ರೋಹಿತ್ ಶರ್ಮಾ ನಿರ್ಮಿಸಿದ ಐದು ದಾಖಲೆಗಳು
ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕೋಲ್ಕತ್ತಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ತಮಗೆ ವಯಸ್ಸಾಗಿದೆ ಆದರೆ, ಆಟ ಇನ್ನು ಯುವಕರು ನಾಚಿಸುವಂತಿದೆ ಎಂದು ಸಾಬೀತು ಪಡಿಸಿದ್ದಾರೆ. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ತಮ್ಮನ್ನು ಪರಿಗಣಿಸದಂತೆ ಇರಲು ಸಾಧ್ಯವೇ ಇಲ್ಲ ಎಂಬಂತೆ ಬ್ಯಾಟಿಂಗ್ ನಡೆಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಕೆಕೆಆರ್ ಮೊದಲು ಬ್ಯಾಟ್ ಮಾಡಿ 220 ರನ್ ಸೇರಿಸಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಇನ್ನು ಐದು ಎಸೆತ ಬಾಕಿ ಇರುವಂತೆ ಪಂದ್ಯವನ್ನು ಗೆದ್ದು ಬೀಗಿತು. ಈ ವೇಳೆ ಮುಂಬೈ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅರ್ಧಶತಕ ಬಾರಿಸಿ ಮಿಂಚಿದರು. ಅಲ್ಲದೆ ದಾಖಲೆ ಬರೆದರು.

ವೇಗದ ಅರ್ಧಶತಕ
ಆಕರ್ಷಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಇವರು 2015ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ರೋಹಿತ್ ಶರ್ಮಾ 38 ಎಸೆತಗಳಲ್ಲಿ 78 ರನ್ ಗಳಿಸಿ ಔಟ್ ಆದರು. ಈ ಕ್ಲಾಸಿಕ್ ಇನಿಂಗ್ಸ್ ವೇಳೆ ರೋಹಿತ್ ಹಲವು ದಾಖಲೆಗಳನ್ನು ಬರೆದರು.
ಏಷ್ಯಾದ ಮೊದಲ ಬ್ಯಾಟರ್
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರೋಹಿತ್ 6 ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 550ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಏಷ್ಯಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ವಾಂಖೆಡೆಯಲ್ಲಿ 2500+ ರನ್
ಐಪಿಎಲ್‌ನಲ್ಲಿ ಆಡುವಾಗ ಒಂದೇ ಮೈದಾನದಲ್ಲಿ 2500ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇವರು ವಾಂಖೆಡೆ ಮೈದಾನದಲ್ಲಿ 2,529 ರನ್ ಸಿಡಿಸಿದ್ದಾರೆ.
ಕೆಕೆಆರ್ ವಿರುದ್ಧ ದೊಡ್ಡ ಸಾಧನೆ
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 78 ರನ್ ಬಾರಿಸುತ್ತಲೇ ಮತ್ತೊಂದು ದಾಖಲೆ ನಿರ್ಮಿಸಿದರು. ಒಂದೇ ತಂಡದ ವಿರುದ್ಧ 1000ಕ್ಕೂ ಹೆಚ್ಚು ರನ್ ಬಾರಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.
ಒಂದೇ ತಂಡದ ವಿರುದ್ಧ ಹೆಚ್ಚು ರನ್ ಬಾರಿಸಿದ ಬ್ಯಾಟರ್ಸ್
1161, ಕೆಕೆಆರ್ ವಿರುದ್ಧ ರೋಹಿತ್ ಶರ್ಮಾ
1159, ಪಂಜಾಬ್ ವಿರುದ್ಧ ವಿರಾಟ್ ಕೊಹ್ಲಿ
1146, ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ
1134, ಪಂಜಾಬ್ ವಿರುದ್ಧ ಡೇವಿಡ್ ವಾರ್ನರ್
1130, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ
1093, ಕೆಕೆಆರ್ ವಿರುದ್ಧ ಡೇವಿಡ್ ವಾರ್ನರ್
ಐಪಿಎಲ್‌ನಲ್ಲಿ 50ನೇ ಅರ್ಧಶತಕ
ಕೆಕೆಆರ್ ವಿರುದ್ಧ ರೋಹಿತ್ ಶರ್ಮಾ ಅರ್ಧಶತಕ ಬಾರಿಸುತ್ತಲೇ ಐಪಿಎಲ್‌ನಲ್ಲಿ 50ನೇ ಅರ್ಧಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇವರು ಈ ವರೆಗೆ 72 ಅರ್ಧಶತಕಗಳನ್ನು ಬಾರಿಸಿದ್ದಾರೆ. ಉಳಿದಂತೆ ಡೇವಿಡ್ ವಾರ್ನರ್ (66), ಶಿಖರ್ ಧವನ್ (53) ನಂತರದ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿಯ ಮ್ಯಾಜಿಕಲ್ ಸ್ಟ್ರೈಟ್ ಡ್ರೈವ್‌ಗೆ ಫ್ಯಾನ್ಸ್ ಫಿದಾ
ರಯಾನ್ ರಿಕಲ್ಟನ್ ಅವರೊಂದಿಗೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 145 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಇದು ಸಹ ಮುಂಬೈ ಇಂಡಿಯನ್ಸ್ ತಂಡ ವಾಂಖೆಡೆಯಲ್ಲಿ ಮೊದಲ ವಿಕೆಟ್‌ಗೆ ಕಲೆ ಹಾಕಿದ ಗರಿಷ್ಠ ರನ್ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications