Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ನಿವೃತ್ತಿಯ ಬಗ್ಗೆ ರೋಹಿತ್ ಶರ್ಮಾ ಹೇಳಿದಿಷ್ಟು?

ದುಬೈನಲ್ಲಿ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸಿದೆ. ಚಾಂಪಿಯನ್ಸ್‌ ಟ್ರೋಫಿಗೆ ಮುತ್ತಿಟ್ಟ ರೋಹಿತ್ ಶರ್ಮಾ ಪಡೆ, ತನ್ನ ಮೇಲೆ ಇದ್ದ ಟೀಕೆಗಳಿಗೆ ಮೈದಾನದಲ್ಲೇ ಉತ್ತರ ನೀಡಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಭಾರತ 4 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಟೀಮ್ ಇಂಡಿಯಾ ಪ್ರಸಕ್ತ ಟೂರ್ನಿಯಲ್ಲಿ ಆಡಿದ ಐದು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಹೊಂದಿದೆ. ಭಾರತ ದುಬೈನ ನಿಧಾನಗತಿಯ ಪಿಚ್‌ಗಳಲ್ಲಿ ಆಡಿದ್ರೂ, ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತು.

ನ್ಯೂಜಿಲೆಂಡ್ ವಿರುದ್ಧದ ಟೀಮ್ ಇಂಡಿಯಾದ ಅಮೋಘ ಜಯದ ಬಳಿಕ ರೋಹಿತ್‌ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು. ಇದು ತಂಡದ ಸಾಧನೆ ಎಂದು ತಂಡದ ಪ್ರತಿ ಆಟಗಾರನನ್ನು ಕೊಂಡಾಡಿದರು. ಈ ವೇಳೆ ರೋಹಿತ್ ಶರ್ಮಾ ಆ ಒಂದು ಪ್ರಶ್ನೆಗೆ ಉತ್ತರ ಸಹ ನೀಡಿದರು.

Rohit Sharma Dismisses Retirement Rumors Says Decision Will Be Based on Future Plans

ಚಾಂಪಿಯನ್ಸ್‌ ಟ್ರೋಫಿ ಆರಂಭವಾಗುವ ಮೊದಲೇ ರೋಹಿತ್ ಶರ್ಮಾ, ಈ ಟೂರ್ನಿಯ ಬಳಿಕ ನಿವೃತ್ತಿ ಘೋಷಿಸುತ್ತಾರೆ ಎಂಬ ಮಾತುಗಳು ಇದ್ದವು. ಈ ಪ್ರಶ್ನೆಗೆ ಉತ್ತರ ನೀಡಿರುವ ರೋಹಿತ್‌, ನಾನು ಈಗ ನಿವೃತ್ತಿ ಹೊಂದುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಭವಿಷ್ಯದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ನಿವೃತ್ತಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಎಲ್ಲರೂ ಟ್ರೋಫಿಯನ್ನು ಗೆಲ್ಲಲೇ ಬೇಕೆಂದು ಆಡುತ್ತಾರೆ. ನಾನು ಈ ಟ್ರೋಫಿಯನ್ನು ದೇಶವಾಸಿಗಳಿಗೆ ಸರ್ಮಪಿಸುತ್ತಿದ್ದೇನೆ ಎಂದು ತಿಳಿಸಿದರು.

ಫೈನಲ್‌ನಲ್ಲಿ ಜವಾಬ್ದಾರಿಯುತ ಆಟ

ರೋಹಿತ್ ಶರ್ಮಾ ಒಬ್ಬ ಬಿಗ್ ಮ್ಯಾಚ್ ಪ್ಲೇಯರ್‌ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದರು. ಇವರು ಪ್ರಸಕ್ತ ಸರಣಿಯಲ್ಲಿ ಒಂದೇ ಒಂದು ದೊಡ್ಡ ಇನಿಂಗ್ಸ್‌ ಕಟ್ಟದೇ ನಿರಾಸೆ ಅನುಭವಿಸಿದ್ದರು. ಆದರೆ ಫೈನಲ್‌ ಪಂದ್ಯದಲ್ಲಿ ರೋಹಿತ್‌ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾದರು. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್‌ 83 ಎಸೆತಗಳಲ್ಲಿ 76 ರನ್‌ ಸೇರಿಸಿ ತಂಡಕ್ಕೆ ಆಧಾರವಾದರು. ಈ ಇನಿಂಗ್ಸ್‌ ಟೀಮ್ ಇಂಡಿಯಾದ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿತು. ಟೀಮ್ ಇಂಡಿಯಾ ಐಸಿಸಿ ಈವೆಂಟ್‌ಗಳಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡವನ್ನು ಮಣಿಸುವಲ್ಲಿ ಸಫಲವಾಯಿತು.

Rohit Sharma Dismisses Retirement Rumors Says Decision Will Be Based on Future Plans

ಭಾರತ ನ್ಯೂಜಿಲೆಂಡ್‌ ವಿರುದ್ಧ 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ ಹಾಗೂ 2023ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿತ್ತು.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಐಸಿಸಿ ಪ್ರಾಯೋಜಿತ ಎಲ್ಲ ಟೂರ್ನಿಗಳಲ್ಲಿ ತಂಡವನ್ನು ಫೈನಲ್‌ಗೆ ಕೊಂಡಯ್ದ ಸಾಧನೆಯನ್ನು ಮಾಡಿದರು. ಭಾರತ 2023 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌, 2023ರ ಏಕದಿನ ವಿಶ್ವಕಪ್‌, 2024ರ ಟಿ20 ವಿಶ್ವಕಪ್‌ ಫೈನಲ್‌, 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ಆದರೆ ನಾಲ್ಕು ಐಸಿಸಿ ಟೂರ್ನಿಗಳಲ್ಲಿ ಭಾರತ ಎರಡರಲ್ಲಿ ಜಯ ಸಾಧಿಸಿದೆ.

Story first published: Monday, March 10, 2025, 8:50 [IST]
Other articles published on Mar 10, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+