ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆರಂಭಿಕನಾಗಿ ವೇಗವಾಗಿ 1000 ರನ್ ಬಾರಿಸಿದ ರೋಹಿತ್ ಶರ್ಮಾ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ 49 ರನ್‌ಗಳಿಸಿ ಔಟ್ ಆಗಿದ್ದಾರೆ. ಟೀಮ್ ಇಂಡಿಯಾ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಫೆವಿಲಿಯನ್ ಪೆರೇಡ್ ಮಧ್ಯೆ ತಾಳ್ಮೆಯ ಆಟವನ್ನಾಡಿದ ರೋಹಿತ್ ಶರ್ಮಾ ಅಮೂಲ್ಯ ಕೊಡುಗೆಯನ್ನು ನೀಡಿದರು. ಈ ಆಟದ ಮೂಲಕ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆಯೊಂದನ್ನು ಮಾಡಿದ್ದಾರೆ.
ಆರಂಭಿನಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಂತ ವೇಗವಾಗಿ 1000 ರನ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತನ್ನದಾಗಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಹೊರತುಪಡಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 1000ಕ್ಕೂ ಅಧಿಕ ರನ್ ಬಾರಿಸಿದ ಏಕೈಕ ಆಟಗಾರ ಅಜಿಂಕ್ಯ ರಹಾನೆ(1068).
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 1675 ರನ್‌ಗಳಿಸಿರುವ ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಶೇನ್ ಮೊದಲ ಸ್ಥಾನದಲ್ಲಿದ್ದಾರೆ. ಸ್ಟೀವ ಸ್ಮಿತ್(1341) ಜೋ ರೂಟ್(1630) ಬೆನ್ ಸ್ಟೋಕ್ಸ್ (1301) ಸಾವಿರಕಕೂ ಅಧಿಕ ರನ್‌ಗಳಿಸಿರುವ ಇತರ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಆರಂಭಿಕನಾಗಿ 1000 ರನ್‌ಗಳನ್ನು ಅತೊ ವೇಗವಾಗಿ ದಾಖಲಿಸಿದ ಏಷ್ಯಾದ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ 19 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ್ದ ಮಯಾಂಕ್ ಅಗರ್ವಾಲ್ ಅವರನ್ನು ಶರ್ಮಾ ಹಿಂದಿಕ್ಕಿದ್ದು 17 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 205 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿದ್ದು ಭಾರತ ತನ್ನ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸುತ್ತಿದೆ. ಆದರೆ ಭಾರತದ ಬ್ಯಾಟ್ಸ್‌ಮನ್‌ಗಳು ಕೂಡ ಉತ್ತಮ ಮೊತ್ತಗಳಿಸುವಲ್ಲಿ ವಿಫಲರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications