Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ಕ್ರಿಸ್ ಗೇಲ್ ವಿಶ್ವ ದಾಖಲೆ ಮುರಿದ ಹಿಟ್‌ಮ್ಯಾನ್

ದುಬೈನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್‌ಗೆ ಪ್ರವೇಶ ಪಡೆದಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತೊಂದು ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅವರು ವೆಸ್ಟ್ ಇಂಡೀಸ್ ಮಾಜಿ ಬ್ಯಾಟರ್ ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.

ಆಸ್ಟ್ರೇಲಿಯಾ ನೀಡಿದ್ದ 265 ರನ್‌ಗಳ ಗುರಿಯನ್ನು ಬೆನ್ನಟ್ಟಲು ಟೀಮ್ ಇಂಡಿಯಾ ಮೈದಾನಕ್ಕೆ ಬಂದಾಗ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ ಐಸಿಸಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Rohit Sharma creates record for most sixes in ICC ODIs

ಐಸಿಸಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಆದರೆ ರೋಹಿತ್ ಅವರಿಗಿಂತ ಮುಂದೆ ಹೋಗಿದ್ದಾರೆ. ಐಸಿಸಿ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಈಗ 65 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಕ್ರಿಸ್ ಗೇಲ್ 64 ಸಿಕ್ಸರ್ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 10 ವಿಕೆಟ್‌ಗಳ ನಷ್ಟಕ್ಕೆ 264 ರನ್ ಗಳಿಸಿತು. ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 265 ರನ್‌ಗಳ ಗೆಲುವಿನ ಗುರಿಯನ್ನು ತಲುಪಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭಾರತ ಪರ ಅದ್ಭುತ ಇನ್ನಿಂಗ್ಸ್ ಆಡಿದರು. ಶ್ರೇಯಸ್ ಅಯ್ಯರ್ ಅವರೊಂದಿಗೆ ವಿರಾಟ್ ಉತ್ತಮ ಜೊತೆಯಾಟ ಆಡಿದರು. ಕೊಹ್ಲಿ 84 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದಕ್ಕಾಗಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಆಸ್ಟ್ರೇಲಿಯಾ ನೀಡಿದ 265 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಪರ ಆರಂಭಿಕ ಬ್ಯಾಟರ್‌ಗಳಾಗಿ ಕ್ರೀಸ್‌ಗೆ ಬಂದ ರೋಹಿತ್ ಶರ್ಮಾ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಮೊದಲ ಓವರ್‌ನ ಎರಡನೇ ಎಸೆತದಲ್ಲಿ ಅವರು ಸಿಕ್ಸರ್ ಬಾರಿಸಿದರು. ಇದರೊಂದಿಗೆ ಅವರು ಕ್ರಿಸ್ ಗೇಲ್ ದಾಖಲೆಯನ್ನು ಅಳಿಸಿ ಹಾಕಿದರು.

ಪ್ಲೇಯಿಂಗ್-11

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

ಆಸ್ಟ್ರೇಲಿಯಾ: ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರಶಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.

Story first published: Tuesday, March 4, 2025, 23:31 [IST]
Other articles published on Mar 4, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+