For Quick Alerts
ALLOW NOTIFICATIONS  
For Daily Alerts
 

"ರೋಹಿತ್ ಶರ್ಮಾ ಈಗ ನೋ ಹಿಟ್ ಶರ್ಮಾ": ನಾನಾಗಿದ್ದರೆ ಆತ ಪ್ಲೇಯಿಂಗ್ XIನಲ್ಲೇ ಇರುತ್ತಿರಲಿಲ್ಲ ಎಂದ ಶ್ರೀಕಾಂತ್

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮತ್ತೊಂದು ಐಪಿಎಲ್ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಬ್ಯಾಟ್‌ನಿಂದ ರನ್ ಹರಿದು ಬಾರದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ಆಟಗಾರನಾಗಿ ಮಾತ್ರವಲ್ಲದೆ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿಯೂ ರೋಹಿತ್ ಶರ್ಮಾಗೆ ಗೆಲುವು ಕಠಿಣವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾವುದೇ ಹೋರಾಟ ಪ್ರದರ್ಶಿಸದೆ ಸೋಲು ಕಂಡಿತ್ತು. ಈ ಮೂಲಕ ಸತ ಎರಡನೇ ಸೋಲು ಕಂಡಿರುವ ರೋಹಿತ್ ಶರ್ಮಾ ಬಳಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿಯೇ ಮುಂದುವರಿದಿದೆ. ಇತ್ತ ನಾಯಕ ರೋಹಿತ್ ಶರ್ಮಾ ಈ ಆವೃತ್ತಿಯಲ್ಲಿ ಮತ್ತೊಮ್ಮೆ ಶೂನ್ಯ ಸುತ್ತಿದ್ದಾರೆ. ಈ ಪ್ರದರ್ಶನದ ಬಗ್ಗೆ ಮಾಜಿ ಕ್ರಿಟಿಗ ಕ್ರಿಸ್ ಶ್ರೀಕಾಂತ್ ಪ್ರತಿಕ್ರಿಯೆ ನೀಡಿದ್ದು ರೋಹಿತ್ ಶರ್ಮಾ ಬ್ಯಾಟಿಂಗ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

Rohit Sharma bad form: Kris Srikkanth said Rohit Sharma Change name to No hit Sharma

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯುವ ಬದಲಿಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು. ಆದರೆ ರೋಹಿತ್ ಶರ್ಮಾ ಇಲ್ಲಿಯೂ ವೈಫಲ್ಯ ಮುಂದುವರಿದಿದ್ದು ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಈ ಪ್ರದರ್ಶನದ ಬಳಿಕ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಕ್ರಿಸ್ ಶ್ರೀಕಾಂತ್ ಕಟುವಾಗಿ ಟೀಕಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಬೇಕು ಎಂದಿದ್ದು ರೋಹಿತ್ ಶರ್ಮಾ ಬದಲಿಗೆ ನೋ ಹಿಟ್ ಶರ್ಮಾ ಎಂದು ಬದಲಾಯಿಸಿಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.

ಕಾಮೆಂಟರಿ ಸಂದರ್ಭದಲ್ಲಿ ಕ್ರಿಸ್ ಶ್ರೀಕಾಂತ್ ಈ ಕಟು ಮಾತುಗಳನ್ನು ಆಡಿದ್ದಾರೆ. "ರೋಹಿತ್ ಶರ್ಮಾ ತಮ್ಮ ಹೆಸರನ್ನು 'ನೋ ಹಿಟ್ ಶರ್ಮಾ' ಎಂದು ಬದಲಾಯಿಸಿಕೊಳ್ಳಬೇಕು. ನಾನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದರೆ ಆತನನ್ನು ಆಡುವ 11ರ ಬಳಗದಲ್ಲಿಯೂ ಸೇರಿಸಿಕೊಳ್ಳುತ್ತಿರಲಿಲ್ಲ" ಎಂದಿದ್ದಾರೆ ವಿಶ್ವಕಪ್ ವಿಜೇತ ತಂಡದ ಸದಸ್ಯ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್.

ಬೇಡದ ದಾಖಲೆ ಬರೆದ ರೋಹಿತ್ ಶರ್ಮಾ

ಇನ್ನು ಐಪಿಎಲ್ ಇತಿಹಾಸದಲ್ಲಿ ರೋಹಿತ್ ಶರ್ಮಾ ಇದೀಗ ಬೇಡದ ದಾಖಲೆಯೊಂದ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್‌ನಲ್ಲಿ ಅತ್ಯಂತ ಹೆಚ್ಚು ಶೂನ್ಯ ಸುತ್ತಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸೊನ್ನೆಗೆ ಔಟಾಗುವ ಮೂಲಕ ರೋಹಿತ್ ಐಪಿಎಲ್‌ನಲ್ಲಿ 16ನೇ ಬಾರಿಗೆ ಒಂದೂ ರನ್‌ಗಳಿಸದೆ ಔಟಾದಂತಾಗಿದೆ. ಈ ಮೂಲಕ ದಿನೇಶ್ ಕಾರ್ತಿಕ್, ಸುನಿಲ್ ನರೈನ್ ಹಾಗೂ ಮಂದೀಪ್ ಸಿಂಗ್ ದಾಖಲೆ ಹಿಂದಿಕ್ಕಿದ್ದಾರೆ.

ಮುಂಬೈಗೆ ಆರ್‌ಸಿಬಿ ಮುಂದಿನ ಎದುರಾಳಿ

ಇನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಆರ್‌ಸಿಬಿ ತಂಡ್ ವಿರುದ್ಧ ಆಡಲಿದೆ. ಆರ್‌ಸಿಬಿ ಕೂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲು ಕಂಡಿದ್ದು ಮುಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕುತೂಹಲ ಮೂಡಿಸಿದೆ. ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಮುಖಾಮುಖಿ ಆಗಿದ್ದಾಗ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Story first published: Sunday, May 7, 2023, 14:20 [IST]
Other articles published on May 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+