For Quick Alerts
ALLOW NOTIFICATIONS  
For Daily Alerts
 

Rohit Sharma: ಸಚಿನ್ ತೆಂಡೂಲ್ಕರ್ ರೆಕಾರ್ಡ್ ಬ್ರೇಕ್ ಮಾಡಿದ ರೋಹಿತ್ ಶರ್ಮಾ

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 280 ರನ್‌ಗಳ ಜಯ ಸಾಧಿಸಿದೆ. ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇತ್ತ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ಅಬ್ಬರಿಸಲು ಸಾಧ್ಯವಾಗಲಿಲ್ಲ. ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಸರಣಿಯಲ್ಲಿ ಹಿಟ್‌ಮ್ಯಾನ್ ಅಭಿಮಾನಿಗಳು ರೋಹಿತ್ ಶರ್ಮಾ ಶತಕ ಬಾರಿಸುತ್ತಾರೆ ಎಂದು ನಿರೀಕ್ಷಿಸಿದ್ದರು. ಅವರಿಂದ ಅರ್ಧಶತಕವನ್ನೂ ಗಳಿಸಲು ಆಗಲಿಲ್ಲ. ಆದರೆ ಅವರ ಹೆಸರಿನಲ್ಲಿ ದೊಡ್ಡ ದಾಖಲೆ ದಾಖಲಾಗಿದೆ.

Rohit Sharma breaks Sachin Tendulkar record in international cricket

ರೋಹಿತ್ ರೆಕಾರ್ಡ್

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೃಹತ್ ಸಾಧನೆ ಮಾಡಿದ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ರೋಹಿತ್ ಈಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ವಿಶ್ವದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಮೊದಲ ಆಟಗಾರ.

ಈಗಾಗಲೇ ನಿವೃತ್ತಿ ಘೋಷಿಸಿರುವ ಪಾಂಟಿಂಗ್ 377 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀಲಂಕಾದ ಮಹೇಲಾ ಜಯವರ್ಧನೆ 336 ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 322 ಮತ್ತು ರೋಹಿತ್ 308 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದ್ದಾರೆ. ಇದಲ್ಲದೆ, ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ 307 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಜಯ ದಾಖಲಿಸಿದ್ದಾರೆ.

ಪಂದ್ಯದ ಫಲಿತಾಂಶ

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್‌ನ ನಾಲ್ಕನೇ ದಿನದಂದು ಟೀಮ್ ಇಂಡಿಯಾ ಎದುರು ಬಾಂಗ್ಲಾದೇಶ ತಂಡ ಸೋಲು ಕಂಡಿತ್ತು. ಟೀಮ್ ಇಂಡಿಯಾ ನೀಡಿದ 515 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶದ ಎರಡನೇ ಇನ್ನಿಂಗ್ಸ್ 234 ರನ್‌ಗಳಿಗೆ ಸರ್ವಪತನವಾಯಿತು. ನಾಯಕ ನಜ್ಮುಲ್ ಹಸನ್ ಶಾಂಟೊ ಬಾಂಗ್ಲಾದೇಶ ಪರ 82 ರನ್‌ಗಳ ಗಳಿಸುವ ಮೂಲಕ ಆಗ್ರ ಸ್ಕೋರರ್ ಆದರು. ಭಾರತದ ಪರ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 6 ವಿಕೆಟ್ ಉರುಳಿಸಿ ಸಂಭ್ರಮಿಸಿದರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.

ಎರಡನೇ ಟೆಸ್ಟ್ ಯಾವಾಗ?

ಈಗ ಸರಣಿಯ ಎರಡನೇ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ಸೆಪ್ಟೆಂಬರ್ 27 ರಿಂದ ನಡೆಯಲಿದೆ. ಸರಣಿಯ ಅಂತಿಮ ಪಂದ್ಯಕ್ಕೆ ಬಿಸಿಸಿಐ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ದುಲೀಪ್ ಟ್ರೋಫಿಯಲ್ಲಿ ಗಮನ ಸೆಳೆಯುತ್ತಿರುವ ಯುವ ಆಟಗಾರರಿಗೆ ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಅವಕಾಶ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಬಿಸಿಸಿಐ ಟೀಮ್ ಇಂಡಿಯಾದಲ್ಲಿ ಯಾವದೇ ಬದಲಾವಣೆ ಮಾಡಿಲ್ಲ. ಮೊದಲ ಗೆಲುವಿನ ತಂಡದಲ್ಲಿದ ಆಟಗಾರರನ್ನೇ ಎರಡನೇ ಟೆಸ್ಟ್‌ಗೂ ಆಯ್ಕೆ ಮಾಡಲಾಗಿದೆ.

Story first published: Sunday, September 22, 2024, 22:27 [IST]
Other articles published on Sep 22, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+