಪೋಸ್ಟ್
ರೋಹಿತ್ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ ನಾನು ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುತ್ತಿದ್ದೇನೆ. ನನ್ನ ದೇಶವನ್ನು ಪ್ರತಿನಿಧಿಸುವುದು ನನಗೆ ಗೌರವ. ವರ್ಷಗಳಲ್ಲಿ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಏಕದಿನ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಾಯಕನಾಗಿ ಅಂಕಿ ಅಂಶ
ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು 24 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ತಂಡ 12 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 9ರಲ್ಲಿ ಸೋಲು ಕಂಡಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳು ಡ್ರಾ ಆಗಿವೆ. ಬ್ಯಾಕ್ ಟು ಬ್ಯಾಕ್ ಎರಡು ಸರಣಿ ಸೋಲುಗಳು ಇವರ ನಾಯಕತ್ವವನ್ನು ಪ್ರಶ್ನೆ ಮಾಡುವಂತೆ ಮಾಡಿತ್ತು. ಇವರ ನಾಯಕತ್ವದಲ್ಲಿ ಟೀಮ್ ಇಂಡಿಯಾ 2023ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದಿತ್ತು. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧ ಸೋಲು ಸಹ ಕಂಡಿತ್ತು.
ಟೆಸ್ಟ್‌ನಲ್ಲಿ ರೋಹಿತ್ ಸಾಧನೆ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ 67 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 40.57ರ ಸರಾಸರಿಯಲ್ಲಿ 4301 ರನ್ ಕಲೆ ಹಾಕಿದ್ದು, 12 ಶತಕ ಹಾಗೂ 18 ಅರ್ಧಶತಕಗಳು ಸೇರಿವೆ.
ಏಕದಿನ ಕ್ರಿಕೆಟ್‌ನಲ್ಲಿ ಆಟ
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದರು. ಇವರು ಈಗ ಟೆಸ್ಟ್ ನಿವೃತ್ತಿ ಘೋಷಿಸಿದ್ದು, ಬರೀ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಟೀಮ್ ಇಂಡಿಯಾದ ಪರ ಕಾಣಿಸಿಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications