For Quick Alerts
ALLOW NOTIFICATIONS  
For Daily Alerts
 

ಆರಂಭಿಕನಾಗಿ 10000 ರನ್ : ದಿಗ್ಗಜರ ಸಾಲಿಗೆ ಸೇರಿದ ರೋಹಿತ್ ಶರ್ಮಾ

Rohit Sharma Becomes Fourth Indian To Score 10,000 International Runs As Opener

ಟೀಮ್ ಇಂಡಿಯಾದ ಸ್ಪೋಟಕ ಆಟಗಾರ ರೋಹಿತ್ ಶರ್ಮಾ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಸ್ಪೋಟಕ ಅರ್ಧ ಶತಕ ದಾಖಲಿಸಿರುವ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲನ್ನು ದಾಟಿದ್ದಾರೆ. ಆರಂಭಿಕನಾಗಿ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ನಾಲ್ಕನೇ ಭಾರತೀಯ ಆಟಗಾರನಾಗಿದ್ದಾರೆ.

ಟೀಮ್ ಇಂಡಿಯಾದ ಆರಂಭಿಕರಾಗಿ ಮೊದಲಿಗೆ ಈ ಮಹತ್ವದ ಮೈಲಿಗಲ್ಲನ್ನು ದಾಟಿದ್ದು ಸುನಿಲ್ ಗವಾಸ್ಕರ್. ಅದಾದ ಬಳಿಕ ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೇಹ್ವಾಗ್ ಕೂಡ ಈ ಸಾಧನೆಯನ್ನು ಮಾಡಿರುವ ಇತರ ಮೂವರು ಆಟಗಾರರಾಗಿದ್ದಾರೆ. ಈ ದಿಗ್ಗಜರ ಸಾಲಿಗೆ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.

ರೋಹಿತ್ ಶರ್ಮಾ 2007ರಲ್ಲಿ ಟೀಮ್ ಇಂಡಿಯಾಗೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಪದಾರ್ಪಣೆ ಮಾಡಿದ್ದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಅಷ್ಟೇನೂ ಅದ್ಭುತ ಪ್ರದರ್ಶನ ನೀಡಿರಲಿಲ್ಲ. ಬಳಿಕ 2013ರಲ್ಲಿ ಟೀಮ್ ಇಂಡಿಯಾದ ಅಂದಿನ ನಾಯಕ ಎಂ.ಎಸ್ ಧೋನಿ ರೋಹಿತ್ ಶರ್ಮಾ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವ ನಿರ್ಧಾರವನ್ನು ಮಾಡಿದ್ದರು. ಇದು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕೆರಿಯರ್‌ಗೆ ಮಹತ್ವದ ತಿರುವು ಕೊಟ್ಟಿತು.

ರೋಹಿತ್ ಶರ್ಮಾ ಆರಂಭಿಕನಾಗಿ 77 ಇನ್ನಿಂಗ್ಸ್‌ಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ 2326 ರನ್‌ಗಳಿಸಿದ್ದಾರೆ. 140 ಅಂತರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ರೋಹಿತ್ ಶರ್ಮಾ 7148ರನ್ ಗಳಿಸಿದ್ದಾರೆ. ಏಕದಿನದಲ್ಲಿ 58.11ರ ಸರಾಸರಿಯಲ್ಲಿ ರೋಹಿತ್ ಬ್ಯಾಟ್‌ಬೀಸಿದ್ದಾರೆ

ನ್ಯೂಜಿಲ್ಯಾಂಡ್‌ನಲ್ಲಿ ನಡೆಯುತ್ತಿರುವ ಟಿ20 ಸರಣಿಯಲ್ಲಿ ಆರಂಭದ ಎರಡು ಪಂದ್ಯಗಳಲ್ಲಿ ಕಳಪೆ ಆಟವನ್ನು ಪ್ರದರ್ಶಿಸಿ ವಿಕೆಟ್ ಒಪ್ಪಿಸಿದ್ದರು. ಆದರೆ ಮೂರನೇ ಪಂದ್ಯದಲ್ಲಿ ರೋಹಿತ್ ಸರ್ಮಾ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. 40 ಎಸೆತಗಳಲ್ಲಿ ಭರ್ಜರಿ 60 ರನ್ ಸಿಡಿಸಿ ಮಿಂಚಿದ್ದಾರೆ.

Story first published: Wednesday, January 29, 2020, 15:36 [IST]
Other articles published on Jan 29, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+