Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ಗೌತಮ್ ಗಂಭೀರ್ ದಾಖಲೆ ಅಳಿಸಿದ ಹಿಟ್‌ಮ್ಯಾನ್

ಕಾನ್ಪುರದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳ ಟೆಸ್ಟ್ ಭಾರೀ ಕುತೂಹಲ ಮೂಡಿಸಿದೆ. ಇಂತಹ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್ ರೋಹಿತ್ ಶರ್ಮಾ 23 ರನ್ ಗಳಿಸಿ ಮೆಹಿದಿ ಹಸನ್ ಮಿರಾಜ್ ಬೌಲಿಂಗ್‌ನಲ್ಲಿ ವಿಕೆಟ್ ಕಳೆದುಕೊಂಡರು. ರೋಹಿತ್ ಶರ್ಮಾ ದೊಡ್ಡ ಇನ್ನಿಂಗ್ಸ್ ಆಡದಿದ್ದರೂ, ಕೇವಲ 7 ರನ್ ಗಳಿಸುವ ಮೂಲಕ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ದಾಖಲೆಯನ್ನು ಮುರಿದ್ದಾರೆ. ಅಲ್ಲದೆ, ರೋಹಿತ್ ಶರ್ಮಾ ಅವರ ಇನ್ನಿಂಗ್ಸ್‌ನಲ್ಲಿ ಎರಡು ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳು ಕಾನ್ಪುರ ಸ್ಟೇಡಿಯಂನಲ್ಲಿ ತುಂಬಿದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮಜಾ ನೀಡಿದೆ.

Rohit Sharma broke Gautam Gambhir record

ರೋಹಿತ್ ದಾಖಲೆ ಏನು?

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 23 ರನ್ ಹೊಡೆಯುವ ಮೂಲಕ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಗಂಭೀರ್ ಅವರಿಗಿಂತ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರಾರದರು. ಟೀಮ್ ಇಂಡಿಯಾ ಪರ ಇದುವರೆಗೆ ರೋಹಿತ್ ಶರ್ಮಾ 60 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 4171 ರನ್‌ ಗಳಿಸಿದ್ದಾರೆ. ಅವರು ತಮ್ಮ ಟೆಸ್ಟ್ ಕ್ರಿಕೆಟ್‌ ವೃತ್ತಿಜೀವನದಲ್ಲಿ 12 ಶತಕ ಹಾಗೂ 17 ಅರ್ಧಶತಕಗಳನ್ನು ಹೊಂದಿದ್ದಾರೆ. ಇತ್ತ ಗೌತಮ್ ಗಂಭೀರ್ 58 ಟೆಸ್ಟ್‌ ಪಂದ್ಯಗಳನ್ನಾಡಿದ್ದು, 9 ಶತಕ ಹಾಗೂ 22 ಅರ್ಧಶತಕಗಳೊಂದಿಗೆ 4154 ರನ್‌ ಹೊಡೆದಿದ್ದಾರೆ.

ಭಾರತ ವಿಶ್ವ ದಾಖಲೆ

ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದೆ. ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ಮೂರು ಓವರ್‌ಗಳಲ್ಲಿ 50 ರನ್ ಗಳಿಸಿದರು. ಇದು ಟೆಸ್ಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ತಂಡ ಗಳಿಸದ ವೇಗದ ಅರ್ಧಶತಕವಾಗಿದೆ. ಇದಾದ ಬಳಿಕ ಟೀಮ್ ಇಂಡಿಯಾ ಅತಿ ವೇಗದ ಶತಕದ ದಾಖಲೆಯನ್ನೂ ಮಾಡಿದೆ.

ಇದಲ್ಲದೆ, ಭಾರತ ತನ್ನ ಹೆಸರಿನಲ್ಲಿ ಮತ್ತೊಂದು ದಾಖಲೆ ಮಾಡಿದೆ. ಕ್ಯಾಲೆಂಡರ್ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಜೊತೆಗೆ ಟೀಮ್ ಇಂಡಿಯಾ ಇಂಗ್ಲೆಂಡ್ ದಾಖಲೆಯನ್ನು ಮುರಿದಿದೆ. 2022ರಲ್ಲಿ ಆಂಗ್ಲ ಪಡೆ 89 ಸಿಕ್ಸರ್‌ಗಳನ್ನು ಬಾರಿಸಿತ್ತು.

Story first published: Monday, September 30, 2024, 16:47 [IST]
Other articles published on Sep 30, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+