ಭಾರತ vs ಇಂಗ್ಲೆಂಡ್: ವಿಶ್ರಾಂತಿಯಿಂದ ಮರಳಿದ ರೋಹಿತ್, ಆಡುವ ಬಳಗದಿಂದ ಹೊರಗುಳಿದ ಸೂರ್ಯಕುಮಾರ್

ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯಕ್ಕೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಣಕ್ಕಿಳಿದಿದೆ. ಭಾರತ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿಯುವ ಸವಾಲನ್ನು ಸ್ವೀಕರಿಸಿದೆ. ಹೀಗಾಗಿ ಭಾರತ ಇಂಗ್ಲೆಂಡ್‌ಗೆ ಎಷ್ಟು ರನ್‌ಗಳನ್ನು ಗುರಿಯಾಗಿ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇನ್ನು ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ. ಮೊದಲ ಎರಡು ಪಂದ್ಯಗಳಿಂದ ರೋಹಿತ್ ಶರ್ಮಾಗೆ ವಿಶ್ರಾಂತಿಯನ್ನು ನೀಡಲಾಗಿತ್ತು. ಮೂರನೇ ಪಂದ್ಯದಲ್ಲಿ ರೋಹಿತ್ ನಿರೀಕ್ಷೆಯಂತೆಯೇ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಆರಂಭಿಕನಾಗಿ ರೋಹಿತ್ ಕಣಕ್ಕಿಳಿಯಲಿದ್ದಾರೆ.
ಇನ್ನು ಮೂರಮೇ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಸೂರ್ಯಕುಮಾರ್ ಯಾದವ್ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟ್ವಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಬ್ಯಾಟಿಂಗ್ ಮಾಡುವ ಅವಕಾಶ ಸೂರ್ಯಕುಮಾರ್‌ಗೆ ದೊರೆತಿರಲಿಲ್ಲ. ಆದರೆ ಈಗ ಮೂರನೇ ಪಂದ್ಯದಲ್ಲಿ ಆಡುವ ಬಳಗದಿಂದಲೇ ಅವರು ಹೊರಗುಳಿದಿದ್ದಾರೆ.
ಇನ್ನು ಕೆಎಲ್ ರಾಹುಲ್‌ಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಹುಲ್ ತಂಡದಲ್ಲಿ ಸ್ಥಾನವನ್ನು ಉಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ರಾಹುಲ್ ಆರಂಭಿಕನಾಗಿ ಕಣಕ್ಕಿದಿದ್ದಾರೆ.
ಭಾರತ ಪ್ಲೇಯಿಂಗ್ XI: ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
ಇಂಗ್ಲೆಂಡ್ ಪ್ಲೇಯಿಂಗ್ XI: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮೋರ್ಗಾನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications