ವಿರಾಟ್ ಕೊಹ್ಲಿ ದಾಖಲೆ ಮುರಿದ ರೋಹಿತ್ ಶರ್ಮಾ: ಟಿ20 ಕ್ರಿಕೆಟ್‌ನಲ್ಲಿ ಹಿಟ್‌ಮ್ಯಾನ್ ನಂ. 1

ಚುಟುಕು ಕ್ರಿಕೆಟ್ ಇತಿಹಾಸದಲ್ಲಿ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಸ್ಕೋರರ್ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೆ ಏರುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್‌ನ ಓಪನರ್ ಮಾರ್ಟಿನ್ ಗಪ್ಟಿಲ್ ದಾಖಲೆಯನ್ನ ಸರಿಗಟ್ಟಿದ್ದು, ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಬಾಸ್ ಆಗಿ ಗುರುತಿಸಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪುರುಷರ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಸ್ಕೋರ್ ಗಳಿಸಿದ ಆಟಗಾರ ಎಂಬ ಸಾಧನೆಯನ್ನ ಮಾಡಿದ್ದಾರೆ. ಲಕ್ನೋದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದಿದೆ.
123 ಟಿ20 ಪಂದ್ಯವನ್ನಾಡುತ್ತಿರುವ ರೋಹಿತ್ ಶರ್ಮಾ 140.66ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದು, 33.33 ಸರಾಸರಿಯಲ್ಲಿ 3300 ರನ್ ಕಲೆಹಾಕಿದ್ದಾರೆ. ನಾಲ್ಕು ಅಮೋಘ ಶತಕಗಳು ಮತ್ತು 26 ಅರ್ಧಶತಕಗಳಿಸಿರುವ ರೋಹಿತ್ 155 ಸಿಕ್ಸರ್‌ಗಳನ್ನ ಸಿಡಿಸಿದ್ದಾರೆ.
ರೋಹಿತ್ ಈ ಸಾಧನೆ ಮಾಡುವ ಮೊದಲು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 3,296 ರನ್ ಹಾಗೂ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ 3299 ರನ್ ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.
32ಎಸೆತಗಳಲ್ಲಿ 44 ರನ್ ಕಲೆಹಾಕಿದ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications