Rohit Sharma: ರೋಹಿತ್ ಶರ್ಮಾಗೆ ಮತ್ತೆ ಮುಂಬೈ ಇಂಡಿಯನ್ಸ್ ಪಟ್ಟ?
ಮುಂಬೈ ಇಂಡಿಯನ್ಸ್ 19ನೇ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದೆ. ಮುಂಬೈ ಈ ಲೀಗ್‌ನ ಮುಂದಿನ ಪಂದ್ಯ ಮೇ 10 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ರಾಯ್‌ಪುರ್‌ನಲ್ಲಿ ಆಡಲಿದೆ. ಈ ಮಹತ್ವದ ಪಂದ್ಯಕ್ಕಾಗಿ ಗಾಯಕ್ಕೆ ತುತ್ತಾಗಿರುವ ಹಾರ್ದಿಕ್ ಪಾಂಡ್ಯ ಅಖಾಡಕ್ಕೆ ಇಳಿಯುವುದು ಡೌಟ್ ಎಂದು ಹೇಳಲಾಗುತ್ತಿದೆ. ಈಗ ಈ ಸಾಲಿಗೆ ಸೂರ್ಯಕುಮಾರ್ ಯಾದವ್ ಸೇರುವ ಸಾಧ್ಯತೆ ಇದ್ದು, ಇವರು ಸಹ ಆರ್‌ಸಿಬಿ ವಿರುದ್ಧದ ಪಂದ್ಯದಿಂದ ಮಿಸ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಹಾಗಿದ್ದರೆ ಮುಂಬೈ ತಂಡವನ್ನು ಮುನ್ನಡೆಸುವುದು ಯಾರು? ಎಂಬ ಪ್ರಶ್ನೆ ಉದ್ಭವಿಸುತ್ತದೆ.
ಮಾಧ್ಯಮ ವರದಿಗಳ ಪ್ರಕಾರ ಸೂರ್ಯಕುಮಾರ್ ಯಾದವ್ ತಂದೆ ಆಗಲಿದ್ದು, ಈ ವಾರದಲ್ಲಿ ಅವರು ತಮ್ಮ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಸೂರ್ಯ ಮುಂದಿನ ಪಂದ್ಯದಲ್ಲಿ ಕಣಕ್ಕೆ ಇಳಿಯುವುದು ಡೌಟ್ ಎಂದು ಹೇಳಲಾಗುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್, ಆರ್‌ಸಿಬಿ ಪಂದ್ಯವನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಬೆನ್ನು ನೋವಿನ ಗಾಯಕ್ಕೆ ತುತ್ತಾಗಿರುವ ಹಾರ್ದಿಕ್ ಪಾಂಡ್ಯ ಇನ್ನು ಚೇತರಿಸಿಕೊಂಡಿಲ್ಲ. ಅಲ್ಲದೆ ಮುಂಬೈ ಇಂಡಿಯನ್ಸ್ ತಂಡದ ಜೊತೆಗೆ ಹಾರ್ದಿಕ್ ಪಾಂಡ್ಯ ರಾಯ್‌ಪುರ್‌ಗೆ ಪ್ರಯಾಣ ಬೆಳೆಸಿಲ್ಲ ಎಂದು ತಿಳಿದು ಬಂದಿದೆ. ಸೂರ್ಯ ಸಹ ತಂಡದಿಂದ ಹೊರ ನಡೆದರೆ ತಂಡವನ್ನು ಮುನ್ನಡೆಸುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈ ತಂಡವನ್ನು ಅನುಭವಿ ಆಟಗಾರ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
ರೋಹಿತ್‌ಗೆ ಪಟ್ಟ?
ಮುಂಬೈನಲ್ಲಿ ನಡೆದಿದ್ದ ಆರ್‌ಸಿಬಿ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ರೋಹಿತ್ ಶರ್ಮಾ ಹಲವು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಎಲ್‌ಎಸ್‌ಜಿ ವಿರುದ್ಧ ರೋಹಿತ್ ಶರ್ಮಾ ಕಣಕ್ಕೆ ಇಳಿದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡದ ಜಯದಲ್ಲಿ ಮಿಂಚಿದ್ದರು. ಹಾರ್ದಿಕ್ ಹಾಗೂ ಸೂರ್ಯ ಅವರ ಅನುಪಸ್ಥಿತಿಯಲ್ಲಿ ಮುಂಬೈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವ ಸಾಧ್ಯತೆ ಇದೆ. ಇವರ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಐಪಿಎಲ್ ಚಾಂಪಿಯನ್ ಪಟ್ಟವನ್ನು ಸಹ ಅಲಂಕರಿಸಿತ್ತು.
ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅನುಭವಿ ಸೂರ್ಯಕುಮಾರ್ ಯಾದವ್ ಅವರ ಅನುಪಸ್ಥಿತಿಯ ಬಗ್ಗೆ ಫ್ರಾಂಚೈಸಿಗಳಿಂದ ಯಾವುದೇ ಮಾಹಿತಿ ಇಲ್ಲ. ಇನ್ನು ಮುಂಬೈ ತಂಡವನ್ನು ಮುನ್ನಡೆಸುವ ರೇಸ್‌ನಲ್ಲಿ ರೋಹಿತ್ ಶರ್ಮಾಗೆ ಜಸ್ಪ್ರೀತ್ ಬುಮ್ರಾ ಸಹ ಕಾಣಿಸಿಕೊಳ್ಳಲಿದ್ದಾರೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಟಾಸ್ ವೇಳೆ ಸಿಗಲಿದೆ.
ಮುಂಬೈ ತಂಡದ ಲೀಗ್ ಹಂತದ ಮುಂದಿನ ಪಂದ್ಯಗಳು
- ಮೇ 10, ಆರ್‌ಸಿಬಿ , ರಾಯ್‌ಪುರ್, ಸಂಜೆ 7:30
- ಮೇ 14, ಪಂಜಾಬ್ ಕಿಂಗ್ಸ್ , ಧರ್ಮಶಾಲಾ, ಸಂಜೆ 7:30
- ಮೇ 20, ಕೆಕೆಆರ್, ಕೋಲ್ಕತಾ, ಸಂಜೆ 7:30
- ಮೇ 24, ರಾಜಸ್ಥಾನ್ ರಾಯಲ್ಸ್, ಮುಂಬೈ, ಮಧ್ಯಾಹ್ನ 3:30
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications