ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಕೆಕೆಆರ್ ವಿರುದ್ಧ ವಾರ್ನರ್ ದಾಖಲೆ ಮುರಿದ ರೋಹಿತ್ ಶರ್ಮಾ

Rohit Sharma Breaks Record Of David Warner Against Kkr

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಆಟವನ್ನು ಪ್ರದರ್ಶಿಸಿದ್ದಾರೆ. ಮೊದಲ ಪಂದ್ಯದಲ್ಲಿ ವೈಫಲ್ಯವನ್ನು ಅನುಭವಿಸಿದ್ದ ಶರ್ಮಾ ತಮ್ಮ ಎರಡನೇ ಪಂದ್ಯದಲ್ಲಿ ಲಯಕ್ಕೆ ಮರಳಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಶರ್ಮಾ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಒಳಗಾಗಿದ್ದಾರೆ. ಇಂದಿನ ಪಂದ್ಯದಲ್ಲಿ ಈ ಸಾಧನೆಯನ್ನು ಮಾಡಲು ರೋಹಿತ್ 5 ರನ್‌ಗಳಿಸಿದರೆ ಸಾಕಿತ್ತು. ಸಂದೀಪ್ ವಾರಿಯರ್ ಎಸೆತ ಮೊದಲ ಓವರ್‌ನಲ್ಲಿ ಶರ್ಮಾ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಈ ಸಾಧನೆಯನ್ನು ಪೂರೈಸಿದ್ದಾರೆ.

ಐಪಿಎಲ್ 2020: ಅಂಪೈರ್ ನಿರ್ಧಾರಕ್ಕೆ ಗರಂ ಆದ ಕೂಲ್ ಕ್ಯಾಪ್ಟನ್ ಧೋನಿಐಪಿಎಲ್ 2020: ಅಂಪೈರ್ ನಿರ್ಧಾರಕ್ಕೆ ಗರಂ ಆದ ಕೂಲ್ ಕ್ಯಾಪ್ಟನ್ ಧೋನಿ

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ಈ ಹಿಂದೆ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಹೊಂದಿದ್ದರು. ಈಗ ಈ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಡೇವಿಡ್ ವಾರ್ನರ್ ಕೆಕೆಆರ್ ವಿರುದ್ಧ 829 ರನ್ ಗಳಿಸಿ ಈ ಪಟ್ಟಿಯಲ್ಲಿ ಮುಂದಿದ್ದರು. ಈ ಪಂದ್ಯಕ್ಕೂ ಮುನ್ನ ವಾರ್ನರ್‌ಗಿಂತ 5ರನ್‌ಗಳಷ್ಟು ಹಿಂದಿದ್ದ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಭರ್ಜರಿ 80 ರನ್‌ಗಳಿಸುವ ಮೂಲಕ ಈ ಮೊತ್ತವನ್ನು 904ರನ್‌ಗಳಿಗೆ ಹಿಗ್ಗಿಸಿಕೊಂಡಿದ್ದಾರೆ.

ಹಾಗಿದ್ದರೂ ಒಟ್ಟಾರೆ ಟಿ20 ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ರನ್‌ಗಳಿಕೆಯಲ್ಲಿ ರೊಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಎಲ್ಲಾ ರೀತಿಯ ಸ್ಪರ್ಧಾತ್ಮಕ ಪಂದ್ಯಗಳಲ್ಲಿ ಕೆಕೆಆರ್ ವಿರುದ್ಧ ಸುರೇಶ್ ರೈನಾ ಅತಿ ಹೆಚ್ಚಿನ ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಯನ್ನು ಹೊಂದಿದ್ದಾರೆ. ರೈನಾ 955 ರನ್‌ಗಳಿಸಿ ಈ ಪಟ್ಟಿಯಲ್ಲಿ ಮುಂದಿದ್ದಾರೆ.

Story first published: Thursday, September 24, 2020, 10:23 [IST]
Other articles published on Sep 24, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X