ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ನಿರ್ಣಾಯಕ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆ

IND vs AUS 3rd ODI : Hitman Rohit comes to the rescue when most needed | Oneindia Kannada
Rohit Sharma Becomes 3rd Fastest To 9,000 ODI Runs

ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ದಾಖಲೆಯ ಮೇಲೆ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ. ಆದರೆ ಈ ಸರಣಿಯ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾರಿಂದ ಅಂತಾ ಪ್ರದರ್ಶನ ಮೂಡಿಬಂದಿಲ್ಲ. ಆದರೆ ನಿರ್ಣಾಯಕ ಬೆಂಗಳೂರಿನ ಪಂದ್ಯದಲ್ಲಿ ರೋಹಿತ್ ಉತ್ತಮ ಲಯದಲ್ಲಿದ್ದಾರೆ.

ಟೀಮ್ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮಹತ್ವದ ಮೈಲಿಗಲ್ಲೊಂದನ್ನು ದಾಟಿದ್ದಾರೆ. ಇಂದಿನ ಪಂದ್ಯದಲ್ಲಿ ನಾಲ್ಕು ರನ್‌ಗಳಿಸುತ್ತಿದ್ದಂತೆ ಈ ಸಾಧನೆಯನ್ನು ರೋಹಿತ್ ಶರ್ಮಾ ಪೂರೈಸಿದ್ದಾರೆ. ಟೀಮ್ ಇಂಡಿಯಾ ಡ್ಯಾಶಿಂಗ್ ಓಪನರ್ ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆಯೊಂದನ್ನು ಮಾಡಿದ್ದಾರೆ.

ಭಾರತ vs ಆಸ್ಟ್ರೇಲಿಯಾ: ನಿರ್ಣಾಯಕ ಪಂದ್ಯ; live ಸ್ಕೋರ್ಭಾರತ vs ಆಸ್ಟ್ರೇಲಿಯಾ: ನಿರ್ಣಾಯಕ ಪಂದ್ಯ; live ಸ್ಕೋರ್

ಆಸ್ಟ್ರೇಲಿಯಾ ಆಟಗಾರ ಸ್ಟೀವ್ ಸ್ಮಿತ್ ಕೂಡ ಇದೆ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ದಾಟಿದ್ದಾರೆ. ಸ್ಟೀವ್ ಸ್ಮಿತ್ ಈ ಪಂದ್ಯದಲ್ಲಿ ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 4000 ರನ್ ದಾಟಿದ ಸಾಧನೆಯನ್ನು ಮಾಡಿದ್ದಾರೆ. ಸ್ಟೀವ್ ಸ್ಮಿತ್‌ಗೆ ಈ ಈ ಗಡಿ ದಾಟಲು ಈ ಪಂದ್ಯದಲ್ಲಿ 92 ರನ್‌ಗಳ ಅವಶ್ಯಕತೆಯಿತ್ತು. ಸ್ಮಿತ್ ಭರ್ಜರಿ ಶತಕವನ್ನು(131) ಬಾರಿಸಿದ್ದಾರೆ.

ರೋಹಿತ್ ಶರ್ಮಾ ದಾಖಲೆ:

ರೋಹಿತ್ ಶರ್ಮಾ ದಾಖಲೆ:

ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 9000 ರನ್ ಗಳಿಸಿದ ಸಾಧನೆಯನ್ನು ಮಾಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಈ ಗಡಿಯನ್ನು ವೇಗವಾಗಿ ತಲುಪಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತೀಯನಾಗಿ ವೇಗವಾಗಿ ಈ ಸಾಧನೆಗೈದ ಎರಡನೇ ಆಟಗಾರ. ಶರ್ಮಾ ಈ ಸಾಧನೆಗೆ 217 ಇನ್ನಿಂಗ್ಸ್‌ ತೆಗೆದುಕೊಂಡಿದ್ದಾರೆ.

ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ:

ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ:

9000 ರನ್ ಗಡಿಯನ್ನು ವೇಗವಾಗಿ ದಾಟಿದ ಸಾಧನೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ ಈ ಸಾಧನೆಯನ್ನು 194 ಇನ್ನಿಂಗ್ಸ್‌ಗಳಲ್ಲಿ ಪೂರೈಸಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಇದ್ದಾರೆ.

9000 ಗಡಿ ದಾಟಿದ 7ನೇ ಭಾರತೀಯ:

9000 ಗಡಿ ದಾಟಿದ 7ನೇ ಭಾರತೀಯ:

ರೋಹಿತ್ ಶರ್ಮಾ ಈ ಸಾಧನೆ ಮಾಡಿದ 7ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊಹಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಎಮ್.ಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ರೋಹಿತ್‌ಗೂ ಮುನ್ನ 9000 ರನ್ ಗಡಿ ದಾಟಿದ ಸಾಧನೆ ಮಾಡಿದ ಆಟಗಾರರಾಗಿದ್ದಾರೆ.

ಸ್ಮಿತ್ ಮೈಲಿಗಲ್ಲು:

ಸ್ಮಿತ್ ಮೈಲಿಗಲ್ಲು:

ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರ ಸ್ಟೀವ್ ಸ್ಮಿತ್ ನಾಲ್ಕು ಸಾವಿರ ರನ್‌ಗಡಿದಾಟಿದ್ದಾರೆ. 106ನೇ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಈ ಗಡಿಯನ್ನು ದಾಟಿದ ಸಾಧನೆಯನ್ನು ಮಾಡಿದ್ದಾರೆ. ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಪರವಾಗಿ ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ.

Story first published: Sunday, January 19, 2020, 19:19 [IST]
Other articles published on Jan 19, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X